Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಜಿ.ಪಂ. ಸಾಮಾನ್ಯ ಸಭೆಯಲ್ಲಿ ಖಡಕ್ ಸೂಚನೆ.

ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿಸಿ : ರಮಣದೀಪ್ ಚೌಧರಿ ಕರುನಾಡು ಘರ್ಜನೆ ಸುದ್ದಿ l ಗದಗ ಅಕ್ಟೋಬರ್  9 ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು ಸುಸಜ್ಜಿತ ವ್ಯವಸ್ಥೆ ಒಳಗೊಂಡಂತೆ ಮಾದರಿಯಾಗಬೇಕು ಹಾಗೂ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು ಎಂದು…

ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿಸಿ : ರಮಣದೀಪ್ ಚೌಧರಿ

ಕರುನಾಡು ಘರ್ಜನೆ ಸುದ್ದಿ l ಗದಗ ಅಕ್ಟೋಬರ್  9 ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು ಸುಸಜ್ಜಿತ ವ್ಯವಸ್ಥೆ ಒಳಗೊಂಡಂತೆ ಮಾದರಿಯಾಗಬೇಕು ಹಾಗೂ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಕ್ರಮ ವಹಿಸಬೇಕು ಎಂದು ರಾಜ್ಯ ಸರ್ಕಾರದ ಯೋಜನೆ, ಕಾರ್ಯಕ್ರಮ, ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ರಮಣದೀಪ್ ಚೌಧರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಅಂಗನವಾಡಿಗಳಿಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಂದ ಮಾಹಿತಿ ಪಡೆದ ನಂತರ ನಿರ್ದೇಶನ ನೀಡಿದರು. ನಿವೇಶನವಿರುವ ಕಡೆಗೆ ಹೊಸ ಅಂಗನವಾಡಿ ಕಟ್ಟಡ ಕಟ್ಟಲು ಕ್ರಮ ಕೈಗೊಳ್ಳಬೇಕು ಎಂದರು.

ಸರ್ಕಾರದ ಅನುದಾನ ಸದ್ಭಳಕೆಯಾಗಬೇಕು. ಯಾವುದೇ ಕಾರಣಕ್ಕೂ ನೀಡಿದ ಅನುದಾನ ಹಿಂದಿರುಗಿ ಹೋಗದಂತೆ ಇಲಾಖೆ ಮುಖ್ಯಸ್ಥರು ಕಾರ್ಯನಿರ್ವಹಿಸಬೇಕು. ಕಾಮಗಾರಿ ಹಾಗೂ ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ. ಗುಣಮಟ್ಟದ ಕಾಮಗಾರಿಗೆ ಪ್ರಥಮಾದ್ಯತೆ ವಹಿಸಿ ಇಲಾಖಾಧಿಕಾರಿಗಳು ಕರ‍್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್‌ದ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಂಥಾಲಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ , ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದರು. ಹಾಗೂ ಜಿ.ಪಂ.ದ 5 ಇಲಾಖೆಗಳ ( ಚೇಂಜ್ ಆಫ್ ವರ್ಕ ) ಕಾರ್ಯ ಬದಲಾವಣೆಯ ಕಾಮಗಾರಿಗಳಿಗೆ ಅನುಮೋದನೆ ನೀಡಿದರು.

ಈ ಸಂದರ್ಬದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಚಳಗೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Editor

Leave a comment