ಗದಗ ಜಿಲ್ಲಾಡಳಿತ ಭವನದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ
ಕರುನಾಡು ಘರ್ಜನೆ ಸುದ್ದಿ ಊಗದಗ ನವೆಂಬರ್ 20 : ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಸಂಬAಧಿಸಿದAತೆ ಗದಗ ಜಿಲ್ಲಾ ಮಟ್ಟದ ಸಮಿತಿಯ ಮಹತ್ವದ ಸಭೆ ಗುರುವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜರುಗಿತು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದೌರ್ಜನ್ಯ ನಿಯಂತ್ರಣ ಸಮಿತಿಯ ಅಧ್ಯಕ್ಷರಾದ ಸಿ.ಎನ್. ಶ್ರೀಧರ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಸೂಕ್ತ ನಿರ್ದೇಶನ ನೀಡಿದರು.
ಸಭೆಯ ಆರಂಭದಲ್ಲಿ ಹಿಂದಿನ ಸಭೆಯ ಮಾಹಿತಿ ಪತ್ರವನ್ನು ಓದಿ, ಅದರಲ್ಲಿ ಕೈಗೊಳ್ಳಬೇಕೆಂದು ಸೂಚಿಸಿದ್ದ ಕ್ರಮಗಳ ಕುರಿತು ಪ್ರಗತಿ ವಿಮರ್ಶೆ ನಡೆಸಲಾಯಿತು.
ಜಿಲ್ಲಾಧಿಕಾರಿ ಶ್ರೀಧರ ಮಾತನಾಡಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಕೇವಲ ಪುಸ್ತಕದಲ್ಲಿರಬಾರದು. ಅದರ ಜವಾಬ್ದಾರಿ ಅನುಷ್ಠಾನ ನಮ್ಮ ಮೇಲಿದೆ. ದೌರ್ಜನ್ಯ ಪೀಡಿತರ ಮನಸ್ಸಿನಲ್ಲಿ ಭಯವಲ್ಲ, ಭರವಸೆ ಮೂಡುವಂತೆ ಪೊಲೀಸ್ ಮತ್ತು ಆಡಳಿತ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ, ಪ್ರಾಥಮಿಕ ತನಿಖೆಯ ಹಂತ, ಚಾರ್ಜ್ಶೀಟ್ ಸಲ್ಲಿಕೆ, ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ನಂದಾ ಹಣಬರಟ್ಟಿ ಸಭೆಗೆ ಮಂಡಿಸಿದರು.
ತನಿಖೆ ವಿಳಂಬವಾಗಿರುವ ಕೆಲವು ಪ್ರಕರಣಗಳ ಬಗ್ಗೆ ಕಾರಣ ವಿಚಾರಿಸಿದ ಜಿಲ್ಲಾಧಿಕಾರಿಗಳು, ಕಾನೂನುಬದ್ಧ ಅವಧಿಯೊಳಗೆ ತನಿಖೆ ಪೂರ್ಣಗೊಳಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ಹೊರಿಸಿ ಇತರರಿಗೆ ಸಂದೇಶ ನೀಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ದೂರು ನೀಡಲು ಹೆದರುವ ಪೀಡಿತರಿಗೆ ಕಾನೂನು ಸಹಾಯ, ಕೌನ್ಸೆಲಿಂಗ್ ವ್ಯವಸ್ಥೆ ಕಲ್ಪಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತಿಳಿಸಿದರು.
ಎಸ್‌ಸಿ/ಎಸ್‌ಟಿ ಕಾಯ್ದೆ, ಪರಿಹಾರ ನಿಬಂಧನೆಗಳು, ದೂರನ್ನು ಹೇಗೆ ಸಲ್ಲಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬ ವಿಷಯದಲ್ಲಿ ಜನರಿಗೆ ತಿಳುವಳಿಕೆ ಕೊಡಿ. ಶಾಲೆ-ಕಾಲೇಜುಗಳಲ್ಲಿ ಸಂವಿಧಾನ ಮೌಲ್ಯಗಳ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮಗಳನ್ನು ನಡೆಸಿ, ಜಾತಿ ಆಧಾರಿತ ದ್ವೇಷ ತಡೆಯುವ ಮನೋಭಾವ ಬೆಳೆಸಬೇಕು ಎಂದು ಶ್ರೀಧರ ಹೇಳಿದರು.
ಸಭೆಯಲ್ಲಿ ದೂರನ್ನು ಸ್ವೀಕರಿಸುವ ಪೊಲೀಸ್ ಠಾಣೆ, ತಹಶೀಲ್ದಾರ ಕಚೇರಿ, ಸಮಾಜ ಕಲ್ಯಾಣ ಕಚೇರಿ ಮುಂತಾದ ಕಡೆಗಳಲ್ಲಿ ದೂರವಾಣಿ ಸಂಖ್ಯೆಗಳು, ತುರ್ತು ಸಂಪರ್ಕ ವಿವರಗಳನ್ನು ಗೋಚರವಾಗುವಂತೆ ಅಂಟಿಸುವAತೆ ಸೂಚಿಸಲಾಯಿತು.
ಸಭೆಯ ಕೊನೆಯಲ್ಲಿ, ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರಿಶಿಷ್ಟ ಜಾತಿ ಪಂಗಡದವರ ಮೇಲೆ ನಡೆಯುವ ದೌರ್ಜನ್ಯಗಳನ್ನು ನಿಲ್ಲಿಸುವ ಸಂಕಲ್ಪ ವ್ಯಕ್ತಪಡಿಸಲಾಯಿತು.
ಸಮಿತಿಯ ಸದಸ್ಯರ ಕೋರಿಕೆಯ ಮೇರೆಗೆ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಸಹ ದೌರ್ಜನ್ಯ ನಿಯಂತ್ರಣ ಸಭೆಗಳು ಆಗಬೇಕು ಈ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಕ್ರಮ ವಹಿಸಲು ಡಿಸಿ ನಿರ್ದೇಶನ ನೀಡಿದರು.
ಪ.ಜಾ ಪ.ಪಂ ಜನರಿಗೆ ತಲುಪಬೇಕಾದ ವಸತಿ. ವೈದ್ಯಕೀಯ. ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿಯೆ ದೊರಕಬೇಕು. ಹೊಂಬಳ ನಾಕಾದ ಸ್ಮಶಾನ ಬೂಮಿಯಲ್ಲಿ ಬೆಳೆದಿರುವ ಮುಳ್ಳಿನ ಕಂಟೆಗಳನ್ನು ತೆಗೆದು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕು ಎಂದರು. ಯಾವುದೇ ಕಾರಣಕ್ಕೂ ಸೌಲಬ್ಯಗಳ ವಿತರಣೆಯಲ್ಲಿ ದುರುಪಯೋಗವಾಗಬಾರದು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ವಿಶೇಷ ಆಸಕ್ತಿ ಯಿಂದ ಕೆಲಸ ನಿರ್ವಹಿಸಬೇಕು. ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಗೆ ಅದಿಕಾರಿಗಳು ತಪ್ಪದೆ ಸಕಾಲದಲ್ಲಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂಧರ್ಭದಲ್ಲಿ ಸಮಿತಿ ಸದಸ್ಯರುಗಳಾದ ಶರೀಫ್ ಬಿಳೆಯಲಿ, ಸುರೇಶ ನಡುವಿನಮನಿ, ವಿನಾಯಕ ಬಳ್ಳಾರಿ, ತುಕ್ಕಪ್ಪ ಪೂಜಾರ, ಶ್ರೀನಿವಾಸ ದ್ಯಾವನೂರ, ದೃವರಾಜ ಹೊನ್ನಪ್ಪನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ. ಕಾರ್ಮಿಕ ಇಲಾಖೆ ಅದಿಕಾರಿ ಶ್ರೀಶೈಲ ಸೋಮನಕಟ್ಟಿ. ಡಿಎಚ್‌ಒ ಡಾ.ಎಸ್ ಎಸ್ ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೆರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.