Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ. ಜನರ ಸಮಸ್ಯೆ ಆಲಿಸುವಾಗ ವ್ಯಕ್ತಿಯಿಂದ ಹಲ್ಲೆ

ಕರುನಾಡು ಘರ್ಜನೆ ಸುದ್ದಿ ನವದೆಹಲಿ: ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸುತ್ತಿರುವಾಗ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಸದ್ಯ ಈ ಸಂಬಂಧ ವ್ಯಕ್ತಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಿದ…

ಕರುನಾಡು ಘರ್ಜನೆ ಸುದ್ದಿ ನವದೆಹಲಿ: ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸುತ್ತಿರುವಾಗ ದೆಹಲಿ ಸಿಎಂ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಸದ್ಯ ಈ ಸಂಬಂಧ ವ್ಯಕ್ತಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಿಎಂ ರೇಖಾ ಗುಪ್ತಾ ಅವರಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ ರಾಜೇಶ್ ಭಾಯಿ ಖಿಮ್ಜಿ ಭಾಯಿ ಸಕರಿಯಾ (41) ಎಂದು ಗುರುತಿಸಲಾಗಿದೆ. ಆರೋಪಿ ರಾಜಸ್ತಾನ್ನ ರಾಜ್ಕೋಟ್ ಮೂಲದ ನಿವಾಸಿ ಎಂದು ಪೊಲೀಸರ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ವ್ಯಕ್ತಿಯನ್ನ ಕಸ್ಟಡಿಯಲ್ಲಿ ಇರಿಸಲಾಗಿದೆ. ಸಿಎಂ ಮೇಲೆಯೇ ಹಲ್ಲೆ ಮಾಡಿರುವುದರಿಂದ ಇದರ ಹಿಂದಿನ ಉದ್ದೇಶ ಏನು ಎಂದು ತಿಳಿಯಲು ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

 

ದೆಹಲಿಯ ಸಿವಿಲ್ ಲೈಸೆನ್ಸ್ನಲ್ಲಿ ಇರುವಂತಹ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಾಪ್ತಾಹಿಕ ಜನ್ ಸುನ್ವಿ ಕಾರ್ಯಕ್ರಮದಲ್ಲಿ ಸಿಎಂ ರೇಖಾ ಗುಪ್ತಾ ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ರಾಜೇಶ್ ಭಾಯಿ, ತನ್ನ ಸಂಬಂಧಿಯೊಬ್ಬರು ಜೈಲಿನಲ್ಲಿದ್ದು ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಬೇಕು ಎಂದು ಅರ್ಜಿ ತಂದಿದ್ದನು. ಆದರೆ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದು ಹೇಳಲಾಗಿದೆ.ಜನ್ ಸುನ್ವಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಹೇಳುವಂತೆ, 30 ರಿಂದ 40 ವರ್ಷದ ವ್ಯಕ್ತಿ ಒಬ್ಬರು ಕೆಲವು ಕಾಗದಗಳನ್ನು ಸಿಎಂ ರೇಖಾ ಗುಪ್ತ ಕೈಗೆ ಕೊಟ್ಟು ಜೋರಾಗಿ ಮಾತನಾಡಿ ಕೂಗಾಡಿದನು. ತಕ್ಷಣ ಸಿಎಂ ಮೇಲೆ ಕಪಾಳಮೋಕ್ಷ ಮಾಡಿದನು. ಇದರಿಂದ ಕೆಲವು ಜನರು ಅವನನ್ನ ಥಳಿಸಿದ್ದಾರೆ. ಬಳಿಕ ಆರೋಪಿನ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಎಂದು ಹೇಳಿದ್ದಾರೆ.

 

ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಆತನ ನೀಡಿದ ಹೆಸರು ಹಾಗೂ ವಿಳಾಸ ಎರಡನ್ನು ಪರಿಶೀಲನೆ ಮಾಡುವಂತೆ ಗುಜರಾತ್ ಪೊಲೀಸರನ್ನು ದೆಹಲಿ ಪೊಲೀಸರು ಸಂಪರ್ಕ ಮಾಡಿದ್ದಾರೆ. ಬಿಜೆಪಿಯ ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್‌ದೇವ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಅವರು ರೇಖಾ ಗುಪ್ತಾ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

Editor

Leave a comment