ಕರುನಾಡು ಘರ್ಜನೆ ಸುದ್ದಿ ಗದಗ ಜಿಲ್ಲಾ ಪೊಲೀಸ್ ವತಿಯಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿನ ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಅನಿರಿಕ್ಷೀತ ಬೇಟಿ ನೀಡಿ ಪರಿಶೀಲನೆ ಕೈಗೊಳ್ಳಲಾಗಿದೆ.
ಸಾಮಾಜಿಕ ಶಾಂತಿ ಭಂಗ ಉಂಟುಮಾಡಲು ಯತ್ನಿಸುವವರ ವಿರುದ್ಧ ನಿಗಾವಹಿಸಲಾಗಿದೆ.
ಈ ಸಂದರ್ಭದಲ್ಲಿ ಮಾಲೀಕರಿಗೆ ತಮ್ಮ ವ್ಯಾಪಾರ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿರುತ್ತದೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ.