Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ವತಿಯಿಂದ ಮೂರು ದಿನದ ರಾಜ್ಯ ಹಾಗೂ ಜಿಲ್ಲಾ ಮಟ್ಟದಿಂದ ಆಹೋರಾತ್ರಿ ಧರಣಿ .

ಕರುನಾಡು ಘರ್ಜನೆ ಸುದ್ದಿ ಗದಗ: ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು , ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ , ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ , ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ…

ಕರುನಾಡು ಘರ್ಜನೆ ಸುದ್ದಿ ಗದಗ: ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು , ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ , ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ , ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬಂಧಿತ ಬೇಡಿಕೆಗಳಿಗೆ ಆಶಾ ಮೊದಲ , ಕರೆ , ಕೇಂದ್ರವಾಗಿದೆ . ಜನತೆಯ ಮತ್ತು ಸರ್ಕಾರದ ನಿರೀಕ್ಷೆಯಂತೆ ಆಶಾ ತನ್ನ ಸೇವೆಯಿಂದ ಕಟ್ಟಕಡೆಯ

ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು – ರಾತ್ರಿ ಶ್ರಮಿಸುತ್ತಿರುವರು . ಇವರ ಸೇವೆಗೆ ಸಮುದಾಯದಿಂದ ಸಿಗುವ ಗೌರವಾದರಗಳು ಸಂತಸ ನೀಡಿವೆಯಾದರೂ , ಸೇವೆ ಪಡೆದುಕೊಳ್ಳುವ ನಮ್ಮ ಸರ್ಕಾರಗಳು ಇವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಯಲ್ಲಿರುವಂತೆ ಮಾಡಿವೆ . ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ , ಇದೇ 2025 ಜನವರಿ 7 ರಿಂದ 10 ನೇ ತಾರೀಖಿನವರೆಗೆ ಆಶಾ ಕಾರ್ಯಕರ್ತೆಯರ , ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ನಡೆದಿದ್ದು ತಮಗೆ ತಿಳಿದಿದೆ . ರೂ .15,000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಈ

ಹೋರಾಟದಲ್ಲಿ ರಾಜ್ಯದ ಸುಮಾರು 10,000 ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು . ಜನವರಿ 10 , 2025 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ , ಮಾನ್ಯ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ಮಾಡಿರುತ್ತಾರೆ . ಈ ಸಭೆಯಲ್ಲಿ ನಮ್ಮೊಂದಿಗೆ ಮಾನ್ಯ ಆರೋಗ್ಯ ಮಂತ್ರಿಗಳು , ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು . ಈ ಕೆಳಗಿನಂತೆ ಸಭೆಯಲ್ಲಿ ತೀರ್ಮಾನಿಸಲಾಗಿತ್ತು ,

ಏಪ್ರಿಲ್ 2025 ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ .10,000 ಗಳ ಗೌರವಧನವನ್ನು ನೀಡಲಾಗುವುದು , ರೂ .10,000 ಹೊರತುಪಡಿಸಿ , ಕಾಂಬೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು , ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ , ಅಂತಹ ಆಶಾ ಕಾರ್ಯಕರ್ತೆಯರಿಗೆ , ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ , ರೂ . 10,000 ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು . ಈ ಕುರಿತು ಕೂಡಲೇ

ಸರ್ಕಾರದಿಂದ ಆದೇಶಿಸಬೇಕು . ಈ ವರ್ಷದ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ , ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು , ಎಂದು ಭರವಸೆ ನೀಡಲಾಗಿತ್ತು . ಅಂಗನವಾಡಿ , ಬಿಸಿಯೂಟ ಕಾರ್ಯಕರ್ತೆಯರಿಗೆ ರೂ .1000 ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೆ ರೂ .1000 ಹೆಚ್ಚಳ ಮಾಡಬೇಕು , ಆದರೆ ಈ ಬಜೆಟ್‌ನಲ್ಲಿ ಕೇವಲ 15004 ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ ಪ್ರೋತ್ಸಾಹಧನ ರೂ .1000 ಮಾತ್ರ ನೀಡಲಾಗಿದೆ . ಕೆಲವು

ಬಹುದಿನಗಳ ಬೇಡಿಕೆಗಳ ಬಗ್ಗೆ ಸೂಕ್ತಕ್ರಮ ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶಿಸಿರುತ್ತಾರೆ . ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಮಾನ್ಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್‌ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದರು . ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು . ಮಾಧ್ಯಮಗಳಲ್ಲೂ ಕೂಡ ಅಧಿಕವಾಗಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ , ಅಡಳಿತ ಪಕ್ಷದ ಹಲವಾರು ಸಚಿವರುಗಳು , ಶಾಸಕರು ಈ ಬಗ್ಗೆ ಪೋಸ್ಟಲ್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ . ಆದರೆ ನೋವಿನ ವಿಷಯವೆಂದರೆ ಇಲ್ಲಿಯವರಗೆ 7 ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ

ಆದೇಶ ಹೊರಬಿದ್ದಿಲ್ಲ . ಮತ್ತೊಂದೆಡೆ , ಆಶಾ ಕಾರ್ಯಕರ್ತೆಯರಿಗೆ , ಇತ್ತೀಚಿಗೆ ಇಲಾಖೆಯಿಂದ ಆತಂಕ ಮೂಡಿಸುವ ಕೆಳಗಿನ ಆದೇಶಗಳನ್ನು ಮಾಡಿರುವರು . ಆದರೆ ಸೂಕ್ತ ಪರಿಹಾರ ನೀಡಿರುವುದಿಲ್ಲ . 1). ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳಿಂದ 20 ಆಶಾಗಳಿಗೆ ಒಬ್ಬರಂತೆ ಸುಮರು 2000 ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧೀಡೀರನೆ ತೆಗೆದು ಹಾಕಿರುವರು . 2) 60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ . 17 ವರ್ಷದಿಂದ ಸೇವೆ ಮಾಡಿದ ಈ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವರು . 3) ಈಗ ಕಾರ್ಯ ನಿರ್ವಹಿಸುವ ಸುಮಾರು 41000 ಆಶಾಗಳಿಗೆ ಅವರ ಕೆಲಸದ ಳ್ಮೌಲ್ಯಮಾಪನ ಮಾಡುವ ಆದೇಶ ಹೊರಡಿಸಿ ವಿವಿಧ ರೀತಿಯಲ್ಲಿ ಮೌಲ್ಯಮಾಪನ ಮಾಡಿಸುತ್ತಿದ್ದಾರೆ .

ಮೌಲ್ಯಮಾಪನದ ಮಾದರಿಯನ್ನು ಸಂಘದಿಂದ ಸಂಪೂರ್ಣವಾಗಿ ವಿರೋಧಿಸುತ್ತೇವೆ . ಏಕೆಂದರೆ ಇಲ್ಲಿ 1) ಆಶಾ ಆನ್ಲೈನ್ ದಾಖಲಾತಿಯನ್ನು ( ಆಶಾ ಸಾಫ್ಟ್ ) ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ . ಈಗಾಗಲೇ ಈ ಆತ್ಮನ್ ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ , ವೆರಿಫೈ ಮಾಡದಿರುವ ಬಗ್ಗೆ , ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿಂದ ಹೋರಾಡುತ್ತಲೇ ಇದ್ದೇವೆ . ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ . ಈಗಾಗಲೇ ರಾಜ್ಯದ ಆಶಾಗಳು ಕೋಟ್ಯಂತರ ರೂ . ಗಳ ನಷ್ಟವನ್ನು ಈ ಆನ್ ದಾಖಲಾತಿಯಿಂದ ಅನುಭವಿಸುತ್ತಿರುವರು , ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕವನ್ನು ಅನುಭವಿಸುತ್ತಿರುವರು .

 

2 , ಜನಸಂಖ್ಯೆ ವಿಂಗಡಣೆಯು , ಈಗಾಗಲೇ ಅಲ್ಲಿಯ ಭೌಗೋಳಿಕರಣಕ್ಕೆ ತಕ್ಕಂತೆ ವಿಂಗಡಿಸಿದ್ದಾರೆ . ಮತ್ತಷ್ಟು ಜನಸಂಖ್ಯೆ ಹೆಚ್ಚಿಸಿದಲ್ಲಿ ಆಶಾಗಳಿಗೆ ಕಾರ್ಯನಿರ್ವಹಿಸಲು ತೊಂದರೆ ಆಗುತ್ತದೆ . 3-4 ಹಳ್ಳಿಗಳು ಬಂದರೆ ಕಾರ್ಯನಿರ್ವಹಿಸಲು ಕಷ್ಟವಾಗುತ್ತದೆ .

ಇದರಿಂದ ಆಶಾಗಳಿಗೆ ಆತಂಕ ಸೃಷ್ಟಿಯಾಗಿದೆ . ಮಾನ್ಯ ಮುಖ್ಯಮಂತ್ರಿಗಳು ಕಳೆದ 7 ತಿಂಗಳ ಹಿಂದೆ ತೀರ್ಮಾನಿಸಿ , ಘೋಷಿಸಿದ ಆದೇಶಗಳನ್ನು ಕೂಡಲೇ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ , ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ . ಈ ಮುಂದೆಯೂ ಆಶಾ ಕಾರ್ಯಕರ್ತೆಯರು ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿ ದಿನಾಂಕ : 12,13,14 ಆಗಸ್ಟ್ 2025 ಮೂರು ದಿನಗಳಂದು ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ “

ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು ” ಈ ಮೂಲಕ ಆಗ್ರಹಿಸಲು ಮುಂದಾಗಿರುವರು , ಹಾಗೆಯೇ ಎಂದಿನಂತೆ ಎಲ್ಲಾ ಆಶಾ ಕಾರ್ಯಕರ್ತೆಯರು ಹೋರಾಟದ ಯಶಸ್ಸಿಗೆ ಒಗ್ಗಟ್ಟಿನಿಂದ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಸಂಘದಿಂದ ಕರೆ ನೀಡುತ್ತೇವೆ . ವಂದನೆಗಳೊಂದಿಗೆ . ಹಕ್ಕೊತ್ತಾಯಗಳು 1) ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶ : ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ .10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು 2) 2025 ಮಾರ್ಚ್ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ . 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು .

3) ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ . ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು . 4) ಆವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು . 5) ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು .

6) ನಿವೃತ್ತ ಆರಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು . 7) ನಗರ ಆರಾಗಳಿಗೆ ರೂ .2000 ಗೌರವಧನ ಹೆಚ್ಚಿಸಬೇಕು . 8) 2025 ಜೂನ್ – ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು , ಇತ್ಯಾದಿ .. ಇಂದು ಪತ್ರಿಕಾಗೋಷ್ಠಿಯಲ್ಲಿ : ಆಶಾ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಜಿ. ಸುರೇಶ್‌ , ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಭಾಗ್ಯಜ್ಯೋತಿ ಹಡಪದ , ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ ಪೂಜಾ‌ರ , ಜಿಲ್ಲಾ ಉಪಾಧ್ಯಕ್ಷರು ಪ್ರೇಮ ಪಾಟೀಲ್. ರಮೀಜಾ ಆಲೂರು. ಮಂಜುಳಾ ಹೊಸೂರ್. ಅನ್ನಪೂರ್ಣ ಕಾಟವ. ಶಾಹಿನ ಇನ್ನು ಹಲವಾರು ಮುಖಂಡರು ಇದ್ದರು.

Editor

Leave a comment