ಕರುನಾಡು ಘರ್ಜನೆ ಸುದ್ದಿ: ಗದಗ ಫೆಬ್ರುವರಿ 11 : ಜಿಲ್ಲೆಯಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಜನರಲ್ಲಿ ಭಯ, ಆತಂಕ ದೂರ ಮಾಡಿ, ಮಾನವೀಯ ರೀತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವುದು ನಮ್ಮ ಉದ್ದೇಶವಾಗಿದೆ. ಬೀದಿನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಮನ್ವಯದೊಂದಿಗೆ ಬೀದಿನಾಯಿ ಜನನ ನಿಯಂತ್ರಣ (Animal Birth Control ) ಕಾರ್ಯಕ್ರಮವನ್ನು ಸಂಬAಧಿತ ಅಧಿಕಾರಿಗಳು ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಸರಿಯಾಗಿ ಕಸದ ನಿರ್ವಹಣೆ ಆಗಬೇಕು. ಜಿಲ್ಲೆಯ ಮಾರುಕಟ್ಟೆ, ಹೋಟೆಲ್, ಮಾಂಸದAಗಡಿಗಳು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬೀಸಾಡದೇ ಮುಚ್ಚಿದ ಡಬ್ಬಿಗಳಲ್ಲಿ ಸಂಗ್ರಹಿಸಬೇಕು. ಈ ನಿಯಮ ಉಲ್ಲಂಘಿಸುವ ವಾಣಿಜ್ಯ ಸಂಸ್ಥೆಗಳ ವಿರುದ್ಧ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಬೀದಿ ನಾಯಿಗಳಿಂದ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ಅವುಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಬೀದಿ ನಾಯಿಗಳ ಆಶ್ರಯ ಕೇಂದ್ರಗಳನ್ನು ತೆರೆಯುವ ಕುರಿತು ಹಾಗೂ ಅವುಗಳ ಪೋಷಣೆ ಕುರಿತು ವಿಸ್ತೃತ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ಎಸ್ ನೀಲಗುಂದ, ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.