ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದು ಬೆಂಕಿಗೆ ಆಹುತಿಯಾಗಿದ್ದು, ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಸಿಲುಕಿದ್ದ ಆರಕ್ಕೂ ಹೆಚ್ಚು ಜನರು ಮತ್ತು ಮೂರು ನಾಯಿಗಳನ್ನು ಎಚ್‌ಎಸ್‌ಆರ್ ಲೇಔಟ್ ಪೊಲೀಸರು ರಕ್ಷಿಸಿದ್ದಾರೆ.
ಬುಧವಾರ ಮಧ್ಯಾಹ್ನಎಚ್‌ಎಸ್‌ಆರ್ ಲೇಔಟ್ ನ 21ನೇ ಮುಖ್ಯ ರಸ್ತೆಯ ಆರ್‌ಟಿಒ ಕಚೇರಿ ಬಳಿ ಈ ಘಟನೆ ಸಂಭವಿಸಿದ್ದು, ಮೂವರು ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಸಹಾಯದಿಂದ ಹಗ್ಗಗಳನ್ನು ಬಳಸಿ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಾಲ್ಕನೇ ಮಹಡಿಯಲ್ಲಿದ್ದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಏಣಿಯ ಮೂಲಕ ರಕ್ಷಿಸಿದರು.
“ಕಟ್ಟಡದ ಭದ್ರತಾ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಬೆಂಕಿ ತ್ವರಿತವಾಗಿ ಮೂರನೇ ಮಹಡಿಗೆ ಹರಡಿತು, ನಿವಾಸಿಗಳು ಒಳಗೆ ಸಿಲುಕಿಕೊಂಡಿದ್ದರು. ಬೆಂಕಿಯನ್ನು ಗಮನಿಸಿದ ಸ್ಥಳೀಯ ನಿವಾಸಿಯೊಬ್ಬರು ಮಧ್ಯಾಹ್ನ 12.19 ರ ಸುಮಾರಿಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದರು” ಎಂದು ಎಎಸ್‌ಐ ನಾಗರಾಜ್ ಹೇಳಿದ್ದಾರು..