ಕರುನಾಡು ಘರ್ಜನೆ ಸುದ್ದಿ: ವಿಜಯಪುರ: ಆಟ ಆಡುತ್ತಿದ್ದಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿರೋ ಎರಡು ವರ್ಷದ ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸಾತ್ವಿಕ್ ಮುಜಗೊಂಡ ಎಂಬ ಬಾಲಕನು 16 ಅಡಿ ಆಳದ ಕೊಳವೆ ಬಾವಿಯಲ್ಲಿ ಬಿದ್ದಿದ್ದಾನೆ. ಈ ಘಟನೆ ನಡೆದಿದ್ದು ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನಲ್ಲಿ.ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು ಇನ್ನು, ಈ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಜೊತೆಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿ ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಕೊಳವೆ ಬಾವಿಯಲ್ಲಿ ಬಿದ್ದ ಬಾಲಕನನ್ನು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದರ ಜೊತೆಗೆ ಆಕ್ಸಿಜನ್ ಪೂರೈಕೆಗೆ ಪ್ರಯತ್ನ ನಡೆಸಲಾಗುತ್ತಿದೆ.ಇನ್ನು ಮಗು ಆಟ ಆಡುತ್ತಿದ್ದಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದ ವಿಷಯ ತಿಳಿದ ಕೂಡಲೇ ಇಡೀ ಗ್ರಾಮಸ್ಥರು ದೌಡಾಯಿಸಿದ್ದಾರೆ. ಇನ್ನು ಬಾಲಕನ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ
ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ..!
ಕರುನಾಡು ಘರ್ಜನೆ ಸುದ್ದಿ: ವಿಜಯಪುರ: ಆಟ ಆಡುತ್ತಿದ್ದಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿರೋ ಎರಡು ವರ್ಷದ ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸಾತ್ವಿಕ್ ಮುಜಗೊಂಡ ಎಂಬ ಬಾಲಕನು 16 ಅಡಿ ಆಳದ ಕೊಳವೆ ಬಾವಿಯಲ್ಲಿ ಬಿದ್ದಿದ್ದಾನೆ. ಈ ಘಟನೆ…