Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಲೋಕಾಯುಕ್ತ ಬಲೆಗೆ ಬಿದ್ದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಛೇರಯ ಇಬ್ಬರು ಸಿಬ್ಬಂದಿಗಳು..!

ಕರುನಾಡು ಘರ್ಜನೆ ಸುದ್ದಿ ಗದಗ: ಇಂತವರಿಗೆ  ಸರ್ಕಾರದಿಂದ ಕೈ ತುಂಬ ಸಂಬಳ ಕೊಟ್ಟು ಇವರಿಗೆ ಸರ್ಕಾರದ ಸೌಲಭ್ಯಗಳನ್ನು ಕೊಟ್ಟು, ಇವರ ಕೆಟ್ಟ ಚಾಳಿ ಬಿಡುವುದಿಲ್ಲ ಕಾಣುತ್ತದೆ. ಸರಕಾರದ ಉಚಿತ ಪೋಡಿಮುಕ್ತ ಯೋಜನೆಯಡಿ ನಡೆಯಬೇಕಿದ್ದ ಜಮೀನು ಕೆಲಸಕ್ಕೆ ಹಣದ ಬೇಡಿಕೆಯಿಟ್ಟು ಹಣ ಸ್ವೀಕರಿಸುತ್ತಿದ್ದ…

ಕರುನಾಡು ಘರ್ಜನೆ ಸುದ್ದಿ ಗದಗ: ಇಂತವರಿಗೆ  ಸರ್ಕಾರದಿಂದ ಕೈ ತುಂಬ ಸಂಬಳ ಕೊಟ್ಟು ಇವರಿಗೆ ಸರ್ಕಾರದ ಸೌಲಭ್ಯಗಳನ್ನು ಕೊಟ್ಟು, ಇವರ ಕೆಟ್ಟ ಚಾಳಿ ಬಿಡುವುದಿಲ್ಲ ಕಾಣುತ್ತದೆ. ಸರಕಾರದ ಉಚಿತ ಪೋಡಿಮುಕ್ತ ಯೋಜನೆಯಡಿ ನಡೆಯಬೇಕಿದ್ದ ಜಮೀನು ಕೆಲಸಕ್ಕೆ ಹಣದ ಬೇಡಿಕೆಯಿಟ್ಟು ಹಣ ಸ್ವೀಕರಿಸುತ್ತಿದ್ದ ಇಬ್ಬರು ಸಿಬ್ಬಂದಿ ಮಂಗಳವಾರ ಗದಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಮೋಜಣಿ ಡಾಟಾ ಎಂಟ್ರಿ ಆಪ ರೇಟರ್ ಕವಿತಾ ಚಿಕ್ಕಮಠ ಮತ್ತು ಹಣ ಪಡೆದ ಹೊರಗುತ್ತಿಗೆ ಸಿಬ್ಬಂದಿ ನಾಗೇಶ ಗಣಪ ಬಡಿಗೇರ ಬಂಧಿತ ಆರೋಪಿ ಗಳು. ಹರ್ಲಾಪುರ ಗ್ರಾಮದ ನಿವಾಸಿ ಗಣೇಶ ಅಂದಪ್ಪ ಮುಂಡರಗಿ ಎಂಬುವರು ತಾವು ಖರೀದಿಸಿದ್ದ 6 ಗುಂಟೆ ಜಮೀನಿನ ಪೋಡಿ ಕೆಲಸಕ್ಕಾಗಿ ಗದಗ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಅಲೆದಾಡುತ್ತಿದ್ದರು.

‘ಸರಕಾರದ ಯೋಜನೆಯಡಿ ಈ ಕೆಲಸ ಉಚಿತವಾಗಿ ನಡೆಯಬೇಕಿದ್ದರೂ ಡಾಟಾ ಎಂಟ್ರಿ ಆಪರೇಟರ್ ಕವಿತಾ ಅವರು ಮೊದಲು 3,000 ರೂ. ಹಾಗೂ ನಂತರ 2,500 ರೂ. ನೀಡುವಂತೆ ಪಟ್ಟು ಹಿಡಿದಿದ್ದರು. ಸತತ ಕಿರುಕುಳದಿಂದ ಬೇಸತ್ತ ಗಣೇಶ ಅವರು ಗದಗ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಮಂಗಳವಾರ ಮಧ್ಯಾಹ್ನ ಗಣೇಶ ಅವರು ಕಚೇರಿಗೆ ತೆರಳಿದಾಗ, ಕವಿತಾ ಅವರ ಸೂಚನೆಯಂತೆ ನಾಗೇಶ ಬಡಿಗೇರ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಎಸ್.ಎಸ್‌. ತೇಲಿ ನೇತೃತ್ವದ ತಂಡ ದಾಳಿ ನಡೆಸಿ, ಇಬ್ಬರನ್ನೂ ವಶಕ್ಕೆ ಪಡೆದಿದೆ. ಲೋಕಾಯುಕ್ತ ಎಸ್ಪಿಎಸ್.ಟಿ.ಸಿದ್ದಲಿಂಗಪ್ಪ ಮತ್ತು ಡಿವೈಎಸ್ಪಿ ವಿಜಯ ಬಿರಾದಾರ ಅವರ ಮಾರ್ಗದರ್ಶನದಲ್ಲಿ ಎಸ್.ಎಸ್. ತೇಲಿ ನೇತೃತ್ವದ ತಂಡ ಕಾರ್ಯಾಚರಣೆ ಯನ್ನು ಯಶಸ್ವಿಗೊಳಿ ಸಿದೆ. ಯಾವುದೇ ಸರಕಾರಿ ಕಚೇರಿಯಲ್ಲಿ ಕೆಲಸಕ್ಕಾಗಿ ಹಣದ ಬೇಡಿಕೆ ಇಟ್ಟಲ್ಲಿ ಸಾರ್ವಜನಿಕರು ಭಯ ಪಡದೆ ತಕ್ಷಣ ಲೋಕಾಯುಕ್ತ ಪೊಲೀಸರಿಗೆ ದೂರು ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ಮನವಿ ಮಾಡಿದ್ದಾರೆ.

Editor

Leave a comment