ಕರುನಾಡು ಘರ್ಜನೆ ಸುದ್ದಿ ಚಿತ್ರದುರ್ಗ ಬಳಿ ಇಂದು ನಸುಕಿನ ಜಾವ ನಡೆದ ಭೀಕರ ಅಪಘಾತದಲ್ಲಿ 17 ಜನ ಸಜೀವ ದಹನವಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ
ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಬಸ್ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದ್ದು ಡಿವೈಡರ್ ದಾಟಿ ಬಂದು ಡಿಕ್ಕಿ ಹೊಡೆದಿದೆ.
ಸದ್ಯದ ಮಾಹಿತಿ ಪ್ರಕಾರ 17 ಮಂದಿ ಸಾವನ್ನಪ್ಪಿರುವುದು ಖಚಿತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮೃತರೆಲ್ಲರೂ ಬಸ್ನಲ್ಲಿ ಪ್ರಯಾಣಿಸುತ್ತಿದ್ದವರೇ ಆಗಿದ್ದು, ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿದ್ದಾರೆ.