Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು l ಬೆಂಗಳೂರು ಸುಳ್ಳು ಮಾಹಿತಿ ಪ್ರಕಟಿಸಿದವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು.

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು, ನವೆಂಬರ್ 18,: ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ. ಮಾನ್ಯ ಉಚ್ಚ…

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು, ನವೆಂಬರ್ 18,: ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ.

ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿ ಮತ್ತು ದತ್ತಾಂಶಗಳು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದೆ.

ಅದರಂತೆ ಆಯೋಗದಿಂದ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಅಫಿಡೆವಿಟ್ ನ್ನು (Affidavit) ಅ ಸಲ್ಲಿಸಲಾಗಿರುತ್ತದೆ. ಸಮೀಕ್ಷೆಯ ಮಾಹಿತಿ ಹಾಗೂ ದತ್ತಾಂಶಗಳ ಗೌಪ್ಯತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಮತ್ತು ಬದ್ಧತೆಯನ್ನು ಆಯೋಗ ಹೊಂದಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ.

2025ರ ಕರ್ನಾಟಕ ರಾಜ್ಯದ ಜಾತಿಗಣತಿ ವರದಿ ಎಂಬ ಶೀರ್ಷಿಕೆಯಡಿ ವಿವಿಧ ಜಾತಿಗಳ ಜನಸಂಖ್ಯೆಯ ತಪ್ಪು ಮಾಹಿತಿಯನ್ನು WhatsApp ನಲ್ಲಿ ಹಂಚಿಕೆ (share) ಮಾಡಿರುವ ಮೊಬೈಲ್ ಸಂಖ್ಯೆ: 8618891657 ಮತ್ತು 9972508500 ರ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ.

ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಸಾಮಾಜಿಕ ಜಾಲತಾಣಗಳಾದ WhatsApp, Facebook, Twitter, Instagram ಇತ್ಯಾದಿಗಳಲ್ಲಿ ಹಂಚಿಕೊಂಡಲ್ಲಿ ಇದಕ್ಕೆ ಕಾರಣರಾಗಿರುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.

ಆದ್ದರಿಂದ ಈ ರೀತಿ ಯಾವುದೇ ಸುಳ್ಳು/ತಪ್ಪು ಮಾಹಿತಿಯನ್ನು ಸೃಜಿಸಿ, ಸಾರ್ವಜನಿಕರಲ್ಲಿ ಗೊಂದಲ ಮೂಡಿಸದಂತೆ ಹಾಗೂ ಬಂದಿರುವ ಮಾಹಿತಿಯನ್ನು forward ಮಾಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment