Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬಿ.ಜಿ ಅಣ್ಣಿಗೇರಿ ಗುರುಗಳ ಮತ್ತು ಸಿದ್ದಗಂಗಾ ಅಜ್ಜನವರ ಹೆಸರು ನಾಮಕರಣಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ

ಕರುನಾಡು ಘರ್ಜನೆ ಸುದ್ದಿ ಗದಗ 06: ನಗರದ ಗಂಗಾಪುರ ಪೇಟೆಯ ಮಾರ್ಗವಾಗಿ ಹೊಂಬಳ ರೋಡಿನಲ್ಲಿ ಮಾನವ ಚಾಲಿತ ರೈಲ್ವೆ ಗೇಟ್ ಸಂಖ್ಯೆ 32ರಲ್ಲಿ ಸುಮಾರು 8 ಎಂಟು ವರ್ಷಗಳಿಂದ ಪೂರ್ಣಗೊಳ್ಳದ ರೈಲ್ವೆ ಮೇಲ್ಸೇತುವೆಯ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆ. ಇದರಿಂದ ನಾಗರಿಕರಿಗೆ…

ಕರುನಾಡು ಘರ್ಜನೆ ಸುದ್ದಿ ಗದಗ 06: ನಗರದ ಗಂಗಾಪುರ ಪೇಟೆಯ ಮಾರ್ಗವಾಗಿ ಹೊಂಬಳ ರೋಡಿನಲ್ಲಿ ಮಾನವ ಚಾಲಿತ ರೈಲ್ವೆ ಗೇಟ್ ಸಂಖ್ಯೆ 32ರಲ್ಲಿ ಸುಮಾರು 8 ಎಂಟು ವರ್ಷಗಳಿಂದ ಪೂರ್ಣಗೊಳ್ಳದ ರೈಲ್ವೆ ಮೇಲ್ಸೇತುವೆಯ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದೆ. ಇದರಿಂದ ನಾಗರಿಕರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ.

ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ಧಿ ಪರ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಸನ್ಮಾನ್ಯ ಶ್ರೀ ಬಸವರಾಜ ಭೋಮಾಯಿ ಸಾಹೇಬರಿಗೆ ಮನವಿ ಪತ್ರ ಸಲ್ಲಿಸಿ, ರೈಲ್ವೆ ಮೇಲ್ಸೇತುವೆಯ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ದೇವರ ಸಮಾನರಾದ ಬಿ.ಜಿ.ಅಣ್ಣಿಗೇರಿ ಗುರುಗಳು ಗದಗ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನಲ್ಲಿ ಜನಿಸಿದ್ದರು ಮತ್ತು ಅವರು ಸಮಾಜದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯವನ್ನು ಪ್ರಚಾರಪಡಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಮತ್ತು ಪರಮಪೂಜ್ಯ ಶ್ರೀ ಲಿಂ. ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಗಳು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಮತ್ತು ಸಾಮಾಜಿಕ ಗುರುಗಳಾಗಿದ್ದರು. ಅವರು ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಹಾಗಾಗಿ ಗದಗ ನಗರದ ಗಂಗಿಮಡಿ ರೋಡ್ ಸವಿತಾ ಮಹರ್ಷಿ ವೃತ್ತ ಮಾರ್ಗವಾಗಿ ನರಗುಂದಕ್ಕೆ ತೆರಳುವ ಮಧ್ಯದಲ್ಲಿರುವ ರೈಲ್ವೆ ಮೇಲ್ಸೇತುವೆಗೆ ಬಿ.ಜಿ.ಅಣ್ಣಿಗೇರಿ ಗುರುಗಳ ಹೆಸರನ್ನು ಮತ್ತು ಗಂಗಾಪುರ ಪೇಟೆ ಮಾರ್ಗವಾಗಿ ಹೊಂಬಳಕ್ಕೆ ತೆರಳುವ ಮಧ್ಯದಲ್ಲಿ ಅಮೆಗತೆಯಲ್ಲಿ ಕಾಮಗಾರಿ ಸಾಗುತ್ತಿರುವ ರೈಲ್ವೆ ಮೇಲ್ಸೇತುವೆಗೆ ಪರಮಪೂಜ್ಯ ಶ್ರೀ ಲಿಂ. ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಹೊಂಬಳ ನಾಗ ಜನತಾ ಕಾಲೋನಿ ಅಭಿವೃದ್ಧಿಪರ ಸೇವಾ ಸಂಘದಿಂದ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಅಧ್ಯಕ್ಷರಾದ ಕೃಷ್ಣ ಎಚ್ ಹಡಪದ ಹಾಗೂ ಕಾರ್ಯಾಧ್ಯಕ್ಷರಾದ ಪರಶುರಾಮ ಅಣ್ಣಿಗೇರಿ ಹಾಗೂ ಸಂಘದ ಪ್ರಮುಖರೆಲ್ಲರೂ ಸೇರಿ ಮನವಿ ಪತ್ರ ಸಲ್ಲಿಸಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದ ಹಿರಿಯ ನಾಯಕರಾದ ಹನುಮಂತಪ್ಪ ರಾಂಪುರ ಯುವ ನಾಯಕರಾದ ವಿನಾಯಕ ರಾಯಚೂರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಅಧ್ಯಕ್ಷರುಗಳು ಸಹ ಉಪಸ್ಥಿತರಿದ್ದು ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ದಿ ಪರ ಸೇವಾ ಸಂಘದ ಕಾರ್ಯಕ್ಕೆ ಬೆಂಬಲಿಸಿದರು

– ಗದಗ್ ನಗರದ ಗಂಗಾಪುರ ಪೇಟೆಯ ಮಾರ್ಗವಾಗಿ ಹೊಂಬಾ ರೋಡಿನಲ್ಲಿ ರೈಲ್ವೆ ಮೇಲ್ಸೇತುವೆಯ ನಿರ್ಮಾಣ ಕಾರ್ಯ ಆಮೆಗತಿಯಲ್ಲಿ ಸಾಗಿದೆ.

– ರೈಲ್ವೆ ಮೇಲ್ಸೇತುವೆಗೆ ಪರಮಪೂಜ್ಯ ಶ್ರೀ ಲಿಂ. ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಆಗ್ರಹಿಸಲಾಗಿದೆ.

– ರೈಲ್ವೆ ಮೇಲ್ಸೇತುವೆಗೆ ದಿ. ಬಿ.ಜಿ.ಅಣ್ಣಿಗೇರಿ ಗುರುಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಬಯಸಲಾಗಿದೆ.

– ಹೊಂಬಳನಾಕಾ ಜನತಾ ಕಾಲೋನಿ ಅಭಿವೃದ್ಧಿ ಪರ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರ ನಿಯೋಗದಿಂದ ಮನವಿ ಪತ್ರ ಸಲ್ಲಿಸಿದ್ದಾರೆ.

Editor

Leave a comment