Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಚಿಟಗುಪ್ಪ l ಸಂಕ್ರಾಂತಿ ಹಬ್ಬಕ್ಕೆ ಮಗಳನ್ನುಕರೆಯಲು ಹೋದ ತಂದೆ ಶವವಾಗಿ ಮರಳಿದ.!

ಕರುನಾಡು ಘರ್ಜುನೆ ಸುದ್ದಿ ಸಂಕ್ರಾಂತಿ ಹಬ್ಬಕ್ಕೆ ಮಗಳನ್ನು ಕರೆಯಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಗಾಳಿಪಟ ದಾರದ ಕುತ್ತಿಗೆ ಸೀಳಿದ್ದರಿಂದ ತಂದೆ ಮೃತಪಟ್ಟ ದಾರುಣ ಘಟನೆ ಬೀದರ್ ನಲ್ಲಿ ಸಂಭವಿಸಿದೆ. ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಬೈಕ್ ನಲ್ಲಿ ಹೋಗುತ್ತಿದ್ದ…
Oplus_16908288

ಕರುನಾಡು ಘರ್ಜುನೆ ಸುದ್ದಿ ಸಂಕ್ರಾಂತಿ ಹಬ್ಬಕ್ಕೆ ಮಗಳನ್ನು ಕರೆಯಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಗಾಳಿಪಟ ದಾರದ ಕುತ್ತಿಗೆ ಸೀಳಿದ್ದರಿಂದ ತಂದೆ ಮೃತಪಟ್ಟ ದಾರುಣ ಘಟನೆ ಬೀದರ್ ನಲ್ಲಿ ಸಂಭವಿಸಿದೆ.

ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಬೈಕ್ ನಲ್ಲಿ ಹೋಗುತ್ತಿದ್ದ ಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ ಹೊಸಮನಿ (48) ಗಾಳಿಪಟ್ಟ ದಾರ ಕುತ್ತಿಗೆಗೆ ಸಿಲುಕಿ ಮೃತಪಟ್ಟಿದ್ದಾರೆ.

ಹುಮನಾಬಾದ್‌ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರೆಯಲು ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಾಂಜಾ ದಾರ ಕುತ್ತಿಗೆಗೆ ತಗುಲಿ ಕೊಯ್ದಿದೆ.

ಕುತ್ತಿಗೆ ಸೀಳಿ ರಕ್ತ ಹರಿಯುತ್ತಿದ್ದು, ಕೂಡಲೇ ಗುಂಡಪ್ಪ ಮಗಳಿಗೆ ಕರೆ ಮಾಡಿ ಸಹಾಯ ಪಡೆಯಲು ಯತ್ನಿಸಿದ್ದಾರೆ. ಆದರೆ ಗಾಳಿಪಟ ದಾರು ಕುತ್ತಿಗೆ ಆಳಕ್ಕೆ ಕೊಯ್ದಿದ್ದರಿಂದ ಅತೀವ ರಕ್ತಸ್ರಾವಕ್ಕೆ ಒಳಗಾಗಿದ್ದಾರೆ.

ಈ ವೇಳೆ ಇದೇ ದಾರಿಯಲ್ಲಿ ಬಂದ ವ್ಯಕ್ತಿಯೊಬ್ಬರು ಕುತ್ತಿಗೆಗೆ ಬಟ್ಟೆ ಕಟ್ಟಿ ರಕ್ತಸ್ರಾವ ತಡೆಯಲು ಯತ್ನಿಸಿದ್ದು, ಆಂಬುಲೆನ್ಸ್ಕ ಗೆ ಕರೆ ಮಾಡಿದ್ದಾರೆ. ಆದರೆ ಆಂಬುಲೆನ್ಸ್ ತಡವಾಗಿ ಬಂದಿದ್ದರಿಂದ ಗುಂಡಪ್ಪ ಸ್ಥಳದಲ್ಲೇ ಅಸುನೀಗಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಕ್ರಾಂತಿ ದಿನದಂದು ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಆದರೆ ಗಾಳಿಪಟ ಹಾರಿಸುವಾಗ ದಾರಕ್ಕೆ ಮಾಂಜಾ ಹಾಕುವುದು ಅಪಾಯಕಾರಿ ಎಂಬುದು ತಿಳಿದಿದ್ದರು ಅದನ್ನು ತಡೆಗಟ್ಟುವ ಪ್ರಯತ್ನಗಳು ಸಮರ್ಪಕವಾಗಿ ನಡೆಯುತ್ತಿಲ್ಲ.

ಆಂಬುಲೆನ್ಸ್ ತಡವಾಗಿ ಬಂದಿರುವುದು ಹಾಗೂ ಗಾಳಿಪಟ ಹಾರಿಸಲು ನೈಲಾನ್ ದಾರ ಹಾಗೂ ಮಾಂಜ ಬಳಕೆ ತಡೆಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ.

ಚಿಟಗುಪ್ಪ ತಾಲೂಕಿನಲ್ಲಿ ಸಂಕ್ರಾಂತಿ ಆಚರಣೆ ವೇಳೆ ಗಾಳಿಪಟಗಳನ್ನು ಹಾರಿಸುವುದು ರೂಢಿಯಲ್ಲಿದೆ. ಎರಡು ದಿನಗಳ ಓರ್ವ ಬಾಲಕನ ಕೈಗೆ ಗಾಳಿಪಟದ ದಾರ ಸಿಲುಕಿ ಗಂಭೀರ ಗಾಯಗೊಂಡಿದ್ದ. ಘಟನೆ ಬಳಿಕ ತಹಸೀಲ್ದಾರ್‌ ಮಂಜುನಾಥ ಪಾಂಚಾಳ ತಾಲೂಕಿನಾದ್ಯಂತ ಗಾಳಿಪಟ ಹಾರಿಸುವ ವೈರ್‌ ಮಾಂಜಾ ದಾರ ಮಾರಾಟ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿದ್ದರು.

Editor

Leave a comment