ಕರುನಾಡು ಘರ್ಜನೆ ಸುದ್ದಿ ಮಾಹಲಿಂಗಪುರ ಉತ್ತರ ಕರ್ನಾಟಕದಲ್ಲಿ ಜಾನಪದ ಹಾಡುಗಳ ಮೂಲಕ ಖ್ಯಾತಿ ಗಳಿಸಿರುವ ಟ್ರೆಂಡಿಂಗ್ ಸ್ಟಾರ್ ಮ್ಯೂಸಿಕ್ ಮೈಲಾರಿ ಉರ್ಫ್ ಮೈಲಾರಿ ಕುಡಗುಂಟಿ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅವರ ವಿರುದ್ಧ ಪೊಕ್ಸೊ (POCSO) ಪ್ರಕರಣ ದಾಖಲಾಗಿದೆ.
ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ಒಟ್ಟು ನಾಲ್ವರ ವಿರುದ್ಧ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಹಾಲಿಂಗಪುರ ಪಟ್ಟಣದಲ್ಲಿ ನಡೆದ ಆರ್ಕೆಸ್ಟ್ರಾ ಕಾರ್ಯಕ್ರಮವೊಂದಕ್ಕೆ ಕರೆದೊಯ್ದು ಈ ಕೃತ್ಯ ಎಸಗಲಾಗಿದೆ ಎಂದು ಬಾಲಕಿಯ ಕುಟುಂಬಸ್ಥರು ದೂರು ನೀಡಿದ್ದಾರೆ.
ಈ ಕುರಿತು ಪ್ರಕರಣವು ಆರಂಭದಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಘಟನೆ ನಡೆದ ಸ್ಥಳ ಮಹಾಲಿಂಗಪುರವಾದ ಕಾರಣ, ಪ್ರಕರಣವನ್ನು ಮಹಾಲಿಂಗಪುರ ಠಾಣೆಗೆ ವರ್ಗಾಯಿಸಲಾಗಿದೆ. ಸದ್ಯ ಉತ್ತರ ಕರ್ನಾಟಕದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದ ಗಾಯಕನ ವಿರುದ್ಧ ಇಂತಹ ಗಂಭೀರ ಆರೋಪ ಕೇಳಿ ಬಂದದೆ. ಅಷ್ಟುಕೋ ಇದು ಬೇಕಿತ್ತ ಅಂತ ಜನರು ಚಿಮಾರಿ ಹಾಕ್ತಾ ಇದ್ದಾರೆ.