Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹೊಸಪೇಟೆ PWD ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

ಕರುನಾಡು ಘರ್ಜನೆ ಸುದ್ದಿ ಹೊಸಪೇಟೆ : ಕಾಮಗಾರಿ ಮುಗಿಸಿ ಬಿಲ್‌ಗಾಗಿ ಕಾಯುತ್ತಿದ್ದ ಗುತ್ತಿಗೆದಾರನಿಗೆ ಲಂಚದ ಬೇಡಿಕೆಯಿಟ್ಟಿದ್ದ ಲೋಕೋಪಯೋಗಿ ಇಲಾಖೆಯ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ (EE) ಹಾಗೂ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯೂಡಿ ಕಚೇರಿಯಲ್ಲಿ ದಾಳಿ ನಡೆದಿದೆ.…

ಕರುನಾಡು ಘರ್ಜನೆ ಸುದ್ದಿ ಹೊಸಪೇಟೆ : ಕಾಮಗಾರಿ ಮುಗಿಸಿ ಬಿಲ್‌ಗಾಗಿ ಕಾಯುತ್ತಿದ್ದ ಗುತ್ತಿಗೆದಾರನಿಗೆ ಲಂಚದ ಬೇಡಿಕೆಯಿಟ್ಟಿದ್ದ ಲೋಕೋಪಯೋಗಿ ಇಲಾಖೆಯ (PWD) ಎಕ್ಸಿಕ್ಯೂಟಿವ್ ಎಂಜಿನಿಯರ್ (EE) ಹಾಗೂ ಅಕೌಂಟೆಂಟ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯೂಡಿ ಕಚೇರಿಯಲ್ಲಿ ದಾಳಿ ನಡೆದಿದೆ.

ಹೂವಿನ ಹಡಗಲಿ ಮೂಲದ ಗುತ್ತಿಗೆದಾರ ಮಹೇಶ್ ಹಲಗೇರಿ ಎಂಬುವವರು ಲೋಕೋಪಯೋಗಿ ಇಲಾಖೆಯ ಕಾಮಗಾರಿಯೊಂದರ ಟೆಂಡರ್ ಪಡೆದು, ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಈ ಕಾಮಗಾರಿಗೆ ಸಂಬಂಧಿಸಿದ ಬಿಲ್ ಬಿಡುಗಡೆ ಮಾಡುವಂತೆ ಅವರು ಕಚೇರಿಗೆ ಅಲೆಯುತ್ತಿದ್ದರು.

ಆದರೆ, ಬಾಕಿ ಇರುವ ಬಿಲ್ ಮಾಡಿಕೊಡಲು ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಅವರು 1 ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು.

ಲಂಚ ನೀಡಲು ಇಚ್ಛಿಸದ ಮಹೇಶ್ ಹಲಗೇರಿ ಅವರು ವಿಜಯನಗರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಇಂದು ಹೊಸಪೇಟೆಯ PWD ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಜಾಲ ಬೀಸಿದ್ದರು.

ಗುತ್ತಿಗೆದಾರರಿಂದ 1 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು, ಇಇ ದೇವದಾಸ್ ಹಾಗೂ ಅಕೌಂಟೆಂಟ್ ಮಾರುತಿ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

Editor

Leave a comment