ಸ್ವಾತಂತ್ರ್ಯ ಹೂರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರ.
ಕರುನಾಡು ಘರ್ಜನೆ ಸುದ್ದಿ : ಗದಗ ಅಗಸ್ಟ 15 : ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ನುಡಿದರು.
ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಜರುಗಿದ 79 ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಶತಮಾನಗಳ ದಾಸ್ಯತ್ವವನ್ನು ಕಳಚಿ ಸ್ವತಂತ್ರವಾದ ಭಾರತ, ತನ್ನ 78 ವರ್ಷಗಳನ್ನು ಪೂರ್ಣಗೊಳಿಸಿ, ಇಂದು 79ರಲ್ಲಿ ಪಾದಾರ್ಪಣೆ ಮಾಡುತ್ತಿದೆ. ರಾಷ್ಟçಪಿತ ಮಹಾತ್ಮ ಗಾಂಧೀಜಿಯವರು ತೋರಿದ ವಿನೂತನವಾದ ಸತ್ಯ ಅಹಿಂಸೆ ಎಂಬ ಅಸ್ತçಗಳನ್ನು ಹಿಡಿದು ಸತ್ಯಾಗ್ರಹ ಮಾರ್ಗದಿಂದ ಬ್ರಿಟೀಷ್ ಆಡಳಿತದ ವಿರುದ್ಧ ನಮ್ಮ ಹಿರಿಯರು ಹೋರಾಡಿದರು. ಅಸಂಖ್ಯಾತ ಭಾರತೀಯರು ಮಾಡಿದ ತ್ಯಾಗ ಬಲಿದಾನದಿಂದಾಗಿ ದೇಶವನ್ನು ಗುಲಾಮಗಿರಿಯ ಸಂಕೋಲೆಯಿAದ ಮುಕ್ತಗೊಳಿಸಿದರು. ನಮ್ಮ ಸ್ವಾತಂತ್ರ÷್ಯ ಸೇನಾನಿಗಳ ತ್ಯಾಗ, ಬಲಿದಾನ, ಶ್ರಮ, ಸಮರ್ಪಣಭಾವ, ದೇಶಪ್ರೇಮದ ಫಲವಾಗಿ ಇಂದು ಸ್ವಾಂತAತ್ರ÷್ಯ ಸುಖ ಅನುಭವಿಸುತ್ತಿದ್ದೇವೆ. ಸತ್ಯಾಗ್ರಹವು ಸ್ವಾತಂತ್ರ÷್ಯ ಸಂಗ್ರಾಮ ಮತ್ತು ತದನಂತರ ಸ್ವಾತಂತ್ರೋತ್ತರ ಭಾರತದಲ್ಲಿ ಪ್ರಭಲ ಅಸ್ತçವಾಗಿ ಪರಿಣಮಿಸಿ ಅನೇಕ ಆಂದೋಲನ ಮತ್ತು ಚಳವಳಿಗಳಿಗೆ ಯಶ ತಂದುಕೊಡುವಲ್ಲಿ ಪರಿಣಾಮಕಾರಿಯಾದÀ ಪಾತ್ರ ನಿಭಾಯಿಸುತ್ತಿದೆ ಎಂದು ತಿಳಿಸಿದರು.
ನಮ್ಮ ದೇಶಕ್ಕೆ ನಮ್ಮದೇ ಆಡಳಿತ ಮತ್ತು ಸಂಪೂರ್ಣ ಸ್ವಾತಂತ್ರ್ಯಕ್ಕಾಗಿ ಭಾರತದ ರಾಷ್ಟ್ರೀಯ ಕಾಂಗ್ರೆಸ್ಸು ಹುಟ್ಟಿಕೊಂಡಿತು. ಲೋಕಮಾನ್ಯ ತಿಲಕ, ಮಹಾತ್ಮಾ ಗಾಂಧೀಜಿ, ನೆಹರೂ, ಸುಭಾಷಚಂದ್ರ ಬೋಸ್, ವಲ್ಲಭಭಾಯಿ ಪಟೇಲ, ಮೌಲಾನಾ ಅಬ್ದುಲ್ಲಾಂ ಆಝಾದ, ದಾದಾಬಾಯಿ ನವರೋಜಿ ಅವರಂಥ ನೂರಾರು ನಾಯಕರು ಹಾಗೂ ಹೋರಾಟಗಾರರ ಹೋರಾಟದ ಪರಿಣಾಮವಾಗಿ, ಸತ್ಯ, ಶಾಂತಿ ಹಾಗೂ ಅಹಿಂಸಾತ್ಮಕ ಹೋರಾಟದ ಮೂಲಕ ಭಾರತ 1947 ರ ಆಗಸ್ಟ್ 15 ರಂದು ಸ್ವತಂತ್ರವಾಯಿತು ಎಂದು ಹೇಳಿದರು.
ಈ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿಯವರು, ನನಗೆ ಸ್ವಾತಂತ್ರದ ದಾಹವಿದೆಯೇ ವಿನಃ ಅಧಿಕಾರದ ದಾಹವಿಲ್ಲ. ನಾನು ಪರಿಶುದ್ಧವಾದ ಅಹಿಂಸೆಯಲ್ಲಿ ನಂಬಿಕೆ ಇಟ್ಟಿದ್ದೇನೆ. ನಮ್ಮ ವಿರೋಧ ಇರುವುದು ಬ್ರಿಟಿಷರ ಪ್ರಭುತ್ವದೊಂದಿಗೆ, ನಾವು ನಮ್ಮ ದೇಶವನ್ನು ನೋಡಿಕೊಳ್ಳಲು ಸಮರ್ಥರಾಗಿದ್ದೇವೆ. “ ಬ್ರಿಟಿಷರೇ ನೀವು ಕೂಡಲೇ ಭಾರತ ಬಿಟ್ಟು ತೊಲಗಿ” ಎಂದು ಕರೆ ನೀಡಿದರು. ಇದಲ್ಲದೆ, ಭಾರತೀಯರು ದೇಶದ ಸ್ವಾತಂತ್ರ÷್ಯಕ್ಕಾಗಿ ಸರ್ವ ತ್ಯಾಗಕ್ಕೂ ಸಿದ್ಧರಾಗಬೇಕೆಂದು ತಿಳಿಸಿ, ಮಾಡು ಇಲ್ಲವೆ ಮಡಿ ಎಂದು 1942 ರ ಆಗಸ್ಟ್ 8 ರಂದು ಮುಂಬೈಯಲ್ಲಿ ಈ ಕರೆ ನೀಡಿದ ಮಹಾತ್ಮಾ ಗಾಂಧಿ, ಆಗಷ್ಟ 9 ಕ್ಕೆ ಬಂಧನಕ್ಕೊಳಗಾದರು. ಈ ಘಟನೆ, ಇಡೀ ದೇಶದಲ್ಲಿ ಸಂಚಲನವುAಟು ಮಾಡಿತು, ಹೋರಾಟ ಮತ್ತಷ್ಟು ತೀವ್ರಗೊಂಡಿತು ಎಂದರು.
ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ಚಳುವಳಿಯ ಇತಿಹಾಸ ರೋಚಕವಾಗಿದೆ. ಗದಗ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ 1857 ರಿಂದಲೇ ಆರಂಭಗೊಳ್ಳುತ್ತದೆ. ನರಗುಂದದ ಬಾಬಾಸಾಹೇಬ, ಮುಂಡರಗಿಯ ಭೀಮರಾವ್, ಡಂಬಳದ ಕೆಂಚನಗೌಡ, ಅನಂತರಾವ್ ಜಾಲಿಹಾಳ, ಡಾ. ವಾಸುದೇವರಾವ್ ಉಮಚಗಿ, ಬೆಟಗೇರಿಯ ತ್ರಿಮಲ್ಲೇ, ಮಳೇಕರ, ಜಯರಾಮಾಚಾರ್ಯ ಮಳಗಿ, ಡಂಬಳದ ಶ್ರೀನಿವಾಸರಾವ್ ಕಳ್ಳಿ, ತಿಪ್ಪಣ್ಣ ಶಾಸ್ತ್ರೀ, ಅಂದಾನಪ್ಪ ದೊಡ್ಡಮೇಟಿ, ಕೌತಾಳ ವೀರಪ್ಪ, ಕೆ.ಎಚ್.ಪಾಟೀಲರು ಸೇರಿ ಅಸಂಖ್ಯ ಸ್ವಾತಂತ್ರ್ಯ ಸೇನಾನಿಗಳ ಹೋರಾಟ ಅವಿಸ್ಮರಣೀಯ. ಡಾ.ಬಿ.ಜಿ.ಹುಲಗಿ, ಶಂಕ್ರಪ್ಪ ಗುಡ್ಡದ, ಇಸ್ಮಾಯಿಲ ಸಾಹೇಬ, ಕಲ್ಲೂರ ರಾಮಚಾರಿ, ವೆಂಕಟೇಶ ಮಾಗಡಿ, ಕೋಗನೂರ ನಿಂಗಪ್ಪ ಮೊದಲಾದವರು ಬ್ರಿಟೀಷರನ್ನು ಎದುರಿಸಿ ಕಠಿಣಶಿಕ್ಷೆ ಅನುಭವಿಸಿದರು ಎಂದರು.
1916 ರಲ್ಲಿ ಬಾಲಗಂಗಾಧರ ತಿಲಕರು ಗದಗಿಗೆ ಭೇಟಿ ನೀಡಿದಾಗ ಆಗ ಆರಂಭಿಕ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಅನಂತರಾವ ಜಾಲಿಹಾಳ, ಡಾ.ವೆಂಕಟರಾವ ಹುಯಿಲಗೋಳ, ಡಾ.ವಾಸುದೇವ ಉಮಚಗಿ ಮುಂತಾದವರು ಈ ಭಾಗದಲ್ಲಿ ರಾಷ್ಟ್ರೀಯ ಚಳುವಳಿಯ ನೇತೃತ್ವ ವಹಿಸಿದರು. 1920 ರಲ್ಲಿ ಮಹಾತ್ಮಾ ಗಾಂಧೀಜಿಯವರು ಗದುಗಿಗೆ ಭೇಟಿ ನೀಡಿದಾಗ ಜನರಲ್ಲಿ ರಾಷ್ಟಿçÃಯ ಮನೋಭಾವನೆ ಮತ್ತು ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಂಡಿತು. ಈ ಎಲ್ಲ ಮಹಾನ ನಾಯಕರಿಗೆ ಸಹಸ್ರ ನಮನಗಳನ್ನು ಸಲ್ಲಿಸೋಣ ಎಂದು ತಿಳಿಸಿದರು.
ಸ್ವಾತಂತ್ರ÷್ಯದ ನಂತರ, ಭಾರತಕ್ಕೆ ಹಲವಾರು ಸೌಕರ್ಯಗಳ ಕೊರತೆಗಳು ಕಾಡಿದ್ದವು. ಅದರಲ್ಲಿ ವಿಶೇಷವಾಗಿ ಕೃಷಿ, ಕೈಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಮೂಲ ಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಸಾಧಿಸುವ ಸವಾಲನ್ನು ಎದುರಿಸಿ, ಭಾರತವನ್ನು ಕಟ್ಟುತ್ತಾ ಕಟ್ಟುತ್ತಾ ಸಾಗಿ ಜಗತ್ತಿನಲ್ಲಿ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ. ಬಲಿಷ್ಠ ಮತ್ತು ಶ್ರೀಮಂತ ರಾಷ್ಟçಗಳ ಪೈಪೋಟಿಯನ್ನು ಎದುರಿಸಿ ಪ್ರಪಂಚವೇ ಭಾರತವನ್ನು ಗುರುತಿಸುವಂತೆ ಸಾಧನೆಯನ್ನು ಮಾಡಲಾಗಿದೆ. ಅದರಲ್ಲಿ ಮೊದಲ ಪರಮಾಣು ರಿಯಾಕ್ಷನ್ ರಚನೆ ಮತ್ತು ಚಂದ್ರಯಾನದAತಹ ಯಶಸ್ಸು ನಾವು ಅಭಿಮಾನ ಪಡುವಂತಾಗಿದೆ. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭನೆಯನ್ನು ಸಾಧಿಸಿ, ಹಸಿರು ಕ್ರಾಂತಿಯನ್ನು ಮಾಡಿ ಆಹಾರ ಭದ್ರತೆಯ ಸವಾಲುಗಳನ್ನು ಮೆಟ್ಟಿ ನಿಂತಿದೆ. ಭಾರತ ಇಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ | ( Information and Bio technology ) & software ಉದ್ಯಮದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಸಾವಿರ ಸಾವಿರ ಶಾಲಾ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ ಭಾರತೀಯರನ್ನು ವಿದ್ಯಾವಂತರನ್ನಾಗಿ, ಪರಿಣಿತರನ್ನಾಗಿ ರೂಪಿಸಲು ಮಹತ್ವದ ಹೆಜ್ಜೆಯನ್ನು ಇರಿಸಿದೆ.
ಸಿವಿಲ್ ಪ್ರಕರಣಗಳಲ್ಲಿ ರಾಜಿಸಂಧಾನ ಕಡ್ಡಾಯಗೊಳಿಸಿ , ಶೀಘ್ರ ನ್ಯಾಯದಾನಕ್ಕೆ ದಿಟ್ಟ ಹೆಜ್ಜೆಯನ್ನಿಟ್ಟು , ಕರ್ನಾಟಕದಲ್ಲಿ ನ್ಯಾಯಕ್ಕಾಗಿ ಕಕ್ಷಿದಾರರು ದಶಕಗಟ್ಟಲೆ ಕಾಯುವುದಕ್ಕೆ ಮುಕ್ತಿ ನೀಡಲಾಗಿದೆ. ಈ ತಿದ್ದುಪಡಿಯು ತಕ್ಷಣದಿಂದ ಕರ್ನಾಟಕದಲ್ಲಿ ಜಾರಿಗೆ ಬಂದಿದೆ. ಕೋರ್ಟಿಗೆ ದಾಖಲಾದ ಪ್ರಕರಣವು ಕೇವಲ 24 ತಿಂಗಳುಗಳಲ್ಲಿ ತಾರ್ಕಿಕ ಅಂತ್ಯವನ್ನು ಕಂಡು ಶೀಘ್ರವಾಗಿ ನ್ಯಾಯ ತಿರ್ಮಾನವಾಗುವ ವ್ಯವಸ್ಥೆ ಜಾರಿಯಿಂದ ಒಂದು ಕ್ರಾಂತಿಕಾರಕ ಬದಲಾವಣೆಯನ್ನು ಕಾಣಲಿದೆ.
ಮೈಸೂರು ಸಂಸ್ಥಾನ ಬಾಂಬೆ ಮತ್ತು ಮದ್ರಾಸ್ ಪ್ರಾಂತ್ಯಗಳು, ಹೈದ್ರಾಬಾದ್ ಪ್ರಾಂತ್ಯಗಳ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಂದುಗೂಡಿಸಿ, ಕರ್ನಾಟಕ ಏಕೀಕರಣ ಮಾಡಲಾಯಿತು. ಕರ್ನಾಟಕ ರಾಜ್ಯವನ್ನು ಆರ್ಥಿಕ ಅಭಿವೃದ್ಧಿಯೆಡೆಗೆ ಕೊಂಡೊಯ್ದು ಹಲವಾರು ಕೈಗಾರಿಕೆಗಳ ಸ್ಥಾಪನೆಗೆ ನಾಂದಿ ಹಾಡಿ ಭಾರತೀಯ ವಿಜ್ಞಾನ ಸಂಸ್ಥೆ, ಹಿಂದೂಸ್ಥಾನ ಏರೋನಾಟಿಕ್ಸ್ ಲಿಮಿಟೆಡ್, ಇಂಡಿಯನ್ ಟೆಲಿಫೋನ್ ಇಂಡಸ್ಟಿçಗಳ ಸ್ಥಾಪನೆ ರಾಜ್ಯದ ಆರ್ಥಿಕ ಉತ್ತೇಜನಕ್ಕೆ ಕಾರಣವಾಯಿತು. ಅಭಿವೃದ್ಧಿಯ ಫಲಿತಾಂಶಗಳು ಎಲ್ಲರಿಗೂ ಸಮಾನವಾಗಿ ತಲುಪುವಂತೆ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಣೆ ಮಾಡಲು ಮಹತ್ವದ ಹೆಜ್ಜೆಯನ್ನು ಇಡಲಾಯಿತು. ರಸ್ತೆಗಳು, ಸೇತುವೆಗಳು, ಪ್ರಮುಖ ನೀರಾವರಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ವೇಗವಾಗಿ ನಡೆದಿದೆ.
ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಅಭಿವೃದ್ಧಿಯ ಹರಿಕಾರ ಹಸಿವು ಮುಕ್ತ ಕರ್ನಾಟಕ ಮಾಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಿದ್ದು 15-12-2024 ರಂದು ಗದಗ ಜಿಲ್ಲೆಯ ರೋಣ ಪಟ್ಟಣಕ್ಕೆ ಆಗಮಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಲಕ್ಕುಂಡಿಗೆ 03-06-2025 ರಂದು ಆಗಮಿಸಿ ನಮ್ಮ ಹೆಮ್ಮೆಯ ಇತಿಹಾಸ, ಸಂಸ್ಕöÈತಿ ಪ್ರತೀಕವಾದ ಲಕ್ಕುಂಡಿಯಲ್ಲಿ ಉತ್ಪನನಕ್ಕೆ ಚಾಲನೆ ನೀಡಿದ್ದಾರೆ.
ಬಡವರನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯಕ್ರಮ
2023ರಲ್ಲಿ ಜನತೆಯ ಆಶೀರ್ವಾದದಿಂದ ನಮ್ಮ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದ ನಂತರ, ದಕ್ಷ, ಜನಪರ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ. ಬಡವರ, ಅವಕಾಶ ವಂಚಿತರ, ಶೋಷಣೆಗೆ ಒಳಗಾದವರ ಪರ ಗಟ್ಟಿಯಾಗಿ ನಿಂತು ಸಾಮಾಜಿಕ, ಆರ್ಥಿಕ, ನ್ಯಾಯ ನೀಡುವ, ನಾಡಿನ ಜನತೆಯ ದೈನಂದಿನ ಬವಣೆಗಳನ್ನು ನೀಗಿಸಲು 5 ಗ್ಯಾರಂಟಿಗಳನ್ನು ಜನತೆಗೆ ಕೊಡಮಾಡಿದೆ. ಗೃಹಲಕ್ಷಿ÷್ಮ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿಯಂತಹ ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಕೀರ್ತಿ ಶ್ರೀ ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ.
ಗೃಹಲಕ್ಷಿ÷್ಮ ಸಹಾಯಧನ, ಎಲ್ಲರ ಮನೆಗಳನ್ನು ಬೆಳಗುವ ಗೃಹ ಜ್ಯೋತಿ ಕಾರ್ಯಕ್ರಮ , ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ, ಹಸಿವು ಮುಕ್ತ ರಾಜ್ಯದ ಕಲ್ಪನೆಯ ಭಾಗವಾಗಿ ನೀಡಲಾದ ಅನ್ನಭಾಗ್ಯ, ನಿರುದ್ಯೋಗಿ ಯುವಕರ ಆಶಾಕಿರಣ ಯುವನಿಧಿ ಯೋಜನೆಗಳು, ಜನರ ಮನ ಮನೆ ಮುಟ್ಟಿವೆ. 5 ಗ್ಯಾರಂಟಿಗಳನ್ನು ಗದಗ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನುಡಿದರು.
ಉಪಸ್ಥಿತಿ: ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ಅರಣ್ಯ ವಸತಿ ವಿಹಾರ ಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಂಕಿಮಠ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರುಗಳು, ಸಾರ್ವಜನಿಕರು, ಅಪಾರ ಸಂಖ್ಯೆಯಲ್ಲಿ ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.