Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

೨೯ನೇ ವಾರ್ಡ್ನಲ್ಲಿ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರವಾಗಿ ಸಚಿವ ಎಚ್.ಕೆ. ಪಾಟೀಲ ಪ್ರಚಾರ

ಕರುನಾಡು ಘರ್ಜನೆ ಸುದ್ದಿ : ಗದಗ-ಬೆಟಗೇರಿ ಅವಳಿ ನಗರದ ರಾಜೀವ್ ಗಾಂಧಿ ೨೯ನೇ  ನಗರವು ಒಂದು ಮಿನಿ ಇಂಡಿಯಾ ಇದ್ದಂತೆ. ಇಲ್ಲಿ ಎಲ್ಲ ಜಾತಿ, ಜನಾಂಗ, ಶ್ರೀಮಂತ, ಬಡವರು ಸೇರಿಕೊಂಡು ಆತ್ಮೀಯತೆಯಿಂದ ಭ್ರಾತೃತ್ವ ಭಾವನೆಗಳನ್ನು ಹೊಂದಿದ ನಗರವಾಗಿದೆ ಎಂದು ಕಾನೂನು, ಪ್ರವಾಸೋದ್ಯಮ…

ಕರುನಾಡು ಘರ್ಜನೆ ಸುದ್ದಿ : ಗದಗ-ಬೆಟಗೇರಿ ಅವಳಿ ನಗರದ ರಾಜೀವ್ ಗಾಂಧಿ ೨೯ನೇ  ನಗರವು ಒಂದು ಮಿನಿ ಇಂಡಿಯಾ ಇದ್ದಂತೆ. ಇಲ್ಲಿ ಎಲ್ಲ ಜಾತಿ, ಜನಾಂಗ, ಶ್ರೀಮಂತ, ಬಡವರು ಸೇರಿಕೊಂಡು ಆತ್ಮೀಯತೆಯಿಂದ ಭ್ರಾತೃತ್ವ ಭಾವನೆಗಳನ್ನು ಹೊಂದಿದ ನಗರವಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ ೨೯ನೇ ವಾರ್ಡಿನ ರಾಜೀವ್ ಗಾಂಧೀ ನಗರದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಗದಗ-ಬೆಟಗೇರಿ ಅವಳಿ ನಗರದಲ್ಲಿ ಎಲ್ಲ ವಾರ್ಡ್ಗಳಿಗಿಂತ ಅಭಿವೃದ್ಧಿಯಲ್ಲಿ ಮುಂದಿದೆ. ಅತೀ ಹೆಚ್ಚಿನ ಅನುದಾನ ನೀಡಲಾಗಿದೆ. ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಮೆಚ್ಚಿಕೊಳ್ಳುತ್ತೀರಿ, ಅಪ್ಪಿಕೊಳ್ಳುತ್ತೀರಿ, ಆದರೆ ಮತ ಹಾಕುವಲ್ಲಿ ಹಿಂದೆ ಬೀಳುತ್ತೀರಿ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಣ್ಣು ಮಾಡುತ್ತೀರಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ೫೭ ಮತಗಳನ್ನು ಕಡಿಮೆ ನೀಡಿದ್ದೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜೀವ್ ಗಾಂಧೀ ನಗರದಲ್ಲಿ ಒಟ್ಟಾರೆ ೬,೫೦೦ ಮತಗಳಿದ್ದು, ೫,೦೦೦ ಆಸುಪಾಸಿನಲ್ಲಿ ಪೋಲಿಂಗ್ ಆದರೂ ಕನಿಷ್ಠ ೩,೦೦೦ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿಗೆ ಹಾಕಿಸಲು ಪಣತೊಡಬೇಖು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅಧಿಕ ಮತಗಳನ್ನು ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ದಲ್ಲಾಳಿ, ಮಧ್ಯವರ್ತಿಗಳ ಸಹಾಯವಿಲ್ಲದೇ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ೧೦೦ಕ್ಕೆ ೯೯ ಜನರಿಗೆ ಯೋಜನೆಗಳನ್ನು ಮುಟ್ಟಿಸುವ ಮೂಲಕ ಬಡವರ ಆರ್ಥಿಕ ಸ್ಥಿತಿಯನ್ನು ಮೇಲೇತ್ತುವ ಕೆಲಸ ಮಾಡಲಾಗುತ್ತಿದೆ ಎಂದರು.

ಬಡವರ ಬದುಕು ಇನ್ನೂ ಎತ್ತರಕ್ಕೆ ಹೋಗಬೇಕು. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ಒಂದು ಲಕ್ಷ, ನಿರುದ್ಯೋಗಿ ಯುವಕರಿಗೆ ೧ ಲಕ್ಷ ರೂ. ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿ, ಕಾಂಗ್ರೆಸ್ ಯಾವಾಗ ಅಧಿಕಾರಕ್ಕೆ ಬಂದಿದೆ. ಅಂದು ಬಡವರು, ಅವಕಾಶ ವಂಚಿತರ, ಮಹಿಳೆಯರ ಕಲ್ಯಾಣ ಕೆಲಸಗಳಿಗೆ ಶ್ರಮ ವಹಿಸಿದೆ. ಚುನಾವಣೆ ಬಂದಾಗ ಎಲ್ಲರೂ ವಿಚಾರ ಮಾಡಿ ಮತದಾನ ಮಾಡಬೇಕು. ಶೈಕ್ಷಣಿಕ, ರಾಜಕೀಯ, ಉದ್ಯೋಗ ಮೀಸಲಾತಿಯಿಂದ ವಂಚಿತರಾದರು ಗಟ್ಟಿಯಾಗಿ ನಿಂತು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ, ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

೨೯ನೇ ವಾರ್ಡಿನ ಸದಸ್ಯ, ನಗರಸಭೆ ವಿರೋಧ ಪಕ್ಷದ ನಾಯಕ ಎಲ್.ಡಿ. ಚಂದಾವರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಮುಖಂಡರಾದ ಅಯ್ಯಪ್ಪ ನಾಯ್ಕರ, ಚನ್ನಬಸಪ್ಪ ಅಕ್ಕಿ, ಪರಶುರಾಮ ಪೂಜಾರ, ಹನಮಂತಪ್ಪ ವಿಭೂತಿ, ಇಮಾಮಸಾಬ್ ಕಲೆಗಾರ, ನಗರಸಭೆ ನಾಮನಿರ್ದೇಶಿತ ಸದಸ್ಯ ದುರಗೇಶ ವಿಭೂತಿ, ಮೋಹನ, ಇಮಾಮಸಾಬ್ ಬೋದ್ಲೇಖಾನ್ ಸೇರಿ ಹಲವರು ಇದ್ದರು.

Editor

4 thoughts

  1. ಕರುನಾಡು ಸಿಂಹ ಘರ್ಜನೆ. ಅಸತ್ಯದ ವಿರುದ್ಧ ಬ್ರಷ್ಟ ರ ವಿರುದ್ಧ ಸತ್ಯ ವೆಂಬ ಲೆಕ್ಕಣೀ ಇಂದ ಜಗತ್ ಜಾಹೀರ ಬರೆಯುವ ಮೂಲಕ ಜಗಮೆಚ್ಚುಗೆ ಪಡೆದ
    ಪತ್ರಿಕೆ

Leave a comment