Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಬೆಳೆ ಹಾನಿಯಾದ ರೈತರಿಗೆ 91 ಕೋಟಿ ರೂ ಪರಿಹಾರ ವಿತರಣೆಗೆ  ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ .

ಕರುನಾಡು ಘರ್ಜನೆ ಸುದ್ದಿ ಗದಗ ನವೆಂಬರ್ 3: ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ 91 ಕೋಟಿ ರೂ ಪರಿಹಾರ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ…

ಕರುನಾಡು ಘರ್ಜನೆ ಸುದ್ದಿ ಗದಗ ನವೆಂಬರ್ 3: ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ 91 ಕೋಟಿ ರೂ ಪರಿಹಾರ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಡಿಬಿಟಿ ಮುಖಾಂತರ ಬೆಳೆ ಹಾನಿ ಪರಿಹಾರ ವಿತರಣೆಗೆ ಚಾಲನೆ ನೀಡಿದರು.

ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿರುವ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ಜಿಲ್ಲೆಗೆ ಒಟ್ಟಾರೆ 91 ಕೋಟಿ ರೂ. ಬಿಡುಗಡೆಯಾಗಿದೆ. ಗದಗ ಮತ್ತು ಶಿರಹಟ್ಟಿ ತಾಲೂಕಿನ ರೈತರಿಗೆ 21 ಕೋಟಿ ರೂ. ಪರಿಹಾರ ಡಿಬಿಟಿ ಮುಖಾಂತರ ವಿತರಿಸಲಾಗುತ್ತಿದೆ. ನಂತರ ನರಗುಂದ, ರೋಣ ತಾಲೂಕಿನ ರೈತರಿಗೆ 55 ಕೋಟಿ ರೂ. ವಿತರಿಸಿ ನಂತರ ಉಳಿದ ತಾಲೂಕುಗಳಿಗೆ ಬೆಳೆ ಹಾನಿ ಪರಿಹಾರವನ್ನು ಡಿಬಿಟಿ ಮೂಲಕ ವಿತರಿಸಲಾಗುತ್ತಿದೆ ಎಂದು ರಾಜ್ಯದ ಕಾನೂನು, ನ್ಯಾಯ , ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ತೋಟಗಾರಿಕೆ ಬೆಳೆ ಹಾನಿ ಸಮೀಕ್ಷೆ ಕೈಗೊಂಡು ಜಿಲ್ಲೆಯ 18540 ರೈತರಿಗೆ ಇಂದು ಪರಿಹಾರ ವಿತರಣೆಗೆ ಚಾಲನೆ ನೀಡಲಾಯಿತು. ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಮೆಣಸಿನಕಾಯಿ, ಸೇವಂತಿಗೆ ಬೆಳೆಗಳು ಪ್ರಮುಖ ಹಾನಿಯಾದ ಬೆಳೆಗಳಾಗಿವೆ. ಅದರಂತೆ ಕೃಷಿ ಬೆಳೆಗಳಾದ ಹೆಸರು, ಗೋವಿನಜೋಳ , ಶೇಂಗಾ ಹಾನಿಯಾದ ಪ್ರಮುಖ ಬೆಳೆಗಳಾಗಿವೆ.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ತಹಶೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಇತರರು ಹಾಜರಿದ್ದರು.

Editor

Leave a comment