Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ ಮಕ್ಕಳ ವಿಷಯವಾರು ದುರ್ಬಲತೆಗಳನ್ನು ವಿಶ್ಲೇಷಿಸಿ : ಡಾ. ಈಶ್ವರ ಉಳ್ಳಾಗಡ್ಡಿ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 05 : ಮಕ್ಕಳ ವಿಷಯವಾರು ದುರ್ಬಲತೆಗಳನ್ನು ವಿಶ್ಲೇಷಿಸಿ, ಗುರಿ ನಿರ್ಧಿಷ್ಟ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದರು. ಗುರುವಾರ…

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 05 : ಮಕ್ಕಳ ವಿಷಯವಾರು ದುರ್ಬಲತೆಗಳನ್ನು ವಿಶ್ಲೇಷಿಸಿ, ಗುರಿ ನಿರ್ಧಿಷ್ಟ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದರು.

ಗುರುವಾರ ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್ ಸಿ ಫಲಿತಾಂಶ ಸುಧಾರಣೆ ಕುರಿತು ಕಾರ‍್ಯಾಗಾರ ಹಾಗೂ ಗದಗ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಗುಣಾತ್ಮಕ ಫಲಿತಾಂಶ ತರುವ ಉದ್ದೇಶದಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಶೇಕಡಾವಾರು ಹೆಚ್ಚಿಸುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗುರುತಿಸಿ, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಬೇಕು ಎಂದು ಸೂಚಿಸಿದರು.

ಶಾಲಾ ಮಟ್ಟದಲ್ಲಿ ನಿಯಮಿತ ಪರೀಕ್ಷೆಗಳು, ಮರುಪಠಣ ತರಗತಿಗಳು ಹಾಗೂ ಪೋಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಶಿಕ್ಷಕರು ಸಮಯ ಪಾಲನೆ, ಬದ್ಧತೆ ಮತ್ತು ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ಜಿಲ್ಲೆಯ ಪ್ರತಿಯೊಂದು ಶಾಲೆಯೂ ಫಲಿತಾಂಶ ಸುಧಾರಣೆಗೆ ಸಮಗ್ರ ಪ್ರಯತ್ನ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅಪರ ಆಯುಕ್ತರು ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್ ಎಸ್ ಬುರುಡಿ ಅವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಾಗಾರದ ಉದ್ದೇಶವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಅಪರ ಆಯುಕ್ತರ ಕಚೇರಿ ಶಾಲಾ ಶಿಕ್ಷಣ ಇಲಾಖೆ ( ಧಾರವಾಡ) ನಿರ್ದೇಶಕರಾದ ಈಶ್ವರ ನಾಯಕ, ಡಯಟ್ ಪ್ರಾಚರ‍್ಯ ಜಿ.ಎಂ.ಮುAದಿನಮನಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರುಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳು, ನೋಡಲ್ ಅಧಿಕಾರಿಗಳು ಹಾಜರಿದ್ದರು.

ಸಂವಾದದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯಶಿಕ್ಷಕರು ಉಪಸ್ಥಿತರಿದ್ದರು.

ಪ್ರಮುಖಾಂಶಗಳು :

ಗದಗದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ಮುಖ್ಯಶಿಕ್ಷಕರೊಂದಿಗೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಸಂವಾದ

• ಫಲಿತಾಂಶ ಹೆಚ್ಚಿಸುವುದು ಶಿಕ್ಷಕರ ಸಮೂಹ ಜವಾಬ್ದಾರಿ

• ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಮತ್ತು ರಿಮಿಡಿಯಲ್ ತರಗತಿಗಳ ಆಯೋಜನೆ,

• ವಿಷಯವಾರು ಗುರಿ ನಿಗದಿ ಮಾಡಿ ನಿಯಮಿತ ಅಭ್ಯಾಸ ಪರೀಕ್ಷೆ ನಡೆಸಲು ಸೂಚನೆ,

• ಉತ್ತರ ಪತ್ರಿಕೆ ವಿಶ್ಲೇಷಣೆ ಮೂಲಕ ವಿದ್ಯಾರ್ಥಿಗಳ ತಪುö್ಪ ಸರಿಗಳನ್ನು ಸರಿಪಡಿಸುವ ಕ್ರಮ,

• ಹಾಜರಾತಿ ಹೆಚ್ಚಿಸಲು ಪೋಷಕರೊಂದಿಗೆ ನಿರಂತರ ಸಂಪರ್ಕ,

• ಡಿಜಿಟಲ್ ಹಾಗೂ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳ ಪರಿಣಾಮಕಾರಿ ಬಳಕೆ,

• ಪ್ರತಿಯೊಂದು ಶಾಲೆಯೂ ಫಲಿತಾಂಶ ಆಧಾರಿತ ಕಾರ್ಯಯೋಜನೆ ರೂಪಿಸಲು ನಿರ್ದೇಶನ.

Editor

Leave a comment