ಕರುನಾಡು ಘರ್ಜನೆ ಸುದ್ದಿ ಮೈಸೂರು: ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಮೈಸೂರು ಜಿಲ್ಲಾ ಘಟಕದ ವತಿಯಿಂದ ಮಂಗಳವಾರದಂದು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಮೈಸೂರು ಜಿಲ್ಲಾ ಘಟಕದ 3ನೇ ವರ್ಷದ ವಾರ್ಷಿಕೋತ್ಸವ ಹಾಗೂ ಚಾಲಕರ ಸಮಾವೇಶ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ. ಚಲನಚಿತ್ರ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಗೌಡ ಹಾಗೂ ಚಲನಚಿತ್ರ ನಟರಾದ ದ್ರುವ ಸರ್ಜಾ, ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡರವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಚಾಲಕರಿಗೆ ಉಚಿತ ಸಮವಸ್ತ್ರಮತ್ತು ಚಾಲಕರ ಮಕ್ಕಳಿಗೆ ಶಾಲಾ ಸಾಮಗ್ರಿಗಳ ವಿತರಣೆ ಮಾಡುತ್ತಿದ್ದು.
ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕಾರ್ಯಕ್ರಮ ಕುರಿತು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕರಾದ ಎನ್ ಜಿ. ಸಂತೋಷ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಜು ಕನ್ನಡಿಗ, ಮೈಸೂರು ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ರವಿ ಹಾಗೂ ಮೈಸೂರು ಜಿಲ್ಲಾ ಮಾರ್ಗದರ್ಶಕರಾದ ಯಶೋಧ ಆರ್ ಕಾರ್ಯಕ್ರಮ ಕುರಿತು ಮಾತನಾಡಿದರು ಮೈಸೂರು ಜಿಲ್ಲಾ ಮಾರ್ಗದರ್ಶಕರಾದ ಯಶೋದ ಮಾತನಾಡಿ ಈ ಕಾರ್ಯಕ್ರಮವು ಕೇವಲ ಸಂಭ್ರಮದ ಕಾರ್ಯಕ್ರಮ ಮಾತ್ರವಲ್ಲದೆ ಚಾಲಕರಿಗಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳು, ವಾಹನ ಚಾಲನೆಯ ಸಮಯದಲ್ಲಿ ಅನುಕ್ರಮಿಸಬೇಕಾದ ಕಾನೂನಿನ ನಿಯಮಗಳ ಬಗ್ಗೆ ಅರಿವು ಮೂಡಿಸುವುದು ಪ್ರಮುಖವಾಗಿ ಅವರಿಗೆ ಬೇಕಾದಂತಹ ಆರೋಗ್ಯ ಮತ್ತು ಚಾಲಕರ ಮಕ್ಕಳಿಗೆ ಶಿಕ್ಷಣಕ್ಕೆ ಒತ್ತುಕೊಡಿಸುವಂತಹ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.