ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಚಿಲಝರಿ ಗ್ರಾಮದ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ ಸದರಿ ಶಾಲಾ ಕೊಠಡಿಗಳ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಂಡು, ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಗದಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.