Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜಿ.ಪಂ. ಸಿಇಓ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ.

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 13: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಜಿಲ್ಲೆಯ ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು,   ಈ ಸಂದರ್ಭದಲ್ಲಿ…

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 13: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಜಿಲ್ಲೆಯ ರೋಣ ತಾಲೂಕಿನ ಅಸೂಟಿ, ಹೊಳೆಆಲೂರು, ಮೆಣಸಗಿ, ಅಮರಗೋಳ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು,

 

ಈ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮದ ಜಮೀನು,ಮನೆ, ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು. ಅಲ್ಲಿನ ಜನರ ಸ್ಥಿತಿಗತಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

 

ಸಂದರ್ಭಕ್ಕನುಸಾರ ಪ್ರವಾಹ ಪರಿಸ್ಥಿತಿಯನ್ನು ಅಧಿಕಾರಿ ಹಾಗೂ ಸಿಬ್ಬಂದಿಗಳ ಸ್ಥಳದಲ್ಲಿದ್ದು ಸಮರ್ಥವಾಗಿ ನಿರ್ವಹಣೆ ಮಾಡಬೇಕು. ಸಮಸ್ಯೆ ತಲೆದೂರಿದಲ್ಲಿ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು.

ಪ್ರವಾಹ ಹಾಗೂ ಅತೀವೃಷ್ಟಿಯಿಂದ ಜನ ಜಾನುವಾರುಗಳ ಜೀವ ರಕ್ಷಣೆಗೆ ಪ್ರಥಮಾಧ್ಯತೆ ನೀಡಬೇಕು. ನಂತರದಲ್ಲಿ ಸಾರ್ವಜನಿಕರ ಆಸ್ತಿ ರಕ್ಷಣೆಗೆ ಅಧಿಕಾರಿ ವರ್ಗ ಮುಂದಾಗಬೇಕು. ತಗ್ಗು ಪ್ರದೇಶಗಳಲ್ಲಿನ ಜನಸಾಮಾನ್ಯರು ಸಾಧ್ಯವಾದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳಲು ಸ್ಥಳೀಯ ಅಧಿಕಾರಿಗಳು ಸೂಚಿಸಬೇಕು. ಒಟ್ಟಾರೆ ಇಲಾಖಾಧಿಕಾರಿಗಳ ಸಮನ್ವಯದೊಂದಿಗೆ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಕರ್ತವ್ಯಪ್ರಜ್ಞೆ ಮೆರೆಯಬೇಕು ಎಂದು ಹೇಳಿದರು.

 

ಇದೇ ಸಂದರ್ಭದಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಅಬ್ಬಿಗೇರಿಯ ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

 

ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಇದ್ದರು.

 

Editor

Leave a comment