Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ   ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ.

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 18: ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳದ್ದು ಶಿಷ್ಟಾಚಾರದನ್ವಯ ನೋಡಲ್ ಅಧಿಕಾರಿಗಳನ್ನು ನಿಯಮಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್…

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 18: ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳದ್ದು ಶಿಷ್ಟಾಚಾರದನ್ವಯ ನೋಡಲ್

ಅಧಿಕಾರಿಗಳನ್ನು ನಿಯಮಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಿದ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೆಪ್ಟೆಂಬರ್ 20 ರ ಜಿಲ್ಲಾ ಪ್ರವಾಸ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಪೂರ್ವ ಸಿದ್ಧತಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾನ್ಯ ಮುಖ್ಯಮಂತ್ರಿಗಳು ಹೆಲಿಪ್ಯಾಡ್ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದ ಹತ್ತಿರ ನುರಿತ ವೈದ್ಯರ / ಸಿಬ್ಬಂದಿ ತಂಡವನ್ನು ನಿಯೋಜಿಸುವುದು. ಸುಸಜ್ಜಿತ ಅಂಬುಲನ್ಸ್ ವ್ಯವಸ್ಥೆಗೆ ಕ್ರಮ ವಹಿಸುವುದು. ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪ್ರವಾಸ ಕಾರ್ಯ ಕೈಗೊಳ್ಳುವಾಗ ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿಗೆ ಕ್ರಮ ವಹಿಸಬೇಕು.

ವೇದಿಕೆ ಕಾರ್ಯಕ್ರಮದ ಸ್ಥಳವಾದ ಕನಕ ಭವನದ ಸುತ್ತಮುತ್ತಲಿನ ಆವರಣದ ಸ್ವಚ್ಛತೆಗೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕು. ಮುಖ್ಯಮಂತ್ರಿಗಳ ಪ್ರವಾಸ ಕಾಲದಲ್ಲಿ ಸಾರಿಗೆ ಸಂಚಾರದಲ್ಲಿ ತೊಂದರೆಯಾಗದAತೆ ಕ್ರಮ ವಹಿಸಬೇಕು. ಮುಖ್ಯಮಂತ್ರಿಗಳ ಪ್ರವಾಸ ಮುಗಿಯುವವರ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ತಮ್ಮ ತಮ್ಮ ಕರ್ತವ್ಯ ನಿರ್ವಹಿಸಬೇಕು. ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

ಮಾನ್ಯ ಮುಖ್ಯಮಂತ್ರಿಗಳು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11.25 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಹೆಲಿಪ್ಯಾಡ್‌ಗೆ ಆಗಮಿಸುವರು. ನಂತರ ಅಲ್ಲಿಂದ ಗದಗ ತಾಲೂಕು ಕುರುಬರ ಸಂಘ ( ರಿ) ಗದಗ ವತಿಯಿಂದ ಆಯೋಜಿಸಿರುವ “ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ “ ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘ ಜೀವಿ ಶ್ರೀ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥಾ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಂತರ ಶ್ರೀ ರಾಕೇಶ ಸಿದ್ಧರಾಮಯ್ಯ ಐಟಿಐ ಕಾಲೇಜ್ , ಅಲ್ಲಿಂದ ಜವಳ ಗಲ್ಲಿಯ ಇಂದಿರಾವನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ನಂತರ ಮುಖ್ಯಮಂತ್ರಿಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮವಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಅವರು ಮಾತನಾಡಿ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದಲ್ಲಿ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಗೆ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಅಗ್ನಿಶಾಮಕ ವಾಹನ, ವಿದ್ಯುತ್ ಪೂರೈಕೆ, ಊಟದ ವ್ಯವಸ್ಥೆ, ವಾಹನಗಳ ಪೂರೈಕೆ, ವೇದಿಕೆ ಸುರಕ್ಷತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್.,ಉಪವಿಭಾಗಾಧಿಕಾರಿ ಗಂಗಪ್ಪ, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಮಹಾಂತೇಶ್ ಸಜ್ಜನರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ , ಸಂಖ್ಯಾ ಸಂಗ್ರಹಣಾದಿಕಾರಿ ಕಂಬಾಳಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Editor

Leave a comment