Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಹೊಸ ಪಡಿತರ ಚೀಟಿಗಾಗಿ ಸಲ್ಲಿಸಿದ ಅರ್ಜಿದಾರರು ಮಧ್ಯವರ್ತಿಗಳಿಗೆ ಹಣ ನೀಡದಿರಲು ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಅಶೋಕ ಮಂದಾಲಿ ಮನವಿ. 

ಕರುನಾಡು ಘರ್ಜುನೆ ಸುದ್ದಿ ಗದಗ: ತಾಲೂಕಿನಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಕಾಯುತ್ತಿರುವ ಅರ್ಜಿದಾರರಿಗೆ ಪಂಚನಾಮೆ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗ ಅನುಷ್ಠಾನ…

ಕರುನಾಡು ಘರ್ಜುನೆ ಸುದ್ದಿ ಗದಗ: ತಾಲೂಕಿನಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಕಾಯುತ್ತಿರುವ ಅರ್ಜಿದಾರರಿಗೆ ಪಂಚನಾಮೆ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಿ ಮೋಸ ಹೋಗಬಾರದು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2017ರಿಂದ 2025ರ ಅವಧಿಯಲ್ಲಿ ಹೊಸ ಪಡಿತರ ಚೀಟಿಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಾಗರಿಕರ ಮನೆಗೆ ಆಹಾರ ಮತ್ತು ನಾಗರಿಕ ಸರಬರಾಜು – ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡುತ್ತಿದ್ದಾರೆ. ಅರ್ಜಿದಾರರ ವಾಸಸ್ಥಳದ ಪರಿಶೀಲನೆ, ವಿಚಾರಣೆ ಹಾಗೂ ಪಂಚನಾಮೆ ನಡೆಸಿ, ಫಲಾನುಭವಿಗಳ ಭಾವಚಿತ್ರ ಮತ್ತು ಅಗತ್ಯ ಮಾಹಿತಿಯನ್ನು ಸ್ಥಳದಲ್ಲೇ ಸಂಗ್ರಹಿಸಲಾಗುತ್ತಿದೆ. ಇದು ಸರಕಾರದ ಅಧಿಕೃತ ಪ್ರಕ್ರಿಯೆಯಾಗಿದೆ.

ಮಧ್ಯವರ್ತಿಗಳ ಹಾವಳಿ ಬಗ್ಗೆ ಎಚ್ಚರ: ಪಡಿತರ ಚೀಟಿ ಮಂಜೂರು ಮಾಡಿಸಿಕೊಡುವುದಾಗಿ ನಂಬಿಸಿ ತಾಲೂಕಿನ ಕೆಲವು ಮಧ್ಯವರ್ತಿಗಳು, ದಲ್ಲಾಳಿಗಳು ಹಾಗೂ ಆನ್‌ಲೈನ್ ಅಂಗಡಿಯವರು ಫಲಾನುಭವಿಗಳಿಂದ 5 ಸಾವಿರ ರೂ.ದಿಂದ 7,500 ರೂಪಾಯಿ ವರೆಗೆ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕಂಡುಬಂದಿದೆ. ಪಡಿತರ ಚೀಟಿ ಪಡೆಯುವುದು ನಾಗರಿಕರ ಹಕ್ಕು, ಇದಕ್ಕಾಗಿ ಯಾರಿಗೂ ಒಂದು ರೂಪಾಯಿ ನೀಡುವ ಅಗತ್ಯವಿಲ್ಲ ಎಂದು ಅಶೋಕ ಮಂದಾಲಿ ಅವರು ಸ್ಪಷ್ಟಪಡಿಸಿದ್ದಾರೆ.

ದೂರು ನೀಡಲು ಕರೆ: ಒಂದು ವೇಳೆ ಯಾರಾದರೂ ಹಣದ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ಭಯಪಡದೆ ದೂರು ನೀಡಬಹುದು. ಗದಗ ನಗರದ ಮುಳಗುಂದ ನಾಕಾ ಬಳಿಯ ಕೆ.ಎಸ್.ಆರ್.ಟಿ.ಸಿ. ಡಿಪೊ ಎದುರಿಗೆ ಇರುವ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯನ್ನು ಇಲ್ಲವೇ ಮೊಬೈಲ್ ಸಂಖ್ಯೆ 9449446313 ಸಂಪರ್ಕಿಸಿ ದೂರು ಸಲ್ಲಿಸುವಂತೆ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆಗ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment