Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಪೈಯಾಜ್ ನನ್ನು ಎನ್ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಅಂಜುಮನ್ ಸಂಸ್ಥೆಯಿಂದ ಮನವಿ..!

ಕರುನಾಡು ಘರ್ಜನೆ ಸುದ್ದಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಗೈದ ಆರೋಪಿ ಪೈಯಾಜ್ ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಗಳ ವ್ಯಕ್ತವಾಗುತ್ತಿವೆ. ಈ ರೀತಿಯ ಕೃತ್ಯಗಳು ಮತ್ತೆ ನಡೆಯಬಾರದು ಎಂದರೆ ಇಂತಹ ರಕ್ಕಸರನ್ನು ನೇರವಾಗಿ ನೇಣಿಗೆ ಹಾಕುವ ಕಾನೂನು ಜಾರಿತೆ ತರಬೇಕೆಂಬ ಕೂಗುಗಳು…

ಕರುನಾಡು ಘರ್ಜನೆ ಸುದ್ದಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹತ್ಯೆಗೈದ ಆರೋಪಿ ಪೈಯಾಜ್ ಗುಂಡಿಕ್ಕಿ ಕೊಲ್ಲುವಂತೆ ಆಗ್ರಹಗಳ ವ್ಯಕ್ತವಾಗುತ್ತಿವೆ. ಈ ರೀತಿಯ ಕೃತ್ಯಗಳು ಮತ್ತೆ ನಡೆಯಬಾರದು ಎಂದರೆ ಇಂತಹ ರಕ್ಕಸರನ್ನು ನೇರವಾಗಿ ನೇಣಿಗೆ ಹಾಕುವ ಕಾನೂನು ಜಾರಿತೆ ತರಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ. ಇನ್ನು ಈ ಘಟನೆಯನ್ನು ಅಂಜುಮನ್ ಸಂಸ್ಥೆ ಸಹ ಖಂಡಿಸಿದೆ. ಹುಬ್ಬಳ್ಳಿಯಲ್ಲಿ  ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ  ಹತ್ಯೆಗೈದ ಆರೋಪಿ ಪೈಯಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ನಿನ್ನೆ(ಏಪ್ರಿಲ್ 18) ಎಕ್ಸಾಂ ಇದೆ ಅಂತ ಹೊಸ್ತಿಲು ದಾಟಿದ್ದ ಮಗಳು ಹೆಣವಾಗಿ ಮರಳಿದ್ದಾಳೆ. ರಕ್ಕಸನ ಅಟ್ಟಹಾಸಕ್ಕೆ ಜ್ಞಾನ ದೇಗುಲದಲ್ಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ. ಮಗಳ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಸಾರ್ವಜನಿಕರು ಆಕ್ರೋಶದ ಕಿಡಿ ಹೊತ್ತಿಸಿದೆ. ಹಿಂದೂಪರ ಸಂಘಟನೆಗಳು, ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಆರೋಪಿಯನ್ನು ಎನ್ಕೌಂಟರ್ ಮಾಡಬೇಕೆಂದು ಆಗ್ರಹಿಸುತ್ತಿವೆ.

ಇನ್ನು ಈ ಘಟನೆಯನ್ನು ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ಖಂಡಿಸಿದೆ. ಅಲ್ಲದೇ ಆರೋಪಿಯನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.ಇನ್ನು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅಂಜುಮನ್ ಸಂಸ್ಥೆ ಮುಖ್ಯಸ್ಥ ಅಲ್ತಾಫ್, ನೇಹಾ ಹತ್ಯೆಯನ್ನು ನಾವು ಖಂಡಿಸುತ್ತೇವೆ. ಆರೋಪಿ ಫಯಾಜ್ ನನ್ನು ನಮ್ಮ ಕೈಗೆ ಕೊಡಿ ಅವನ ರುಂಡ ಕತ್ತರಿಸಿ ಹುಬ್ಬಳ್ಳಿ ಬಾಗಿಲಿಗೆ ಹಾಕುತ್ತೇವೆ.

ಫಯಾ‌ಜ್‌ನನ್ನು ಎನ್‌ಕೌಂಟರ್ ಮಾಡುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ. ಭಾರತೀಯ ಜನತಾ ಪಕ್ಷದವರು ಇದರಲ್ಲಿ ರಾಜಕೀಯ ಮಾಡಬಾರದು. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದೇವೆ. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ನಲ್ಲಿ ಆರೋಪಿ ಎನ್ಕೌಂಟರ್ ಮಾಡಬೇಕು ಎಂದು ಹೇಳಿದರು.

Editor

Leave a comment