Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಮಾಸಿಕ ಸಭೆ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ನೀಡಲು ಸೂಚನೆ.

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 26: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷಿ÷್ಮ ಯೋಜನೆ, ಯುವನಿಧಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಶಕ್ತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗದಗ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

ಕರುನಾಡು ಘರ್ಜುನೆ ಸುದ್ದಿ ಗದಗ ಫೆಬ್ರುವರಿ 26: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷಿ÷್ಮ ಯೋಜನೆ, ಯುವನಿಧಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಶಕ್ತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಗದಗ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ಅಶೋಕ್ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಫೆ. 26) ನಡೆದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು, ಗದಗ ತಾಲೂಕಿನ ಗೃಹಲಕ್ಷಿ÷್ಮ ಯೋಜನೆ ಅಡಿಯಲ್ಲಿ ಅಕ್ಟೋಬರ್‌ನಿಂದ ನವೆಂಬರ್ 2025ರವರೆಗೆ 79605 ಅರ್ಜಿಗಳು ನೊಂದಣಿಯಾಗಿದ್ದು, 79179 ಫಲಾನುಭವಿಗಳಿ ಗೆ ಒಟ್ಟು 31.66 ಕೋಟಿ ರೂ. ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ತಿಳಿಸಿದರು. ಬಾಕಿ ಇರುವ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ ಅರ್ಹರಿಗೆ ಸಕಾಲದಲ್ಲಿ ಹಣ ಬಿಡುಗಡೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವನಿಧಿ ಯೋಜನೆಯಡಿಯಲ್ಲಿ ಡಿಸೆಂಬರ್ 2025ರವರೆಗೆ 2,594 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, 1,081 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ. ಉಳಿದ 1,513 ಅಭ್ಯರ್ಥಿಗಳು ಯೋಜನೆಯ ಷರತ್ತುಗಳ ಪ್ರಕಾರ ಹಂತ ಹಂತವಾಗಿ ಅರ್ಹರಾಗಲಿದ್ದಾರೆ ಎಂದು ವಿವರಿಸಿದರು. ನೋಂದಾಯಿತ ಯುವಕರಿಗೆ ಮಾರ್ಗದರ್ಶನ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಗದಗ ಗ್ರಾಮೀಣ ಭಾಗದಲ್ಲಿ ಜನವರಿ 2026ರವರೆಗೆ 1,80,659 ಸದಸ್ಯರಿಗೆ ಒಟ್ಟು 7,405.80 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಗದಗ ನಗರ ಭಾಗದಲ್ಲಿ 1,33,542 ಸದಸ್ಯರಿಗೆ 5,240.95 ಕ್ವಿಂಟಲ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಯಾವುದೇ ಅರ್ಹರು ಸೌಲಭ್ಯದಿಂದ ವಂಚಿತರಾಗದAತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.

ಗೃಹಜ್ಯೋತಿ ಯೋಜನೆಗೆ ಸಂಬAಧಿಸಿದAತೆ ಗದಗ ಗ್ರಾಮೀಣ ಭಾಗದಲ್ಲಿ 53,122 ಸ್ಥಾವರಗಳು ಅರ್ಹರಾಗಿದ್ದು, 52,951 ಸ್ಥಾವರಗಳು ನೋಂದಣಿಯಾಗಿವೆ. ಉಳಿದ ಅರ್ಹ ಗ್ರಾಹಕರನ್ನೂ ಶೀಘ್ರ ನೋಂದಣಿ ಮಾಡಿಸಿ ಯೋಜನೆಯ ಸದುಪಯೋಗ ಪಡೆಯುವಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಶಕ್ತಿ ಯೋಜನೆ ಪ್ರಗತಿ ಕುರಿತು ವಿವರಿಸಿ, ಗದಗ ಘಟಕದಲ್ಲಿ 11-06-2023ರಿಂದ 24-02-2026ರವರೆಗೆ 2.85 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿದ್ದು, ?89.23 ಕೋಟಿ ಮೌಲ್ಯದ ಉಚಿತ ಟಿಕೆಟ್ ವಿತರಿಸಲಾಗಿದೆ. ಬೆಟಗೇರಿ ಘಟಕದಲ್ಲಿ 1.33 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, 92.63 ಕೋಟಿ ಮೌಲ್ಯದ ಟಿಕೆಟ್ ವಿತರಣೆಗೊಂಡಿದೆ ಎಂದು ತಿಳಿಸಿದರು. ಯೋಜನೆಯ ಲಾಭ ಗ್ರಾಮೀಣ ಪ್ರದೇಶಗಳಿಗೂ ಸಮರ್ಪಕವಾಗಿ ತಲುಪುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಈಶ್ವರ ಹುಣಿಸಿಕಟ್ಟಿ, ಶರೀಫ ಬಿಳೆಎಲಿ, ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಸದಸ್ಯರುಗಳಾದ ಶ್ರೀಮತಿ ಸಾವಿತ್ರಿ ಹೂಗಾರ, ಸಂಗು ಕರೆಕಲಮಟ್ಟಿ, ಸಂಗಮೇಶ ಎಂ. ಹಾದಿಮನಿ, ರಮೇಶ್ ಹೊನ್ನಿಕಾಯ್ಕರ, ದೇವರಡ್ಡಿ ಬಿ. ತಿರ್ಲಾಪುರ, ಗಣೇಶ್ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್. ಬಾರಕೇರ, ಭಾಷಾ ಮಲ್ಲಸಮುದ್ರ ಹಾಗೂ ಮಲ್ಲಯ್ಯ ಕೊರವನವರ ಉಪಸ್ಥಿತರಿದ್ದರು

Editor

Leave a comment