ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ಯಲ್ಲಾಪುರದಲ್ಲಿ ನಡೆದ ರಂಜಿತಾ ಹತ್ಯೆ ಸಾಕಷ್ಟು ದೊಡ್ಡ ವಿವಾದ ಸೃಷ್ಟಿ ಮಾಡಿದ್ದು ಹತ್ಯೆ ಮಾಡಿದ ರಫಿಕ್ ನನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ.
ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಶಾಸಕರು, ಈಗಾಗಲೇ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಂಜಿತಾ ಕೊಲೆ ಆಕ್ರೋಶಕ್ಕೆ ಕಾರಣವಾಗಿದ್ದು, ಮಹಿಳೆಯ ಹತ್ಯೆ ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾನುವಾರ ಯಲ್ಲಾಪುರ ಬಂದ್ಗೆ ಕರೆ ನೀಡಿದ್ದಾರೆ. ಜೊತೆಗೆ ಆರೋಪಿ ರಫೀಕ್ನನ್ನ ಆದಷ್ಟು ಬೇಗ ಬಂಧಿಸಿ ಆತನಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.