ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಮನರೇಗಾ ಯೋಜನೆ ಹೆಸರು ಬದಲಾವಣೆ ಮಾಡಿ ಕೇಂದ್ರ ಸರಕಾರ ಗಾಂಧಿ ಜಿ ವಿರುದ್ಧ ತನ ದ್ವೇಷ ಹೊರಾಹಕಿದಲ್ಲದೆ ಬಡ ಕಾರ್ಮಿಕರಿಗೆ ಅನ್ಯಾಯ ಮಾಡಿದೆ ಇದು ದ್ವೇಷರಾಜಕಾರಣ ದ ಭಗವಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ವಕೀಲರು ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ 20 ವರ್ಷಗಳಿಂದ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಜೀವನಕ್ಕೆ ಭದ್ರತೆ ಒದಗಿಸಿದೆ. ಆದರೆ ಈಗಿನ ಕೇಂದ್ರ ಸರ್ಕಾರ ನಿನ್ನೆ ನಡೆದ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರಿನಲ್ಲಿರುವ ಮಹಾತ್ಮಗಾಂಧಿ ಅವರ ಹೆಸರನ್ನು ತೆಗೆದುಹಾಕಿ ‘ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಯೋಜನೆ (ವಿಬಿ ಜಿ-ರಾಮ್-ಜಿ) ಎಂದು ಮರುನಾಮಕರಣ ಮಾಡಿ, ಮಹಾತ್ಮಗಾಂಧಿಯವರಿಗೆ ಅವಮಾನ ಮಾಡಿದೆ.
ಬಿಜಿಪಿ ಕೇಂದ್ರ ದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕಾರ್ಪೋರೇಟ್ ಪರ ವರ್ತಿಸುತ್ತಾ, ದುಡಿಯುವ ವರ್ಗಗಳನ್ನು ತುಳಿಯುತ್ತಾ ಬರುತ್ತಿದೆ, ಅದರ ಭಾಗವಾಗಿಯೇ ಈ ಯೋಜನೆಯ ಹೆಸರು ಬದಲಾವಣೆ ಮಾಡಿರುವುದು ಮಾತ್ರವಲ್ಲದೇ ಈ ಯೋಜನೆಗೆ ರಾಜ್ಯ ಸರ್ಕಾರಗಳು ಕೂಡಾ ಶೇ 40 ರಷ್ಟು ಕೂಲಿ ಪಾವತಿಸಬೇಕೆಂದು ಮಸೂದೆ ಮಂಡನೆ ಮಾಡಿರುವುದು ತೀವ್ರ ಖಂಡನೀಯವಾಗಿದೆ.
ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಜಿ.ಎಸ್.ಟಿ ಹೆಸರಿನಲ್ಲಿ ಕೇಂದ್ರ ಸರ್ಕಾರ ಇಡೀ ಹಣಕಾಸಿನ ವ್ಯವಸ್ಥೆಯನ್ನು ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡು ರಾಜ್ಯ ಸರ್ಕಾರಗಳಿಗೆ ಅನ್ಯಾಯವೆಸಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರಗಳು ಹಣಕಾಸಿನ ತೊಂದರೆ ಅನುಭವಿಸುತ್ತಿವೆ.ಈ ಬದಲಾವಣೆ ಯಿಂದ ಸುಮಾರು 1 ಕೋಟಿಗೂ ಅಧಿಕಾರ ಬಡ ಕಾರ್ಮಿಕರಿಗೆ ಅನ್ಯಾಯ ವಾಗುತ್ತದೆ.ಕೇಂದ್ರ ಸರ್ಕಾರದ ಈ ಧೋರಣೆ ಅಮಾನವೀಯವಾಗಿದೆವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕೇಂದ್ರ ಸರ್ಕಾರದ ಈ ನಡೆಗೆ ವಿರೋಧವ್ಯಕ್ತಪಡಿಸುತ್ತದೆ ಯಂದು ಅವರು ಹೇಳಿದರು