ಕರುನಾಡು ಘರ್ಜನೆ ಸುದ್ದಿ ಗದಗ 09: ಸಹಕಾರ ಚಳವಳಿಯ ಮೂಲಕ ಉತ್ತರ ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ಚಿತ್ರಣವನ್ನೇ ಬದಲಿಸಿದ, ಗದಗ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ರೂವಾರಿ ದಿವಂಗತ ಕೆ.ಎಚ್. ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಗದಗ ಜಿಲ್ಲಾ ಸವಿತಾ ಸಮಾಜದಿಂದ ಜಿಲ್ಲಾಧ್ಯಕ್ಷರಾದ ಕೃಷ್ಣ ಎಚ್ ಹಡಪದವರು ಗಣ್ಯರೊಂದಿಗೆ ಸೇರಿ ಅವರಿಗೆ ಮಾಲಾರ್ಪಣೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಕುಮಾರ ರೆಡ್ಡಿ ಅವರು ಮಾತನಾಡಿ “ಕೆ.ಎಚ್. ಪಾಟೀಲರು ಕೇವಲ ಒಬ್ಬ ರಾಜಕಾರಣಿಯಲ್ಲ, ಅವರು ಗದಗಿನ ಶಕ್ತಿ. ಅಪ್ಪಟ ಜನಪರ ನಾಯಕರಾಗಿದ್ದ ಅವರು, ರೈತರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆಸಿದ್ದಾರೆ. ಗದಗಿನ ಕೃಷಿ, ನೀರಾವರಿ ಹಾಗೂ ಸಹಕಾರ ರಂಗಕ್ಕೆ ಅವರು ನೀಡಿದ ಕೊಡುಗೆ ಇಂದಿಗೂ ನಮಗೆ ದಾರಿದೀಪ,” ಎಂದು ಸ್ಮರಿಸಿದರು.
ಹಿರಿಯರಾದ ಹನುಮಂತಪ್ಪ ಕಕ್ಕೇರಿ ಮಾತನಾಡಿ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆ ಹಾಗೂ ಕೆ.ಎಚ್. ಪಾಟೀಲ ಸಹಕಾರಿ ಸಕ್ಕರೆ ಕಾರ್ಖಾನೆ ಸ್ಥಾಪನೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಉದ್ಯೋಗ ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು
ಸಾಮಾಜಿಕ ಕಾರ್ಯಕರ್ತರಾದ ಅಬ್ದುಲ್ ಮುನಾಫ ಮುಲ್ಲಾ ಮಾತನಾಡಿ ಗದಗನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವಲ್ಲಿ ಮತ್ತು ಜಿಲ್ಲೆಯ ಮೂಲಸೌಕರ್ಯಗಳನ್ನು ಬಲಪಡಿಸುವಲ್ಲಿ ಅವರ ಪಾತ್ರ ಅಮೋಘವಾದುದು ಎಂದು ಹೇಳಿದರು
ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರು ಮಾತನಾಡಿ ಸವಿತಾ ಸಮಾಜದಂತಹ ಸಣ್ಣ ಸಮುದಾಯಗಳ ಏಳಿಗೆಗೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರು ಸದಾ ಧ್ವನಿಯಾಗಿದ್ದರು.
ಅವರ ತತ್ತ್ವಗಳು ಮತ್ತು ಜನಪರ ಕಾಳಜಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಮಹಾನ್ ಚೇತನಕ್ಕೆ ಗದಗ ಜಿಲ್ಲಾ ಸವಿತಾ ಸಮಾಜವು ಶಿರಬಾಗಿ ನಮಿಸುತ್ತದೆ ಎಂದು ಸಮಾಜದ ಗೌರವ ವಂದನೆಗಳು ಸಲ್ಲಿಸಿ ಮಾತನಾಡಿದರು
ಈ ಸಂದರ್ಭದಲ್ಲಿ ದಿ. ಕೆಎಚ್ ಪಾಟೀಲರ ಅನೇಕ ಅಭಿಮಾನಿಗಳು ಉಪಸ್ಥಿತರಿದ್ದರು ಕೃಷ್ಣಾ ಎಚ್ ಹಡಪದ ಗದಗ ಜಿಲ್ಲಾ ಸವಿತಾ ಸಮಾಜ
9845650612
ಗದಗಿನ ಅಭಿವೃದ್ಧಿ ಹರಿಕಾರ ಕೆ.ಎಚ್. ಪಾಟೀಲರ ಪುಣ್ಯಸ್ಮರಣೆ: ಸವಿತಾ ಸಮಾಜದಿಂದ ಗೌರವ ನಮನ
ಕರುನಾಡು ಘರ್ಜನೆ ಸುದ್ದಿ ಗದಗ 09: ಸಹಕಾರ ಚಳವಳಿಯ ಮೂಲಕ ಉತ್ತರ ಕರ್ನಾಟಕದ ಆರ್ಥಿಕ ಮತ್ತು ಸಾಮಾಜಿಕ ಚಿತ್ರಣವನ್ನೇ ಬದಲಿಸಿದ, ಗದಗ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ರೂವಾರಿ ದಿವಂಗತ ಕೆ.ಎಚ್. ಪಾಟೀಲರ ಪುಣ್ಯಸ್ಮರಣೆಯ ಅಂಗವಾಗಿ ಗದಗ ಜಿಲ್ಲಾ ಸವಿತಾ ಸಮಾಜದಿಂದ ಜಿಲ್ಲಾಧ್ಯಕ್ಷರಾದ…