ಕರುನಾಡು ಘರ್ಜನೆ ಸುದ್ದಿ ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ದ್ವಾರಕೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.ಏಪ್ರಿಲ್ 17 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ದ್ವಾರಕೀಶ್ ಅವರ ಆಪ್ತರು, ಅಭಿಮಾನಿಗಳು, ಬೆಂಬಲಿಗರು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ನಮನ ಸಲ್ಲಿಸಬಹುದು.