Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l 16ನೇ ರಾಷ್ಟ್ರಿಯ ಮತದಾರರ ದಿನಾಚರಣೆ ನಿಮಿತ್ಯ ಸ್ವೀಪ್ ಜಾಥಾ ಹಾಗೂ ದಿನಾಚರಣೆ ಆಯೋಜನೆ.

ಕರುನಾಡು ಘರ್ಜುನೆ ಸುದ್ದಿ ಶಿರಹಟ್ಟಿ: ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ ಎಂದು ಗೌರವನ್ವಿತ ದಿವಾಣಿ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಸತೀಶ್ ಎಂ ಹೇಳಿದರು.…

ಕರುನಾಡು ಘರ್ಜುನೆ ಸುದ್ದಿ ಶಿರಹಟ್ಟಿ: ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಗಾರಿಕೆ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುತ್ತಿದೆ ಎಂದು ಗೌರವನ್ವಿತ ದಿವಾಣಿ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಸತೀಶ್ ಎಂ ಹೇಳಿದರು.

ಪಟ್ಟಣದ ದೇವರಾಜ್ ಅರಸು ಭವನ ಆಡೋಟೋರಿಯಂ ಹಾಲಿನಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2026ರ ರಾಷ್ಟ್ರೀಯ ಮತದಾರರ ದಿನದ ಘೋಷವಾಕ್ಯ *”ನನ್ನ ಭಾರತ, ನನ್ನ ಮತ – ಪ್ರಜಾಪ್ರಭುತ್ವದ ಹೃದಯದಲ್ಲಿರುವ ಭಾರತೀಯ ನಾಗರೀಕ”* (My India, My Vote – Citizen at the Heart of Indian Democracy) ಆಗಿದೆ. ದೇಶದ ಮತದಾರರಿಗೆ ಸಮರ್ಪಿತವಾಗಿರುವ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುವುದರ ಮೂಲಕ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಪ್ರೋತ್ಸಾಹಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಹೊಸ ಮತದಾರರನ್ನು ಅಭಿನಂದಿಸಿ ಮತದಾರರ ಗುರುತಿನ ಚೀಟಿ (EPIC Card)ಗಳನ್ನು ವಿತರಿಸಲಾಗುವುದು. ಅದರ ಅಂಗವಾಗಿ ಯುವಕರು, ವಿಶೇಷಚೇತನರು, ಮಹಿಳೆಯರು, ತೃತೀಯ ಲಿಂಗಿಗಳು ಹಾಗೂ ವಿಶೇಷವಾಗಿ ನೈಜವಾಗಿ ದುರ್ಬಲ ಬುಡಕಟ್ಟು ಜನಾಂಗದ ಮತದಾರರಿಗೆ ಮತದಾರರ ಗುರುತಿನ ಚೀಟಿಗಳನ್ನು ಸಾಂಕೇತಿಕವಾಗಿ ವಿತರಿಸಲಾಗುವುದು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಿರಹಟ್ಟಿ ತಹಸೀಲ್ದಾರ್ ಶ್ರೀ ಕೆ. ರಾಘವೇಂದ್ರ ರಾವು ಸಮಾರಂಭದಲ್ಲಿ ಭಾಗವಹಿಸುವ ಎಲ್ಲರಿಗೂ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಶ್ರೀ ರಾಮಣ್ಣ ದೊಡ್ಡಮನಿ, ಅಧ್ಯಕ್ಷರು ತಾಲೂಕು ಸ್ವೀಪ್ ಸಮಿತಿ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಶಿರಹಟ್ಟಿ ಮಾತನಾಡಿ ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆ ಮಾಡಲು ಇರುವ ವ್ಯವಸ್ಥೆಯೇ ಮತದಾನ. ಮತದಾನ ದೇಶದ ಪ್ರಜೆಗಳ ಪ್ರಮುಖ ಹಕ್ಕು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳುಹಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತು ಮಾಡುವ ನಾಯಕನನ್ನು ಚುನಾಯಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಎಂದರು. ಚುನಾವಣಾ ಆಯೋಗದ ನಿರ್ದೇಶನದಂತೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಪ್ರತಿಯೊಬ್ಬರೂ ಮತದಾನದ ಹಕ್ಕು ಚಲಾಯಿಸಬೇಕು ಎಂಬ ಸಂದೇಶದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಿಎಸ್ಐ ಶ್ರೀ ಈರಪ್ಪ ರಿತ್ತಿ, ಶ್ರೀ ಹನುಮರಡ್ಡಿ ವಂದ್ಲಿ, ಉಪನ್ಯಾಸಕರು ಡಬಾಲಿ ಪ ಪೂ ಕಾಲೇಜು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಾಲೂಕಿನ ಆಶಾ ಕಾರ್ಯಕರ್ತರು, ಅಂಗನವಾಡಿ ಮೇಲ್ವಿಚಾರಕರು ಮತ್ತು ಸಹಾಯಕರು, NRLM MBK ಹಾಗೂ LCRP, ವಿವಿಧ ತಾಲೂಕಿನ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

 

Editor

Leave a comment