Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ರೌಡಿಶೀಟರ್ ಭೀಮನಗೌಡ ಮೇಲೆ ಗುಂಡಿನ ದಾಳಿ..!

ಕರುನಾಡು ಘರ್ಜನೆ ಸುದ್ದಿ ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಭಯದ ವಾತಾವರಣ ಮೂಡಿಸಿದೆ. ರೌಡಿಶೀಟರ್ ಭೀಮನಗೌಡ ಬಿರಾದಾರ್ ಮೇಲೆ 3-4 ಮುಸುಕುದಾರಿಗಳು ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ. ಈ ಘಟನೆಯು ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ…

ಕರುನಾಡು ಘರ್ಜನೆ ಸುದ್ದಿ ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಭಯದ ವಾತಾವರಣ ಮೂಡಿಸಿದೆ. ರೌಡಿಶೀಟರ್ ಭೀಮನಗೌಡ ಬಿರಾದಾರ್ ಮೇಲೆ 3-4 ಮುಸುಕುದಾರಿಗಳು ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದಾರೆ. ಈ ಘಟನೆಯು ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.

 

ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಬಂಟನಾಗಿರುವ ಭೀಮನಗೌಡ ಬಿರಾದಾರ್ ಮೇಲೆ 3 ಸುತ್ತಿನ ಗುಂಡಿನ ದಾಳಿ ಮಾಡಲಾಗಿದೆ. ಇದರಿಂದ ಭೀಮನಗೌಡನ ತಲೆ ಹಾಗೂ ಎದೆಗೆ ಗುಂಡುಗಳು ತಗುಲಿವೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ನಲ್ಲಿ ರೌಡಿಶೀಟರ್ ಭೀಮನಗೌಡ ಕಟಿಂಗ್ ಮಾಡಿಸುತ್ತಿದ್ದನು. ಈ ವೇಳೆ ಮೂರು-ನಾಲ್ಕು ಜನ, ಗುರುತು ಸಿಗದಂತೆ ಕಾಣಲು ಮುಸುಕು ಹಾಕಿಕೊಂಡು ಎಂಟ್ರಿಕೊಟ್ಟಿದ್ದಾರೆ. ಕಟಿಂಗ್ ಮಾಡುವವನ ಕಣ್ಣಿಗೆ ಖಾರದ ಪುಡಿ ಎರಚಿ ಕೂಡಲೇ ಭೀಮನಗೌಡ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಭೀಮನಗೌಡ ಗಂಭೀರವಾಗಿ ಗಾಯಗೊಂಡಿದ್ದಾನೆ.

 

ದಾಳಿ ಮಾಡಿರುವ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಗುಂಡಿನ ದಾಳಿ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ಧಂತೆ ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

Editor

Leave a comment