ಕರುನಾಡು ಘರ್ಜನೆ ಸುದ್ದಿ : 12-07-2025 ರಂದು ರಾಷ್ಟ್ರೀಯ ಲೋಕ ಅದಾಲತ್ ಗದಗ -27 , ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ , ಗೌರವಾನ್ವಿಕ ಕರ್ನಾಟಕ ಉಚ್ಚ ನ್ಯಾಯಾಲಯ , ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ , ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ದಿ : 12-07-2025 ರಂದು ರಾಷ್ಟ್ರೀಯ ಲೋಕ ಅದಾಲತ್
ಹಮ್ಮಿಕೊಂಡಿದ್ದು , ಸಾರ್ವಜನಿಕರು , ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ . ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು , ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ
ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ . ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ
ನಾಗವೇಣ ‘ ಅವರು ತಿಳಿಸಿದರು . ಗದಗ ಜಿಲ್ಲೆಯಲ್ಲಿ ಈಜಿ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20411 ವಿವಿಧ ಭಾಲ್ಕಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2280 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿ ಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ,
ಭೂಸ್ವಾಧೀನ ಪ್ರಕರಣಗಳು , ಬ್ಯಾಂಕ ವಸೂಲಾತಿ ಪ್ರಕರಣಗಳು , ದರಖಾಸ್ತು ಅರ್ಜಿಗಳು , ಕಾರ್ಮಿಕ ಪ್ರಕರಣಗಳು , ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು , ಚೆಕ್ ಬೌನ್ಸ್ ಪ್ರಕರಣಗಳು , ಮೋಟರ್ ವಾಹನ ಅಪಘಾತ ಪ್ರಕರಣಗಳು , ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ . ಪ್ರತಿದಿನ ರಾಜೀಗಾಗಿ
ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾರ್ಜಿ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು , ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು . ಕಕ್ಷಿದಾರರು ಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು , ಇಲಾಖೆಗಳವರು
ದಿ : 12-07-2025 ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪಾಲ್ಗೊಂಡು ರಾಜೀ HOQUES ಮೂಲಕ ಪರಿಹರಿಸಿಕೊಳ್ಳಲಾ ಇದೊಂದು ಸುವರ್ಣಾವಕಾಶವಾಗಿದೆ . ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಈ ಮೂಲಕ ಕಥೆ
ನೀಡಲಾಗಿದೆ . ಕಳೆದ ಮಾರ್ಚ್ -2025 ರಂದು ಜರುಗಿದ ಲೋಕ ಅದಾಲತ್ನಲ್ಲಿ 3749 ಚಾಲ್ತಿ ಪ್ರಕರಣಗಳನ್ನು ಹಾಗೂ 29199 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 32948 ಪ್ರಕರಣಗಳು , ರಾಜೀ ಮೂಲಕ ಇತ್ಯರ್ಥಪಡಿಸಿದೆ . ಇದರಲ್ಲಿ ವಿಶೇಷವಾಗಿ 19 ಕೌಟುಂಬಿಕ ಪ್ರಕರಣಗಳನ್ನು ಮನಃ ಒಂದುಗೂಡಿಸಿ ಕಳುಹಿಸಲಾಗಿದೆ . ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ
ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಈ ಮೂಲಕ ಕರೆ ನೀಡಲಾಗಿದೆ . ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ ಅವರು ಉಪಸ್ಥಿತರಿದ್ದರು . ಕರುನಾಡು ಘರ್ಜನೆ ಸುದ್ದಿ.