Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಚಿತ್ರದುರ್ಗ : ಮದುವೆಗೆ ಸಿದ್ಧವಾಗಿದ್ದ ವರನಿಗೆ ಪತ್ನಿ ಮದುವೆ ಮಂಟಪದಲ್ಲೇ ಚಪ್ಪಲಿಯಿಂದ ಹೊಡೆದ ಪತ್ನಿ.!

ಕರುನಾಡು ಘರ್ಜನೆ ಸುದ್ದಿ : ಚಿತ್ರದುರ್ಗ: ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಎರಡನೇ ಮದುವೆಗೆ ಸಿದ್ಧವಾಗಿದ್ದ ವರನಿಗೆ ಮೊದಲ ಪತ್ನಿ ಮದುವೆ ಮಂಟಪದಲ್ಲೇ ಚಪ್ಪಲಿಯಿಂದ ಏಟು ಕೊಟ್ಟ ಘಟನೆ ನಡೆದಿದೆ. ಈ ಘಟನೆಯಿಂದ ಮದುವೆ ಸ್ಥಳದಲ್ಲಿ ದೊಡ್ಡ ಹೈಡ್ರಾಮ ಸೃಷ್ಟಿಯಾಗಿದ್ದು,…

ಕರುನಾಡು ಘರ್ಜನೆ ಸುದ್ದಿ : ಚಿತ್ರದುರ್ಗ: ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಎರಡನೇ ಮದುವೆಗೆ ಸಿದ್ಧವಾಗಿದ್ದ ವರನಿಗೆ ಮೊದಲ ಪತ್ನಿ ಮದುವೆ ಮಂಟಪದಲ್ಲೇ ಚಪ್ಪಲಿಯಿಂದ ಏಟು ಕೊಟ್ಟ ಘಟನೆ ನಡೆದಿದೆ. ಈ ಘಟನೆಯಿಂದ ಮದುವೆ ಸ್ಥಳದಲ್ಲಿ ದೊಡ್ಡ ಹೈಡ್ರಾಮ ಸೃಷ್ಟಿಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

 

ಆರೋಪಿ ಕಾರ್ತಿಕ್ ನಾಯ್ಕ್, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ತಿಪ್ಪಘಟ್ಟದವನು, ನಾಲ್ಕು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ ತನುಜಾ ಎಂಬಾಕೆಯನ್ನು ಮದುವೆಯಾಗಿದ್ದ. ಆದರೆ, ಈ ಮದುವೆಯನ್ನು ಮರೆಮಾಚಿ ಕಾರ್ತಿಕ್ ಚಿತ್ರದುರ್ಗದಲ್ಲಿ ಎರಡನೇ ಮದುವೆಗೆ ರಹಸ್ಯ ಯೋಜನೆ ರೂಪಿಸಿದ್ದ. ವರದಕ್ಷಿಣೆಯ ಆಸೆಯಿಂದ ಈ ಕೃತ್ಯಕ್ಕೆ ಕೈಹಾಕಿದ್ದ ಎಂದು ಮಾಹಿತಿಗಳು ತಿಳಿಸಿವೆ.ಆದರೆ, ಕಾರ್ತಿಕ್‌ನ ಈ ಯೋಜನೆ ಮೊದಲ ಪತ್ನಿ ತನುಜಾಗೆ ಹೇಗೋ ತಿಳಿದುಬಂದಿತು. ಈ ವಿಷಯ ಗೊತ್ತಾದ ತನುಜಾ, ಕುಟುಂಬಸ್ಥರೊಂದಿಗೆ ಗಾಯತ್ರಿ ಕಲ್ಯಾಣ ಮಂಟಪಕ್ಕೆ ಧಾವಿಸಿ, ಮದುವೆ ಮಂಟಪದಲ್ಲಿ ಕಾರ್ತಿಕ್‌ಗೆ ಚಪ್ಪಲಿಯಿಂದ ಧರ್ಮದೇಟು ಕೊಟ್ಟಿದ್ದಾಳೆ. ಈ ಘಟನೆಯಿಂದಾಗಿ ಎರಡನೇ ಮದುವೆಗೆ ಬ್ರೇಕ್ ಬಿದ್ದಿದ್ದು, ಮದುವೆಗೆ ಸಿದ್ಧವಾಗಿದ್ದ ವಧುವಿನ ಕುಟುಂಬ ಆಘಾತಕ್ಕೆ ಒಳಗಾಗಿದೆ.

 

ಈ ಘಟನೆ ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯ ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ. ಕಾರ್ತಿಕ್‌ನ ಈ ಕೃತ್ಯವು ವರದಕ್ಷಿಣೆಯ ದುರಾಸೆಗೆ ಸಂಬಂಧಿಸಿದ್ದೇ ಎಂಬುದು ತನಿಖೆಯಿಂದ ದೃಢಪಡಲಿದೆ. ಈ ಘಟನೆಯಿಂದ ಸ್ಥಳೀಯ ಸಮಾಜದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವರದಕ್ಷಿಣೆಯಂತಹ ಸಾಮಾಜಿಕ ಕಳಂಕದ ವಿರುದ್ಧ ಕಠಿಣ ಕ್ರಮದ ಅಗತ್ಯವಿದೆ ಎಂಬ ಚರ್ಚೆ ಜೋರಾಗಿದೆ.

 

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Editor

Leave a comment