ಕರುನಾಡು ಘರ್ಜನೆ ಸುದ್ದಿ ಬಳ್ಳಾರಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿಯ ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಸೇರಿ ಮೂವರು ಪ್ರಾಣ ಬಿಟ್ಟಿದ್ದಾರೆ
ತೆಕ್ಕಲಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ