Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹಾನಗಲ್ l ಲೋಕೇಷನ್‌ ಸಮಸ್ಯೆಗೆ ಸಿಲುಕಿದ್ದ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಅಮನಾತು.!

ಕರುನಾಡು ಘರ್ಜನೆ ಸುದ್ದಿ : ಹಾವೇರಿ: ಸಮುದಾಯವೊಂದರ ಪ್ರಭಾವಿ ತಂಗಿದ್ದ ಸ್ಥಳದ ಬಗ್ಗೆ ಲೋಕೇಷನ್ ಸಮೇತ ಅನ್ಯರಿಗೆ ಮಾಹಿತಿ ಕೊಟ್ಟ ಆರೋಪದಡಿ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್‌. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.   ಲೋಕೇಷನ್‌ನಿಂದ ಸಮಸ್ಯೆಗೆ ಸಿಲುಕಿದ್ದ ಹಾನಗಲ್…

ಕರುನಾಡು ಘರ್ಜನೆ ಸುದ್ದಿ : ಹಾವೇರಿ: ಸಮುದಾಯವೊಂದರ ಪ್ರಭಾವಿ ತಂಗಿದ್ದ ಸ್ಥಳದ ಬಗ್ಗೆ ಲೋಕೇಷನ್ ಸಮೇತ ಅನ್ಯರಿಗೆ ಮಾಹಿತಿ ಕೊಟ್ಟ ಆರೋಪದಡಿ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್‌. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

 

ಲೋಕೇಷನ್‌ನಿಂದ ಸಮಸ್ಯೆಗೆ ಸಿಲುಕಿದ್ದ ಹಾನಗಲ್ ಪಟ್ಟಣದ ಪ್ರಭಾವಿ ನೀಡಿದ್ದ ಮಾಹಿತಿ ಅನ್ವಯ ಪ್ರಾಥಮಿಕ ತನಿಖೆ ನಡೆಸಿ ವರದಿ ಪಡೆದಿದ್ದ ದಾವಣಗೆರೆ ವಲಯದ ಐಜಿಪಿ ರವಿಕಾಂತೇಗೌಡ ಅವರು ಸಿಪಿಐ ಆಂಜನೇಯ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

 

ಐಜಿಪಿ ಆದೇಶ ಉಲ್ಲೇಖಿಸಿ ಮತ್ತೊಂದು ಆದೇಶ ಹೊರಡಿಸಿರುವ ಜಿಲ್ಲಾ ಎಸ್ಪಿ ಅಂಶುಕುಮಾರ, ‘ಸಿಪಿಐ ಆಂಜನೇಯ ಅವರನ್ನು ಜೂನ್ 15 ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರಿಂದ ತೆರುವಾದ ಸ್ಥಾನಕ್ಕೆ ಪ್ರಭಾರಿಯಾಗಿ ಶಿಗ್ಗಾವಿ ಸಿಪಿಐ ಅನಿಲ್‌ಕುಮಾರ ರಾಠೋಡ್‌ ಅವರನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.

 

ವಿರೋಧಿ ಗುಂಪಿಗೆ ಮಾಹಿತಿ: ‘ಅಪರಾಧ ಪ್ರಕರಣಗಳ ತನಿಖೆ ಸಂದರ್ಭದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಲೋಕೇಷನ್ (ನಿಖರ ಸ್ಥಳ) ತಿಳಿದುಕೊಳ್ಳುವ ಅವಕಾಶ ಪೊಲೀಸರಿಗಿದೆ. ಆದರೆ, ಸಿಪಿಐ ಆಂಜನೇಯ ಅವರು ಈ ಅವಕಾಶವನ್ನು ದುರುಪಯೋಗಪಡಿಸಿಕೊಂಡಿರುವುದು ಪ್ರಾಥಮಿಕ ವಿಚಾರಣೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

 

‘ಹಾನಗಲ್ ಪಟ್ಟಣ ನಿವಾಸಿಯಾದ ಪ್ರಭಾವಿ ಹಾಗೂ ಅವರ ವಿರೋಧಿ ಗುಂಪಿನವರ ನಡುವೆ, ಸಮುದಾಯದ ಸಂಘಟನೆಗೆ ಸಂಬಂಧಪಟ್ಟಂತೆ ವೈಮನಸ್ಸು ಏರ್ಪಟ್ಟಿತ್ತು. ಪ್ರಭಾವಿಗಾಗಿ ವಿರೋಧಿ ಬಣದವರು ಹುಡುಕಾಟ ನಡೆಸುತ್ತಿದ್ದರು. ವಿರೋಧಿ ಗುಂಪಿನವರ ಜೊತೆ ಒಡನಾಟ ಹೊಂದಿದ್ದ ಸಿಪಿಐ ಆಂಜನೇಯ, ಪ್ರಭಾವಿ ತಂಗಿದ್ದ ಲೋಕೇಷನ್ ಕೊಟ್ಟಿದ್ದರು. ಅದರ ಆಧಾರದಲ್ಲಿ ವಿರೋಧಿ ಗುಂಪಿನವರು, ಪ್ರಭಾವಿ ಇರುವ ಸ್ಥಳಕ್ಕೆ ಹೋಗಿದ್ದರು. ಅವರಿಂದ ತಪ್ಪಿಸಿಕೊಂಡಿದ್ದ ಪ್ರಭಾವಿ, ಪರಿಚಯಸ್ಥರ ಬಳಿ ವಿಷಯ ತಿಳಿಸಿದ್ದರು’ ಎಂದು ಹೇಳಿದರು.

Editor

Leave a comment