Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

 ಗದಗ | ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ ಎಐಡಿಎಸ್ಓ ವಿದ್ಯಾರ್ಥಿಗಳು.

ಕರುನಾಡು ಘರ್ಜನೆ ಸುದ್ದಿ ಗದಗ | ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ ಎಐಡಿಎಸ್ಓ ವಿದ್ಯಾರ್ಥಿಗಳು. ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಸರ್ಕಾರಿ ಪದವಿ ಕಾಲೇಜು…

ಕರುನಾಡು ಘರ್ಜನೆ ಸುದ್ದಿ ಗದಗ | ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ ಎಐಡಿಎಸ್ಓ ವಿದ್ಯಾರ್ಥಿಗಳು.

ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಸರ್ಕಾರಿ ಪದವಿ ಕಾಲೇಜು ಗದಗ ಬೆಟಗೇರಿ ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

 

ಎಐಡಿಎಸ್ಓ ಜಿಲ್ಲಾ ಸಂಚಾಲಕರಾದ ಶಾಂತಿ ಅವರು ಮಾತನಾಡಿ….ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಹೇಳಿದರು.

 

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೀತಾ,ಮಂಜುಳಾ ,ಹೇಮಾವತಿ, ಜಗ್ದೇಶ್,ಮೊಹಮದ್ ಸಮಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Editor

Leave a comment