Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಅಂಚೆ ಕಚೇರಿಗಳಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸ್ಪೀಡ್ ಪೋಸ್ಟ್ ಮತ್ತು ಇತರ ಪತ್ರ ಪಾರ್ಸೆಲ್‌ಗಳ ಬುಕ್ಕಿಂಗ್ ಅವಧಿ ವಿಸ್ತರಣೆ : ಅಂಚೆ ಅಧೀಕ್ಷಕ ಎಸ್.ಎಸ್.ಶಿರಹಟ್ಟಿ.

ಕರುನಾಡು ಘರ್ಜುನೆ ಸುದ್ದಿ ಗದಗ:ಅಂಚೆ ಇಲಾಖೆ ಗ್ರಾಹಕರಿಗೆ ಅನುಕೂಲ‌ ಕಲ್ಪಿಸುವ ಸಲುವಾಗಿ ಸ್ಪೀಡ್ ಪೋಸ್ಟ್ ಮತ್ತು ಇತರ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಭಾರತೀಯ…

ಕರುನಾಡು ಘರ್ಜುನೆ ಸುದ್ದಿ ಗದಗ:ಅಂಚೆ ಇಲಾಖೆ ಗ್ರಾಹಕರಿಗೆ ಅನುಕೂಲ‌ ಕಲ್ಪಿಸುವ ಸಲುವಾಗಿ ಸ್ಪೀಡ್ ಪೋಸ್ಟ್ ಮತ್ತು ಇತರ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಭಾರತೀಯ ಅಂಚೆ ಇಲಾಖೆಯ ವತಿಯಿಂದ ಎಲ್ಲಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲಾಗುತ್ತದೆ.

ಈ ವ್ಯವಸ್ಥೆಯಡಿ, ಕಾರ್ಯ ದಿನಗಳಲ್ಲಿ ಅಂಚೆ ಕಚೇರಿಗಳ ನಿಗದಿತ ಕಾರ್ಯಾವಧಿ ಮುಕ್ತಾಯಕ್ಕೆ ಮುಂಚಿತವಾಗಿ 30 ನಿಮಿಷಗಳವರೆಗೆ ಸ್ಪೀಡ್ ಪೋಸ್ಟ್, ಪಾರ್ಸೆಲ್ ಹಾಗೂ ಅಂತರರಾಷ್ಟ್ರೀಯ ಸ್ಪೀಡ್ ಪೋಸ್ಟ್ / ಪಾರ್ಸೆಲ್‌ಗಳನ್ನು ಬುಕ್ ಮಾಡಬಹುದಾಗಿದೆ. ಇದರಿಂದ ಕಚೇರಿ ಸಮಯದ ಅಂತ್ಯದಲ್ಲಿ ಅಂಚೆ ಕಚೇರಿಗೆ ಬರುವ ಗ್ರಾಹಕರಿಗೂ ತಮ್ಮ ಅಂಚೆ ವಸ್ತುಗಳನ್ನು ಸುಲಭವಾಗಿ ಬುಕ್ ಮಾಡುವ ಅವಕಾಶ ದೊರೆಯುತ್ತದೆ.

ಮನೆಯಿಂದ ಬುಕ್ಕಿಂಗ…
ಮನೆಯಲ್ಲಿಯೇ ಕುಳಿತು ಪತ್ರ / ಪಾರ್ಸೆಲ್‌ಗಳ ಬುಕ್ಕಿಂಗ್ ಸೌಲಭ್ಯ(Customer Self Service Portal)
ಇದಲ್ಲದೆ, ಸಾರ್ವಜನಿಕರ ಸೌಕರ್ಯಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್
(Customer Self Service Portal: https://app.indiapost.gov.in/customer-selfservice/login)ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರ್ಯಾಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಆನ್‌ಲೈನ್‌ನಲ್ಲೇ ಪಡೆಯಬಹುದು.

ಸಾರ್ವಜನಿಕರು ಈ ಡಿಜಿಟಲ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ.
ಅಂಚೆ ಮಾಹಿತಿಗೆ ಡಾಕ್ ಸೇವಾ ಅಪ್ಲಿಕೇಶನ್
ಡಾಕ್ ಸೇವಾ ಆಪ್ (DAK SEVA App)
ಗ್ರಾಹಕರಿಗೆ ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಪಡೆಯುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ “Dak Seva App” ಅನ್ನು ಬಿಡುಗಡೆ ಮಾಡಿದೆ. ಈ ಮೊಬೈಲ್ ಆಪ್ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರ್ಯಾಕಿಂಗ್, ದೂರು ನೋಂದಣಿ, ಸೇವಾ ಮಾಹಿತಿ ಸೇರಿದಂತೆ ವಿವಿಧ ಗ್ರಾಹಕ ಸೇವೆಗಳು ಮೊಬೈಲ್‌ನಲ್ಲೇ ಲಭ್ಯವಿರುತ್ತವೆ.
ಸಾರ್ವಜನಿಕರು ಈ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು ಬಳಸುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ.

ಡೌನ್‌ಲೋಡ್ ಮಾಡಲು ಅಗತ್ಯವಾದ QR ಕೋಡ್ India Post ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಸಾರ್ವಜನಿಕರು ಮೇಲ್ಕಂಡ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಹೆಚ್ಚಿನ ಮಾಹಿತಿಗಾಗಿ ತಮ್ಮ ಸಮೀಪದ ಇಲಾಖಾ ಅಂಚೆಕಚೇರಿಯನ್ನು ಸಂಪರ್ಕಿಸುವಂತೆ ಗದಗ ವಿಭಾಗೀಯ ಅಂಚೆ ಅಧೀಕ್ಷಕರಾದ ಎಸ್.ಎಸ್.ಶಿರಹಟ್ಟಿ ಪ್ರಕಟನೆ ಮೂಲಕ ತಿಳಿಸಿದ್ದಾರೆ.

Editor

Leave a comment