Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಸಿಎಂ ಸಿದ್ದರಾಮಯ್ಯರಿಂದ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮದ ನಿಯಂತ್ರಣ ಕೇಂದ್ರ ಉದ್ಘಾಟನೆ.

ಕರುನಾಡು ಘರ್ಜನೆ ಸುದ್ದಿ ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಗರದ ಜವಳಗಲ್ಲಿಯಲ್ಲಿನ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಯಂತ್ರ ಹಾಗೂ ಇಂದಿರಾವನವನ್ನು ವೀಕ್ಷಣೆ ಮಾಡಿದರು. ನಂತರ ಎಸ್‌ಪಿ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ನಿಯಂತ್ರಣ ಕೇಂದ್ರವನ್ನು…

ಕರುನಾಡು ಘರ್ಜನೆ ಸುದ್ದಿ ಗದಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಗರದ ಜವಳಗಲ್ಲಿಯಲ್ಲಿನ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಯಂತ್ರ ಹಾಗೂ ಇಂದಿರಾವನವನ್ನು ವೀಕ್ಷಣೆ ಮಾಡಿದರು. ನಂತರ ಎಸ್‌ಪಿ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಿದರು.

ಸಿಎಂ ಸಿದ್ಧರಾಮಯ್ಯ ಅವರು ಜವಳಗಲ್ಲಿಯಲ್ಲಿನ ಪ್ರಭುವಿನೆಡೆಗೆ ಪ್ರಭುತ್ವದ ಕಾರ್ಯಕ್ರಮದ ಯಂತ್ರದ ಬಟನ್ ಒತ್ತುವ ಮೂಲಕ ಜಿಲ್ಲೆಯ ಜನಸಂಖ್ಯೆ ವಿವರಗಳನ್ನು ನೀಡುವಂತೆ ಕೋರಿದರು. ನಂತರ ಇಂದಿರಾವನ ವೀಕ್ಷಣೆ ನಡೆಸಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳ ಕಚೇರಿಗೆ ತೆರಳುವಷ್ಟರಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಕೋರಿದ ಜಿಲ್ಲೆಯ ಜನಸಂಖ್ಯೆ ವಿವರಗಳನ್ನು ಸಿದ್ಧಪಡಿಸಿ ವರದಿಯನ್ನು ಜಿಲ್ಲಾಡಳಿತದಿಂದ ನೀಡಲಾಯಿತು. ಇದಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಪ್ರಭುವಿನಡೆಗೆ ಪ್ರಭುತ್ವ ಕಾರ್ಯಕ್ರಮದ ಅನುಷ್ಟಾನ ಉತ್ತಮವಾಗಲಿ. ಜನಸಾಮಾನ್ಯರು ಸರ್ಕಾರಿ ಸೇವೆಗಳಿಗಾಗಿ ವಿನಾಕಾರಣ ಅಲೆದಾಟ ತಪ್ಪಿಸಿ ಶೀಘ್ರ ಸೌಲಭ್ಯ ಹಾಗೂ ಸಮಸ್ಯೆಗಳಿಗೆ ಪರಿಹಾರ ದೊರೆಯಲು ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಪೂರಕವಾಗಲಿ ಎಂದು ಶುಭ ಕೋರಿದರು.

ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಅವರು ಜಿಲ್ಲಾ ಪೊಲೀಸ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಅನುಷ್ಟಾನ ಕುರಿತಂತೆ ವಿವರಿಸುತ್ತಾ ಮತದಾರ ಪ್ರಭುವಿನ ಮನೆ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಕಾರ್ಯ ಇದಾಗಿದೆ. ಈ ಕಾರ್ಯಕ್ರಮವು ಆಡಳಿತ ವ್ಯವಸ್ಥೆ ಚುರುಕುಗೊಳಿಸಲು ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜಾರಿ ಮಾಡಲಾಗಿರುತ್ತದೆ. ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಹಾಗೂ ಯಶಸ್ಸುಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

 

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಮಹಾತ್ವಾಕಾಂಕ್ಷಿಯ ಕಾರ್ಯಕ್ರಮ ಪ್ರಭುವಿನೆಡೆಗೆ ಪ್ರಭುತ್ವವಾಗಿದೆ. ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಅಗಸ್ಟ್ 15 ರಂದು ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಈವರೆಗೆ ಒಟ್ಟು 14 ವಿವಿಧ ಅಹವಾಲುಗಳು ಸಾರ್ವಜನಿಕರಿಂದ ಸ್ವೀಕೃತವಾಗಿದ್ದು ಬಹುತೇಕ ಎಲ್ಲ ಅಹವಾಲುಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ. ಇದೊಂದು ಮಾದರಿ ಕಾರ್ಯಕ್ರಮವಾಗಿದ್ದು ಮುಂದಿನ ಹಂತದಲ್ಲಿ ವಿಸ್ತರಣೆ ಮಾಡುವ ಕುರಿತು ಯೋಜಿಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು.

 

ಪ್ರ.ಪ್ರ. ಕಾರ್ಯಕ್ರಮ ಕುರಿತಂತೆ ನಗರದಲ್ಲಿ ಒಟ್ಟು ಮೂರು ಕಡೆ ಯಂತ್ರಗಳನ್ನು ಇರಿಸಲಾಗಿದೆ. ಜಿಲ್ಲಾ ಕ್ರೀಡಾಂಗಣ, ಜವಳ ಗಲ್ಲಿ ಹಾಗೂ ಬೆಟಗೇರಿಯ ತೆಂಗಿನಕಾಯಿ ಬಜಾರಿನಲ್ಲಿ ಪ್ರ.ಪ್ರ. ಯಂತ್ರಗಳು ಪ್ರಸ್ತುತವಾಗಿ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ದಿನದ 24 ಗಂಟೆಗಳಲ್ಲಿಯೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

 

ಪ್ರಭುವಿನಡೆಗೆ ಪ್ರಭುತ್ವ ಕಾರ್ಯಕ್ರಮ ಆರಂಭಿಕವಾಗಿ 10 ಅಂಶಗಳನ್ನು ಒಳಗೊಂಡAತೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಹಿರಿಯ ನಾಗರಿಕರ ಸಹಾಯ, ತುರ್ತು ವೈದ್ಯಕೀಯ ಸೇವೆ, ಅಕ್ರಮ ಮದ್ಯ ಮಾರಾಟ, ರಸ್ತೆ ಸುರಕ್ಷತೆ ಕ್ರಮ, ಕಾನೂನು ಬಾಹಿರ ಹಾಗೂ ಸಾಮಾಜಿಕ ವಿದ್ರೋಹ ಚಟುವಟಿಕೆ ವಿರುದ್ಧ ಕ್ರಮ, ಜಮೀನು ಹಕ್ಕು ಪತ್ರ , ಪಿಂಚಣಿ ವಿಷಯಗಳಿಗೆ ಸಂಬAಧಿಸಿದAತೆ ಮತ್ತು ಪಂಚಾಯತಿಗಳ ಕೆಲ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸಬಹುದಾಗಿದೆ ಎಂದು ಹೇಳಿದರು.

 

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯರು ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ರೋಣ ಶಾಸಕ ಜಿ.ಎಸ್.ಪಾಟೀಲ, ಶಾಸಕ ಎನ್.ಎಚ್.ಕೋನರೆಡ್ಡಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಫೀರ ಖಾದ್ರಿ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಹಿರಿಯರು, ಗಣ್ಯರು, ಸಾರ್ವಜನಿಕರು ಹಾಜರಿದ್ದರು.

Editor

Leave a comment