ಕರುನಾಡು ಘರ್ಜನೆ ಸುದ್ದಿ ಗದಗ : ಗದಗ ನಗರದ ಶ್ರೀ ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಆರ್.ಎಸ್.ಎಸ್ ದ ಅಂಗ ಸಂಸ್ಥೆಯಾದ ರಾಷ್ಟ್ರೋತ್ಥಾನ ಪರಿಷತ್ ನವರು ಕರ್ನಾಟಕ ಸರ್ಕಾರದ ಭಾಗವಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಸುಮಾರು ಐದುನೂರು ಅಂಗನವಾಡಿ ಶಿಕ್ಷಕಿಯರಿಗೆ ಸಹಮಿಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಬಿ.ಜೆ.ಪಿ ಯ ವಿಧಾನ ಪರಿಷತ್ ಸದಸ್ಯರಾದ ಸಂಕನೂರ ಅವರು ಉದ್ಘಾಟಿಸಿದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಮಾರು ಐದುನೂರು ಅಂಗನವಾಡಿ ಶಿಕ್ಷಕಿಯರು ಹಾಗೂ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರು.
ನಮ್ಮ ಪ್ರಶ್ನೆ ಇಲ್ಲಿ ಅಂಗನವಾಡಿ ಶಿಕ್ಷಕಿಯರಿಗೆ ಸರ್ಕಾರದ ವತಿಯಿಂದ ಅನೇಕ ತರಬೇತಿ ಶಿಬಿರಗಳು ಹಾಗೂ ಸರ್ಕಾರದ ಮಾಹಿತಿಯ ಕಾರ್ಯಾಗಾರಗಳು ಇಲ್ಲಿಯವರೆಗೂ ಸರ್ಕಾರದ ವತಿಯಿಂದಲೇ ನಡೆಯುತ್ತಿದ್ದವು ಹಾಗೂ ಅವು ಸರ್ಕಾರದ ವತಿಯಿಂದಲೇ ನಡೆಯಬೇಕು.ಇಲ್ಲಿ ಸರ್ಕಾರಕ್ಕೂ ಸಂಬಂಧ ಇಲ್ಲದ, ದೇಶದಲ್ಲೇ ನೊಂದಣಿಯಾಗದ ಸಂಘಟನೆಯಿಂದ ಸರ್ಕಾರಿ ನೌಕರರಿಗೆ ಈ *ಸಹಮಿಲನ ಕಾರ್ಯಕ್ರಮ* ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಉದ್ದೇಶ ಏನು ಇಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ನಡೆದಿದ್ದು ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಪರವಾನಿಗೆ ಇದೆಯಾ…? ಸ್ಥಳಿಯ ಶಾಸಕರು ಗಮನಕ್ಕೂ ಈ ಕಾರ್ಯಕ್ರಮದ ಕುರಿತು ಮಾಹಿತಿ ಇದೆಯಾ…? ಎಂಬುದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಸ್ಪಷ್ಟಪಡಿಸಬೇಕು.
ಈ ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ಧರಾಮಯ್ಯ ಅವರು ಆರ್.ಎಸ್.ಎಸ್.ನಮ್ಮ ಸೈದ್ದಾಂತಿಕ ವಿರೋಧಿ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಾರೆ ಆದರೆ ತಮ್ಮದೇ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನ ಅದೇ ಆರ್.ಎಸ್.ಎಸ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅಷ್ಟೇ ಅಲ್ಲದೆ ಹೆಸರಿಗಷ್ಟೇ ಸಹಮಿಲನ ಕಾರ್ಯಕ್ರಮ ಆದರೆ ಅವರ ಸಿದ್ಧಾಂತ ತತ್ವಗಳನ್ನು,ಹಿಂದುತ್ವ ವಿಚಾರಗಳನ್ನು ಇಲ್ಲಿ ಅಂಗನವಾಡಿ ಶಿಕ್ಷಕಿಯರಿಗೆ ತಲೆಗೆ ತುಂಬಿ ಅದನ್ನು ನೀವು ಪ್ರಚಾರ ಮಾಡಿ ಎಂದು ಸರ್ಕಾರಿ ಶಿಕ್ಷಕಿಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಗದಗ ಜಿಲ್ಲಾಧಿಕಾರಿಗಳ ಪರವಾನಿಗೆ ಇದೆಯೋ..? ಪರವಾನಿಗೆ ತೆಗೆದುಕೊಳ್ಳದೇ ಕಾನೂನು ಬಾಹಿರವಾಗಿ ಸರ್ಕಾರಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡ ಸಂಘಟನೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಗದಗ ದಲಿತ ಸಂಘಟನೆಗಳ ಒಕ್ಕೂಟದಿಂದ ಆಗ್ರಹಿಸುತ್ತೆವೆ.