Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಮಲ್ಲಸಮುದ್ರ ರಸ್ತೆ‌ ನಿರ್ಮಾಣಕೆ ಗುದ್ದಲ್ಲಿ ಪೂಜೆ ಹಾಗೂ ಪೊಲೀಸ್ ಇಲಾಖೆಗೆ ಎರಡು ವಾಹನಗಳನ್ನು ಹಸ್ತಾಂತರ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ ಗದಗ ಜುಲೈ 5: ಮಲ್ಲಸಮುದ್ರದ ಪೋಲಿಸ್ ಮೀಸಲು ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯೂ ಗುಣಮಟ್ಟದಲ್ಲಿ ರಾಜ್ಯಕ್ಕೆ ಮಾದರಿ ಯಾಗುವಂತೆ ನಿರ್ಮಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ…

ಕರುನಾಡು ಘರ್ಜನೆ ಸುದ್ದಿ ಗದಗ ಜುಲೈ 5: ಮಲ್ಲಸಮುದ್ರದ ಪೋಲಿಸ್ ಮೀಸಲು ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯೂ ಗುಣಮಟ್ಟದಲ್ಲಿ ರಾಜ್ಯಕ್ಕೆ ಮಾದರಿ ಯಾಗುವಂತೆ ನಿರ್ಮಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಹೇಳಿದರು.

ಅವರು ಶನಿವಾರ ಪೋಲಿಸ್ ಇಲಾಖೆ ಆಯೋಜಿಸಿದ ಗದಗಿನ ಮಲ್ಲಸಮುದ್ರದ‌ ಪೋಲಿಸ್ ಮೀಸಲು ಕಚೇರಿ‌ ಮೈದಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಭೂಮಿ‌ಪೂಜೆ ನೆರವೇರಿಸಿ ಸಚಿವರು ಮಾತನಾಡಿದರು.

ಗದಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಥರ್ಡ ಐ ಯೋಜನೆ ಜಾರಿಗೊಳಿಸುವ ಮೂಲಕ ಜಿಲ್ಲಾಧ್ಯಂತ ಕಾನೂನು ಪಾಲನೆ ಉತ್ತಮ ಸ್ಥಿತಿಗೆ ಸಹಕಾರಿಯಾಗಿದೆ. ಸಾರ್ವಜನಿಕರು ನಿಯಮ ಪಾಲನೆ ಯೊಂದಿಗೆ ಅನೇಕ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ, ಅಲ್ಲದೆ ವಿವಿಧ ಅಪರಾಧ ಪ್ರಕರಣಗಳಡಿ ಪ್ರಕರಣ ಭೇದಿಸಲು ಸಹ ಪೋಲಿಸರಿಗೆ ಸಹಕಾರಿಯಾಗಿದೆ. ಆ ಮೂಲಕ ಪ್ರಕರಣಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಥರ್ಡ ಐ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಪೊಲೀಸ್ ಇಲಾಖೆಗೆ ಎರಡು ವಾಹನಗಳನ್ನು ಹಸ್ತಾಂತರಿಸಲಾಗಿದೆ ಒಂದು ವಾಹನವನ್ನು ರಾಜ್ಯ ಖನಿಜ ಅಭಿವೃದ್ಧಿ ನಿಗಮದಿಂದ ಹಾಗೂ ಇನ್ನೊಂದನ್ನು ಶಾಸಕ ಎಸ್ ವಿ ಸಂಕನೂರ‌ ಅವರು ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದಿಂದ ಒದಗಿಸಿರುವುದು ಇಲಾಖೆಗೆ ಸಹಕಾರಿಯಾಗಿದೆ ಎಂದರು.

ಜಿಲ್ಲಾ ಪೊಲೀಸ್ ಪರಿಷ್ಟಾಧಿಕಾರಿ ಬಿಎಸ್ ನೇಮಗೌಡ ಅವರು ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡುತ್ತಾ 1.6 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಒಂದು ಕೋಟಿ ಸ್ಥಳೀಯ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದಲ್ಲಿ 50 ಲಕ್ಷ ನೀಡುವ ಮೂಲಕ ರಸ್ತೆ ನಿರ್ವಾಣಕ್ಕೆ ಸಚಿವರಾದ ಎಚ್ ಕೆ ಪಾಟೀಲ್ ಅವರು ಅನುದಾನ ಒದಗಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು.

ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ‌ ಎಸ್ ಪಾಟೀಲ ಅವರು ನಿಗಮದಿಂದ ಒಂದು ವಾಹನ‌ ನೀಡಿರುತ್ತಾರೆ. ಮತ್ತು ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದ ಅಡಿ ವಿಧಾನ ಪರಿಷತ್ ಶಾಸಕರಾದ ಎಸ್ ವಿ ಸಂಕನೂರ ಅವರು ಇಲಾಖೆಗೆ ಒಂದು ವಾಹನ ಒದಗಿಸಿದ್ದು ಅವರಿಗೂ ಸಹ ಧನ್ಯವಾದಗಳು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿದ್ದ ಅಡೆತಡೆಗಳನ್ನು ನಿವಾರಿಸಿದ ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿಗಳಿಗೆ ಸಚಿವರು ಪೊಲೀಸ್ ಇಲಾಖೆಯಿಂದ ಅಭಿನಂದನಾ ಪತ್ರ ನೀಡುವ ಮೂಲಕ ಗೌರವಿಸಿದರು.

ಅಲ್ಲದೆ ರಸ್ತೆ ನಿರ್ಮಾಣಕ್ಕೆ ನಿವೇಶನ ಜಾಗ ಬಿಟ್ಟು ಕೊಡುವ ಮೂಲಕ ಸಹಕಾರ ನೀಡಿದ ಗಣ್ಯರಿಗೂ ಸಹ ಇದೇ ಸಂದರ್ಭದಲ್ಲಿ ಗೌರವ ಸಮರ್ಪಿಸಲಾಯಿತು.

ಈ ಸಂದರ್ಬದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ‌ ಎಸ್ ಪಾಟೀಲ, ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ ಎಸ್ ಶ್ರೀಧರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಉಪಸ್ಥಿತರಿದ್ದರು.

Editor

Leave a comment