Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 26: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಸಿದ್ಧತಾ ಸಭೆಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ…

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 26: ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಕುರಿತು ಪೂರ್ವಸಿದ್ಧತಾ ಸಭೆಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಸಮರ್ಪಕವಾಗಿ, ಶಿಸ್ತಿನೊಂದಿಗೆ ಆಯೋಜಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀಧರ್ ಅವರು, ಜನತಾ ದರ್ಶನವು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಮಹತ್ವದ ವೇದಿಕೆ ಆಗಿದ್ದು, ಯಾವುದೇ ತೊಂದರೆ ಉಂಟಾಗದAತೆ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅರ್ಜಿದಾರರಿಗೂ ಸರಿಯಾದ ಮಾರ್ಗದರ್ಶನ ನೀಡಬೇಕು ಹಾಗೂ ಅವರ ಅರ್ಜಿಗಳನ್ನು ತಕ್ಷಣ ದಾಖಲಿಸಿ ಸಂಬAಧಿಸಿದ ಇಲಾಖೆಗೆ ರವಾನಿಸುವ ವ್ಯವಸ್ಥೆ ಇರಬೇಕು ಎಂದರು.

ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಬಾಕಿ ಅರ್ಜಿಗಳ ವಿವರಗಳನ್ನು ಪೂರ್ವಭಾವಿಯಾಗಿ ಪರಿಶೀಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ನೀಡುವ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಪಾರದರ್ಶಕವಾಗಿದ್ದು, ಸಮಯಬದ್ಧವಾಗಿ ಪೂರ್ಣಗೊಳ್ಳಬೇಕು ಎಂದು ಹೇಳಿದರು.

ಜನತಾದರ್ಶನ ಕಾರ್ಯಕ್ರಮವು ಜನರಲ್ಲಿ ಸರ್ಕಾರದ ಮೇಲೆ ವಿಶ್ವಾಸ ಹೆಚ್ಚಿಸುವ ಪ್ರಮುಖ ಅವಕಾಶವಾಗಿರುವುದರಿಂದ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಫೆಬ್ರುವರಿ 27 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜರುಗುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಸಭೆಯಲ್ಲಿ ಜನತಾ ದರ್ಶನ ಕುರಿತು ವಿವಿಧ ಇಲಾಖೆಗಳಿಂದ ಸ್ವೀಕೃತವಾದ ಅರ್ಜಿಗಳ ವಿವರ, ಕೈಗೊಂಡ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್., ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ತಹಶೀಲ್ದಾರರುಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Editor

Leave a comment