Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದಂತಹ ಅನುದಾನ ಸಮರ್ಪಕ ಬಳಕೆ ಸಚಿವ ಎಚ್.ಕೆ.ಪಾಟೀಲ ಸೂಚನೆ.

ಕರುನಾಡು ಘರ್ಜುನೆ ಸುದ್ದಿ ಗದಗ  ಫೆ.16: ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದಂತಹ ಅನುದಾನ ಸಮರ್ಪಕವಾಗಿ ಬಳಕೆ ಆಗಬೇಕು. ಈ ಅನುದಾನಡಿ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನಿಗಾವಹಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ,…

ಕರುನಾಡು ಘರ್ಜುನೆ ಸುದ್ದಿ ಗದಗ  ಫೆ.16: ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದಂತಹ ಅನುದಾನ ಸಮರ್ಪಕವಾಗಿ ಬಳಕೆ ಆಗಬೇಕು. ಈ ಅನುದಾನಡಿ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನಿಗಾವಹಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಹೇಳಿದರು.

 

ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ಸೋಮವಾರ (ಫೆ.16) ಜರುಗಿದ ಮುಖ್ಯಂಮತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದರು.

ನಗರೋತ್ಥಾನದಡಿ ಬಿಡುಗಡೆಯಾದಂತಹ ಅನುದಾನ ಹಾಗೂ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ‌ ಮಾಹಿತಿ ಪಡೆದ‌ ಸಚಿವರು ನಗರೋತ್ಥಾನದಡಿ‌ ಕೈಗೊಳ್ಳಲಾಗುವ ರಸ್ತೆ, ಚರಂಡಿ ಮುಂತಾದ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು.

ಗದಗ ವಿಧಾನ ಸಭಾ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಅಪೂರ್ಣವಾದಂತಹ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್,ಉಪ ಅರಣ್ಯ ಸಂರಕ್ಷಣಾಧಿಕಾರಿ‌ ಸಂತೋಷಕುಮಾರ, ಅಪರ‌ ಜಿಲ್ಲಾಧಿಕಾರಿ ಡಾ.ದುರಗೇಶ್.ಕೆ.ಆರ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್, ಶಾಲಾ‌ ಶಿಕ್ಷಣ‌ ಇಲಾಖೆ ಉಪನಿರ್ದೆಶಕರಾದ ಆರ್.ಎಸ್‌.ಬುರುಡಿ, ನಿರ್ಮಿತ ಕೇಂದ್ರ ಯೋಜನಾ ನಿರ್ದೆಶಕ ಗಂಗಾಧರ್ ಶಿರೋಳ, ಕ್ರೀಡಾ ಇಲಾಖೆ ಸಹಾಯಕ‌ ನಿರ್ದೇಶಕರಾದ ಶರಣು ಗೊಗೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ನಂದಾ ಹಣಬರಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಬಸವರಾಜ ಕೊಟೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Editor

Leave a comment