Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ನರಗುಂದ ನರೇಗಾ ಕೂಲಿಕಾರರ ಇ-ಕೆವೈಸಿ ಪ್ರಗತಿಯಲ್ಲಿ ಜಿಲ್ಲೆಗೆ ನರಗುಂದ ತಾಲೂಕು ಪ್ರಥಮ.

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆಯಲ್ಲಿ ನರಗುಂದ ತಾಲೂಕಿನಲ್ಲಿ ೮೯.೭೬ ರಷ್ಟು ನರೇಗಾ ಕೂಲಿಕಾರರ ಇ-ಕೆವೈಸಿ ಪೂರ್ಣಗೊಳಿಸಿದ ನರಗುಂದ ತಾಲೂಕು ಪಂಚಾಯತ ಗದಗ ಜಿಲ್ಲೆಯಲ್ಲಿ ನರಗುಂದ ತಾಲೂಕು ಪ್ರಗತಿಗೆ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶಂಸೆ ನರಗುಂದ :…

ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲೆಯಲ್ಲಿ ನರಗುಂದ ತಾಲೂಕಿನಲ್ಲಿ ೮೯.೭೬ ರಷ್ಟು ನರೇಗಾ ಕೂಲಿಕಾರರ ಇ-ಕೆವೈಸಿ ಪೂರ್ಣಗೊಳಿಸಿದ ನರಗುಂದ ತಾಲೂಕು ಪಂಚಾಯತ

ಗದಗ ಜಿಲ್ಲೆಯಲ್ಲಿ ನರಗುಂದ ತಾಲೂಕು ಪ್ರಗತಿಗೆ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶಂಸೆ

ನರಗುಂದ : ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಮಾಡುವ ಕೂಲಿಕಾರರ ಹಾಜರಾತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ-ಕೆವೈಸಿ ಕಾರ್ಯದಲ್ಲಿ ನರಗುಂದ ತಾಲೂಕು ಪಂಚಾಯತ ಗದಗ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ. ತಾಲೂಕಿನಲ್ಲಿ ಶೇಕಡಾ ೮೯.೭೬ ರಷ್ಟು ಸಾಧನೆ ಮಾಡುವುದರ ಮೂಲಕ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ನರೇಗಾ ಸಕ್ರಿಯ ಕೂಲಿಕಾರರ ಇ-ಕೆವೈಸಿ ಮಾಡಿದ ಹೆಗ್ಗಳಿಕೆಗೆ ನರಗುಂದ ತಾಲೂಕು ಪಾತ್ರವಾಗಿದೆ.

ನರಗುಂದ ತಾಲೂಕಿನಲ್ಲಿ ಒಟ್ಟು ೧೩ ಗ್ರಾಮ ಪಂಚಾಯತಿಗಳ ಪೈಕಿ ೧೯೩೦೪ ಸಕ್ರಿಯ ನರೇಗಾ ಕೂಲಿಕಾರರು ಇದ್ದಾರೆ. ರವಿವಾರದ ಎಂ.ಐ.ಎಸ್ ವರದಿ ಪ್ರಕಾರ ೧೭೩೨೭ ಸಕ್ರಿಯ ಕೂಲಿಕಾರರ ಇ-ಕೆವೈಸಿ ಮಾಡುವುದರ ಮೂಲಕ ೮೯.೭೬ ಪ್ರತಿಶತ ಸಾಧನೆ ಮಾಡುವುದರ ಮೂಲಕ ಗದಗ ಜಿಲ್ಲೆಯ ಇನ್ನುಳಿದ ತಾಲೂಕುಗಳಿಗಿಂತ ಹೆಚ್ಚಿನ ಪ್ರಗತಿ ಮಾಡಿದೆ. ಗದಗ ತಾಲೂಕು ೭೯.೮%, ಗಜೇಂದ್ರಗಡ-೮೩.೩೪%, ಲಕ್ಷ್ಮೇಶ್ವರ-೮೮.೧೫%, ಮುಂಡರಗಿ-೭೯.೯೮%, ರೋಣ-೮೨.೦೬ ಹಾಗೂ ಶಿರಹಟ್ಟಿ ತಾಲೂಕು ೮೮.೮ ರಷ್ಟು ನರೇಗಾ ಸಕ್ರಿಯ ಕೂಲಿಕಾರರ ಇ-ಕೆವೈಸಿ ಪ್ರಗತಿ ಸಾಧಿಸಿವೆ.

ತಾಲೂಕಿನಲ್ಲಿ ಕೊಣ್ಣೂರು ಹೊರತು ಪಡಿಸಿ ಉಳಿದ ಗ್ರಾಮ ಪಂಚಾಯತಗಳಲ್ಲಿ ಗ್ರಾಮ‌ ಕಾಯಕ ಮಿತ್ರರು ಇಲ್ಲದೇ ಇದ್ದರೂ ನರೇಗಾ ಬಿ. ಎಫ. ಟಿ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ತಾಲೂಕಿನ ವ್ಯಾಪ್ತಿಯ ಎಲ್ಲಾ ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ನರೇಗಾ ಸಕ್ರಿಯ ಕೂಲಿಕಾರರನ್ನು ಮನವೊಲಿಸಿ ಮುಂಜಾನೆ ಮತ್ತು ಸಾಯಂಕಾಲ ರೈತಾಪಿ ವರ್ಗ ಲಭ್ಯವಿರುವ ಅವಧಿಯಲ್ಲಿ ಭೇಟಿ ಮಾಡಿ, ಮನವೊಲಿಸಿರುವದರ ಪರಿಣಾಮವೇ ಈ ಪ್ರಗತಿಗೆ ಕಾರಣವಾಗಿದೆ.

ನರಗುಂದ ತಾಲೂಕಿನ ಸುರಕೋಡ ಗ್ರಾಮ ಪಂಚಾಯತ ೯೮.೨೨ ರಷ್ಟು ಹಾಗೂ ವಾಸನ ಗ್ರಾಮ ಪಂಚಾಯತಿ ೯೩.೪೪ ರಷ್ಟು ಪ್ರಗತಿ ಸಾಧಿಸುವ ಮೂಲಕ ಜಿಲ್ಲೆಗೆ ಪ್ರಥಮ ಮತ್ತು ತೃತಿಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿವೆ..‌

ಗ್ರಾಮೀಣ ಪ್ರದೇಶಗಳ ಕೂಲಿಕಾರರ ಜೀವನೋಪಾಯದ ಅಭಿವೃದ್ಧಿ ಮತ್ತು ಹಳ್ಳಿಗಳಲ್ಲಿ ವಲಸೆ ತಡೆಗಟ್ಟಿ ಇರುವ ಗ್ರಾಮದಲ್ಲಿ ಕೂಲಿಕಾರರಿಗೆ ಕೆಲಸ ಕೊಡುವ ಉದ್ದೇಶದಿಂದ ನರೇಗಾ ಯೋಜನೆ ಜಾರಿಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರ ಹಾಜರಾತಿ ನಿರ್ವಹಣೆಯಲ್ಲಿ ಕೆಲವು ಕಡೆ ಆರೋಪಗಳು ಕಂಡು ಬಂದಿದ್ದವು. ಹೀಗಾಗಿ ಕೇಂದ್ರ ಸರ್ಕಾರ ನರೇಗಾ ಕೂಲಿಕಾರರ ಹಾಜರಾತಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಜಾರಿಗೊಳಿಸುವುದರ ಮೂಲಕ ಕೂಲಿಕಾರರ ಹಾಜರಾತಿಯಲ್ಲಿ ಪಾರದರ್ಶಕತೆ ತರಲು ಮುಂದಾಗಿದೆ.

 

ಕೋಟ-೧
ನರಗುಂದ ತಾಲೂಕಿನ ಒಟ್ಟು ೧೯೩೦೪ ನರೇಗಾ ಕೂಲಿಕಾರರು ಇದ್ದಾರೆ. ಈವರೆಗೂ ೧೭೩೨೭ ಕೂಲಿಕಾರರ ಇ-ಕೆವೈಸಿ ಆಗಿದ್ದು, ಬಾಕಿಯಿರುವ ೧೯೭೭ ಕೂಲಿಕಾರರು ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಮಾಡಿಸಿಕೊಳ್ಳದ ನರೇಗಾ ಕೂಲಿಕಾರರು ಈಗಲೇ ಹತ್ತಿರದ ಗ್ರಾಮ ಪಂಚಾಯತಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳವುದು. ಇಲ್ಲದಿದ್ದಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ದೊರಕುವುದಿಲ್ಲಾ..‌

ಎಸ್.ಕೆ.ಇನಾಮದಾರ
ಕಾರ್ಯನಿರ್ವಾಹಕ ಅಧಿಕಾರಿಗಳು
ನರಗುಂದ ತಾಲೂಕು ಪಂಚಾಯತ

ಕೋಟ-೨
ಪ್ರತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸ್ವಚ್ಚತಾ ವಾಹಿನಿ ಮೂಲಕ, ಸಾಮಾಜಿಕ ಮಾದ್ಯಮಗಳ ಮೂಲಕ, ಪತ್ರಿಕೆಗಳ ಮೂಲಕ ಇ-ಕೆವೈಸಿ ಮಹತ್ವದ ಬಗ್ಗೆ ಪ್ರಚಾರ ಮಾಡಲಾಗಿದೆ. ನರಗುಂದ ತಾಲೂಕಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಮತ್ತು ನರೇಗಾ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ e-KYC ಮಾಡಿದ್ದಾರೆ.. ಈ ಸಾಧನೆಗೆ ಗ್ರಾಪಂ ಸಿಬ್ಬಂದಿಗಳು ಮತ್ತು ನರೇಗಾ ಸಿಬ್ಬಂದಿಗಳ ಪರಿಶ್ರಮವೇ ಕಾರಣ.. ‌

ಸಂತೋಷಕುಮಾರ ಪಾಟೀಲ
ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ
ತಾಲೂಕು ಪಂಚಾಯತ ನರಗುಂದ

Editor

Leave a comment