Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಬೆಳಗಾವಿ l ಸುಪಾರಿ ಪಡೆದು ವಕೀಲರೊಬ್ಬರನ್ನು ಹತ್ಯೆ ಮಾಡಿದ 8 ಜನ ಆರೋಪಿಗಳು ಅರೆಸ್ಟ್.!

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ : ಆಸ್ತಿ ವಿಷಯವಾಗಿ ವಕೀಲರೊಬ್ಬರನ್ನು ಕೊಲೆ ಮಾಡಲು ಸುಪಾರಿ ಪಡೆದು ಅಪಹರಿಸಿ ಹತ್ಯೆ ಮಾಡಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ : ಆಸ್ತಿ ವಿಷಯವಾಗಿ ವಕೀಲರೊಬ್ಬರನ್ನು ಕೊಲೆ ಮಾಡಲು ಸುಪಾರಿ ಪಡೆದು ಅಪಹರಿಸಿ ಹತ್ಯೆ ಮಾಡಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 29ರಂದು ಸಂಜೆ 4 ಸವಸುದ್ದಿ ಗ್ರಾಮದ ವಕೀಲ ಸಂತೋಷ ಅಶೋಕ ಪಾಟೀಲ ಎಂಬುವವರನ್ನು ಕೋರ್ಟ್ ಗೆ ಹೋಗುತ್ತಿದ್ದ ವೇಳೆ ಕೆಲ ದುಷ್ಕರ್ಮಿಗಳು ಕಿಡ್ನಾಪ್ ಮಾಡಿದ್ದಾರೆ ಎಂದು ಮೃತರ ಪತ್ನಿ ರೇಖಾ ಪಾಟೀಲ ಅವರು ರಾಯಬಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸಂತೋಷ ಪಾಟೀಲ ಬೈಕ್ ನಲ್ಲಿ ರಾಯಬಾಗಕ್ಕೆ ಹೊರಡುತ್ತಿದ್ದಾಗ, ಕಾರಿನಲ್ಲಿ ಬಂದ ಆರೋಪಿಗಳು ಸಂತೋಷ್ ಅವರನ್ನು ತಡೆದು ಬಳಿಕ ಕಾರಿನಲ್ಲಿ ಕಿಡ್ನಾಪ್ ಮಾಡಿ ಅಲ್ಲಿಂದ ರಾಮನಗರ ಮೂಲಕ ಉತ್ತರ ಕನ್ನಡದ ಜೋಯಿಡಾ ತಾಲೂಕಿನ ಗಣೇಶಗುಡಿಗೆ ಕರೆದೊಯ್ದಿದ್ದರು.

ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಅದಾದ ಬಳಿಕ ಮೃತದೇಹದ ಗುರುತು ಪತ್ತೆಯಾಗದಂತೆ ಮೈಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದರು. ಇತ್ತ ಪತ್ನಿ ರೇಖಾ ನೀಡಿದ ದೂರಿನ ಮೇರೆಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಉದಯ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈ ವೇಳೆ ವಕೀಲ ಶಿವಗೌಡ ತನ್ನ ಸಹಚರರಿಗೆ 14 ಲಕ್ಷ ರೂ. ಸುಪಾರಿ ಆಮಿಷ ನೀಡಿ ಕೊಲೆ ನಡೆಸಿರುವುದು ಸ್ಪಷ್ಟವಾಗಿದೆ. ಕೊಲೆ ನಡೆಸಿದ ಸ್ಥಳದಲ್ಲಿ ಪತ್ತೆಯಾದ ಮೂಳೆಗಳ ಡಿಎನ್‌ಎ ಪರೀಕ್ಷೆಯಲ್ಲಿ, ಅವು ಸಂತೋಷ ಪಾಟೀಲ ಅವರದ್ದೇ ಎಂದು ದೃಢಪಟ್ಟಿದೆ.

ಇನ್ನು ಕೊಲೆಗಾಗಿ ಬಳಸಿದ ಮಾರಕಾಸ್ತ್ರ ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ನಡೆಸಿದವರಿಗೆ ಈಗಾಗಲೇ 11 ಲಕ್ಷ ರೂ. ನೀಡಲಾಗಿದ್ದು, ಉಳಿದ 3 ಲಕ್ಷವನ್ನು ಶೀಘ್ರ ನೀಡುವುದಾಗಿ ಶಿವಗೌಡ ಭರವಸೆ ನೀಡಿದ್ದಾಗಿ ಆರೋಪಿಗಳು ವಿಚಾರಣೆಯ ವೇಳೆ ಬಾಯ್ಬಿಟ್ಟಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲ ಶಿವಗೌಡ ಬಸಗೌಡ ಪಾಟೀಲ, ಭರತ ಕಲ್ಲಪ್ಪ ಕೋಳಿ, ಕಿರಣ ವಸಂತ ಕೆಂಪವಾಡೆ, ಸುರೇಶ ಭೀಮಪ್ಪ ನಂದಿ, ಉದಯಕುಮಾರ ಮುಶೆನ್ನವರ, ಸಂಜಯಕುಮಾರ ಹಳಬನ್ನವರ, ರಾಮು ದಂಡಾಪೂರೆ, ಮಂಜುನಾಥ ತಳವಾರ ಎಂಬುವರನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಲ್ಲದೇ 10 ಜನರ ಪೈಕಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಆರೋಪಿ ನಂ. 4 ಮಹಾವೀರ ಸುಭಾಸ ಹಂಜೆ ಹಾಗೂ ಆರೋಪಿ ನಂ.10 ನಾಗರಾಜ ಪರಸಪ್ಪ ನಾಯಕ ತಲೆಮರೆಸಿಕೊಂಡಿದ್ದು, ಇವರಿಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Editor

Leave a comment