ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆರ್ಎಸ್ಎಸ್ ಸೇರಿದಂತೆ ಖಾಸಗಿ ಸಂಘಟನೆಗಳು ಸರ್ಕಾರದ ಸ್ಥಳಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿದೆ.ಮೊನ್ನೆ ಮೊನ್ನೆ ಅಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಿಎಂಗೆ ಪತ್ರ ಬರೆದಿದ್ದರು. ಇದಾದ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದಗಳು ನಡೆದಿದ್ದವು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಪೂರ್ವಾನುಮತಿ ಇಲ್ಲದೇ ಆರ್‌ಎಸ್‌ಎಸ್ ಬೈಠಕ್ ನಡೆಸುವಂತಿಲ್ಲ ಎಂದು ತಮಿಳುನಾಡಿನ ಮಾದರಿಯಲ್ಲಿ ರಾಜ್ಯ ಸರ್ಕಾರ ನಿರ್ಬಂಧವನ್ನು ವಿಧಿಸಿದೆ. ಈ ಸಂಬಂಧ ಸಭೆಯಲ್ಲಿ ಖುದ್ದು ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ವಿಚಾರ ಕುರಿತು ಈ ಪ್ರಸ್ತಾಪ ಮಾಡಲಾಗಿದೆ. ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗೆ ನಿರ್ಬಂಧ
ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಸರ್ಕಾರಿ ಶಾಲಾ ಮೈದಾನ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಬೈಠಕ್ಗೆ ಬ್ರೇಕ್
ಪೂರ್ವಾನುಮತಿ ಇಲ್ಲದೇ ಆರ್‌ಎಸ್‌ಎಸ್ ಬೈಠಕ್ ನಡೆಸುವಂತಿಲ್ಲ
ಖುದ್ದು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದ ಸಿಎಂ ಸಿದ್ದರಾಮಯ್ಯ
ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ವಿಚಾರ ಕುರಿತು ಪ್ರಸ್ತಾಪ
ತಮಿಳುನಾಡಿನ ಮಾದರಿಯಲ್ಲಿ ನಿರ್ಬಂಧ ವಿಧಿಸಲು ನಿರ್ಧಾರ