Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ..!

ಕರುನಾಡು ಘರ್ಜನೆ ಸುದ್ದಿ ಕಲಬುರಗಿ (ನ.13) ಕರ್ನಾಟಕದಲ್ಲಿ ಭಾರಿ ಕೋಲಾಹಲ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಆರ್‌ಎಸ್ಎಸ್ 100ನೇ ವರ್ಷಾಚರಣೆ ಪ್ರಯುಕ್ತ ಚಿತ್ತಾಪುರದಲ್ಲಿ ಆಯೋಜಿಸಿದ್ದ ಆರ್‌ಎಸ್ಎಸ್ ಪಥಸಂಚಲನ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಮುಖವಾಗಿ ಪ್ರಿಯಾಂಕ್ ಖರ್ಗೆ…

ಕರುನಾಡು ಘರ್ಜನೆ ಸುದ್ದಿ ಕಲಬುರಗಿ (ನ.13) ಕರ್ನಾಟಕದಲ್ಲಿ ಭಾರಿ ಕೋಲಾಹಲ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಆರ್‌ಎಸ್ಎಸ್ 100ನೇ ವರ್ಷಾಚರಣೆ ಪ್ರಯುಕ್ತ ಚಿತ್ತಾಪುರದಲ್ಲಿ ಆಯೋಜಿಸಿದ್ದ ಆರ್‌ಎಸ್ಎಸ್ ಪಥಸಂಚಲನ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಮುಖವಾಗಿ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಆಯೋಜಿಸಿದ್ದ ಆರ್‌ಎಸ್ಎಸ್ ಪಥಸಂಚಲನಕ್ಕೆ ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಲಾಗಿತ್ತು. ಇತ್ತ ಒಂದೆಡೆ ದಲಿತ ಸಂಘಟನೆಗಳು ಅದೇ ಸಮಯದಲ್ಲಿ ಮೆರವಣಿಗೆ ನಡೆಸಲು ನಿರ್ಧಸಿತ್ತು. ಹೀಗಾಗಿ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ಮಹತ್ವದ ಆದೇಶ ನೀಡಿದೆ. ಕೆಲ ಷರತ್ತುಗಳ ಮೂಲಕ ನವೆಂಬರ್ 16ರಂದ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಅವಕಾಶ ನೀಡಿದೆ.ನ.16ರಂದು ಯಾವ ಸಮಯದಲ್ಲಿ ಪಥಸಂಚಲನನವೆಂಬರ್ 16ರಂದು ಆರ್‌ಎಸ್ಎಸ್ ಪಥಸಂಚಲನಕ್ಕೆ ಅವಕಾಶ ನೀಡಿದ ಕೋರ್ಟ್ ಸಮಯವನ್ನು ಕಡಿತಗೊಳಿಸಿದೆ. ಅರ್ಜಿಯಲ್ಲಿ ಮಧ್ಯಾಹ್ನ 3.30ರಿಂದ ಸಂಜೆ 6.30 ಗಂಟೆ ವರೆಗೆ ಅವಕಾಶ ಕೋರಲಾಗಿತ್ತು. ಆದರೆ ಕೋರ್ಟ್ ಮಧ್ಯಾಹ್ನ 3.30 ರಿಂದ ಸಂಜೆ 5.45ರ ವರೆಗೆ ಅವಕಾಶ ನೀಡಿದೆ.

 

300 ಗಣವೇಷಧಾರಿಗಳಿಗೆ ಮಾತ್ರ ಅವಕಾಶ

ಆರ್‌ಎಸ್ಎಸ್ ಪಥಸಂಚಲನದ ವೇಳೆ 850 ಗಣವೇಷಧಾರಿಗಳಿಗೆ ಅವಕಾಶ ನೀಡಬೇಕು ಎಂದು ಕೋರ್ಟ್‌ಗೆ ಆರ್‌ಎಸ್ಎಸ್ ಸಲ್ಲಿಸಿಸಿದ್ದ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು. ಆದರೆ ಅರ್ಜಿ ವಿಚಾರಣೆ ವೇಳೆ ಜಡ್ಜ್ ಗಣವೇಷಧಾರಿಗಳ ಸಂಖ್ಯೆ ಇಳಿಕೆ ಮಾಡಲು ಸೂಚಿಸಿದ್ದಾರೆ. ಈ ವೇಳೆ ಕನಿಷ್ಠ 600 ಜನ ಭಾಗವಹಿಸಲು ಅವಕಾಶ ನೀಡುವಂತೆ ಅರ್ಜಿದಾರ ಪರ ವಕೀಲ ಅರುಣ್ ಶ್ಯಾಮ್ ಮನವಿ ಮಾಡಿದ್ದರು. ಆದರೆ ಜಡ್ಜ್‌ ಕೇವಲ 300 ಗಣವೇಶಧಾರಿಗಳು ಮಾತ್ರ ಪಾಲ್ಗೊಳ್ಳಬೇಕು ಎಂದು ಸೂಚಿಸಿದ್ದಾರೆ.

Editor

Leave a comment