Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು I ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವೀಧಿವಶ.!

ಕರುನಾಡು ಘರ್ಜನೆ ಸುದ್ದಿ ಬೇಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು (ಡಿ.14) ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ…
Oplus_16908288

ಕರುನಾಡು ಘರ್ಜನೆ ಸುದ್ದಿ ಬೇಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಇಂದು (ಡಿ.14) ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

*ಶಾಮನೂರು ಶಿವಶಂಕರಪ್ಪ ಅವರು ನಾಡು ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ*

 ಶಾಮನೂರು ಶಿವಶಂಕರಪ್ಪ ಅವರು ನಾಡು ಕಟ್ಟುವ ಕೆಲಸದಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ. ಅಂತಹವರನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು 95ನೇ ವಯಸ್ಸಿನೊಳಗೂ ಕ್ರಿಯಾಶೀಲರಾಗಿದ್ದರು. ಅಖಿಲ ಭಾರತ ವೀರಶೈವ ಸಮಾಜದ ಅಧ್ಯಕ್ಷರಾಗಿಯೂ ಬಹಳಷ್ಟು ಸಾಮಾಜಿಕ ಸೇವೆ ಮಾಡಿದ್ದಾರೆ. ಎಲ್ಲರನ್ನೂ ಸಮುದಾಯದಲ್ಲಿ ಒಗ್ಗೂಡಿಸಿಕೊಂಡು ಹೋಗುವ ಪ್ರಯತ್ನದಲ್ಲಿದ್ದರು. ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಶಕ್ತಿಯಾಗಿದ್ದರು ಎಂದು ತಿಳಿಸಿದ್ದಾರೆ.

ಅವರು ತಮ್ಮ ಜೀವನದಲ್ಲಿ ಬಹುದೊಡ್ಡ ಸಾಧನೆಗಳನ್ನು ಮಾಡಿದ್ದಾರೆ. ಹತ್ತಾರು ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದರು. ಸಾದರ ಸಮುದಾಯ ಹಾಗೂ ಅನೇಕ ಬಡ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಬೆಳೆಯಲು ತಮ್ಮ ಶಿಕ್ಷಣ ಸಂಸ್ಥೆಗಳ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಕೆ.ಎಚ್‌.ಪಾಟೀಲ, ಡಿ.ಆರ್‌.ಪಾಟೀಲರ ಜತೆಗೆ ಆತ್ಮೀಯ ಸಂಬಂಧ ಹೊಂದಿದ್ದರು. ನನ್ನ ಮೇಲೆ ಸಾಕಷ್ಟು ಪ್ರೀತಿ ಇತ್ತು. ಅಷ್ಟೇ ಅಲ್ಲದೇ ಕಾಂಗ್ರೆಸ್‌ ಸಂಘಟನೆಯೊಳಗೆ ಅವರದ್ದೇ ಶೈಲಿಯಲ್ಲಿ ಬಲ ತುಂಬಿದ್ದರು. ಅವರ ನಿಧನದಿಂದ ಕರ್ನಾಟಕಕ್ಕೆ ಬಹುದೊಡ್ಡ ಹಾನಿ ಮಾಡಿದೆ. ಜತೆಗೆ ಸಮಾಜಕ್ಕೆ ಹೆಚ್ಚಿನ ನೋವು ತರಿಸಿದೆ ಎಂದು ತಿಳಿಸಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿವೆ.

ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದು, ಹಲವು ಮುಖ್ಯಮಂತ್ರಿ ಗಳ ಸಂಪುಟದಲ್ಲಿ ಸಚಿವರಾಗಿದ್ದರು.

Editor

Leave a comment