Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸರ್ಕಾರಿ ಶಾಲೆಗಳ ಜಾಗ ಇತರ ಕೆಲಸಗಳಿಗೆ ವಿನಿಯೋಗ – ಸಾರ್ವಜನಿಕ ಶಿಕ್ಷಣದ ಮೇಲೆ ಹಿಂದೆಂದೂ ಕಂಡಿರದ ಪ್ರಹಾರ!

ಕರುನಾಡು ಘರ್ಜನೆ ಸುದ್ದಿ ಗದಗ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಕರ್ನಾಟಕ ಸರ್ಕಾರವು, ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ…

ಕರುನಾಡು ಘರ್ಜನೆ ಸುದ್ದಿ ಗದಗ: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಕರ್ನಾಟಕ ಸರ್ಕಾರವು, ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಇತರ ಕೆಲಸಗಳಿಗೆ ವಿನಿಯೋಗಿಸಲು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಸೂದೆ ಮಂಡಿಸುವುದಾಗಿ ಹೇಳಿದೆ. ನೆನ್ನೆ ಪ್ರತಿಷ್ಠಿತ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರದ ಈ ಏಕಪಕ್ಷೀಯ ಹಾಗೂ ಅಪ್ರಜಾತಾಂತ್ರಿಕ ನಡೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ.

ಶರವೇಗದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಜೊತೆಗೆ ಅವುಗಳ ಜಾಗಕ್ಕೂ ಪರ್ಯಾಯ ಯೋಜನೆ ರೂಪಿಸುತ್ತಿರುವ ಸರ್ಕಾರದ ನಡೆ, ಬಡ ಮಕ್ಕಳ ಶಿಕ್ಷಣದ ಕುರಿತ ಸರ್ಕಾರದ ಧೋರಣೆ ತೋರುತ್ತದೆ.

ಜೊತೆಗೆ ಅದೇ ಸಂದರ್ಶನದಲ್ಲಿ ಸಚಿವರು ಹೇಳಿರುವಂತೆ, ಸರ್ಕಾರಿ ಶಾಲೆಗಳಿಂದ ಆದಾಯ ಸಂಗ್ರಹಿಸಲು ಶಾಲೆಗಳ ಗೋಡೆಯ ಮೇಲೆ ಜಾಹೀರಾತಿಗೆ ಅವಕಾಶ ನೀಡಲು ಹೊರಟಿರುವ ಸರ್ಕಾರದ ನಡೆ ಸಂಪೂರ್ಣ ಖಾಸಗೀಕರಣಕ್ಕೆ ನಾಂದಿ ಹಾಡಲಿದೆ.

ಕೂಡಲೇ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು, ಸರ್ಕಾರಿ ಶಾಲೆಯ ಆಸ್ತಿಯನ್ನು ಬೇರೆ ಉದ್ದೇಶಕ್ಕೆ ಬಳಸದೆ ಅಲ್ಲಿನ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು ಮತ್ತು ಜಾಹೀರಾತು ಸೇರಿದಂತೆ ಯಾವುದೇ ವ್ಯಾಪಾರದ ಉದ್ದೇಶಕ್ಕೆ ಸರ್ಕಾರಿ ಶಾಲೆಗಳನ್ನು ಬಳಸಬಾರದು ಎಂದು ಎಐಡಿಎಸ್ಓ ಸರ್ಕಾರವನ್ನು ಆಗ್ರಹಿಸುತ್ತದೆ.

ಈ ಎಲ್ಲಾ ಕಾರಣಗಳಿಗಾಗಿಯೇ ಸರ್ಕಾರ ಇನ್ನೂ ಸಹ SEP ವರದಿಯನ್ನು ಜಾರಿಗೊಳಿಸಿಲ್ಲವೇ ಎಂಬ ಪ್ರಶ್ನೆ ಮೂಡುವುದಂತೂ ಸತ್ಯ!

Editor

Leave a comment