ಕರುನಾಡು ಘರ್ಜುನೆ ಸುದ್ದಿ
“ಕೃಷಿ ಕ್ಷೇತ್ರದ ಅಭಿವೃದ್ಧಿ”
* ಉತ್ಪಾದನೋತ್ತರ ಕೃಷಿ ಚಟುವಟಿಕೆಗಳ ಬಲವರ್ಧನೆಯ ಮೂಲಕ ರೈತರ ಆದಾಯ ವೃದ್ಧಿಗಾಗಿ ರೂ.100 ಕೋಟಿ ವೆಚ್ಚದಲ್ಲಿ ಮುಂದಿನ 3 ವರ್ಷಗಳಲ್ಲಿ “ಮುಖ್ಯಮಂತ್ರಿ ಕೃಷಿ ವಿಸ್ತಾರ” ಯೋಜನೆಯ ಅನುಷ್ಠಾನ
* ಪರಿಸರ ಸ್ನೇಹಿ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮುಂದಿನ 3 ವರ್ಷಗಳಲ್ಲಿ “ವಸುಧಾಮೃತ” ಕಾರ್ಯಕ್ರಮದ ಜಾರಿ
* ಬೆಳೆಗಳಿಗೆ ಕೀಟ ಹಾಗೂ ರೋಗಗಳಿಂದ ರಕ್ಷಣೆ, ಜೈವಿಕ ಕೀಟನಾಶಕಗಳ ಬಳಕೆ ಹಾಗೂ ಸುರಕ್ಷಿತ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರಿಗೆ ಸಕಾಲದಲ್ಲಿ ಒದಗಿಸಲು ಮುಂದಿನ 3 ವರ್ಷಗಳಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ”
ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ
ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ – ಕೀಟ ನಿಯಂತ್ರಣ ಕ್ರಮಗಳ ಜಾರಿ
ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ
ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ರೇಷ್ಮೆ ವಲಯದ ಅಭಿವೃದ್ಧಿ”
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚ 20 ರೂ.ಗೆ ಹೆಚ್ಚಳ
ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ
ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಹೈನುಗಾರಿಕೆ ವಲಯದ ಅಭಿವೃದ್ಧಿ”
* 2026-27 ನೇ ಸಾಲಿನಲ್ಲಿ ನಬಾರ್ಡ್ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳ ನಿರ್ಮಾಣ
ರೂ.10 ಕೋಟಿ ವೆಚ್ಚದಲ್ಲಿ 15 ತಾಲೂಕು ಪಶು ಆಸ್ಪತ್ರೆಗಳು ಪಾಲಿಕ್ಲಿನಿಕ್ಗಳಾಗಿ ಮೇಲ್ದರ್ಜೆಗೆ ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪನೆ
ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರಗಳ ಆರಂಭ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಮೀನುಗಾರಿಕೆ ವಲಯದ ಅಭಿವೃದ್ಧಿ”
ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳ
ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪನೆ
ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಸಹಕಾರಿ ವಲಯದ ಅಭಿವೃದ್ಧಿ”
ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ
ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ವಿವಿಧ ಸೇವೆಗಳನ್ನು (ಕಾಯ್ದೆಗಳು) ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್ಲೈನ್ನಲ್ಲಿ ನಿರ್ವಹಿಸಲು ಕ್ರಮ
ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್) ಮತ್ತು ಹುಬ್ಬಳ್ಳಿ (ಕಾಟನ್ ಮಾರ್ಕೆಟ್) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು 10 ಕೋಟಿ ರೂ. ವೆಚ್ಚದಲ್ಲಿ ERP (Enterprise Resource Planning) ವ್ಯವಸ್ಥೆ ಜಾರಿ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಸಣ್ಣ ನೀರಾವರಿ ಕ್ಷೇತ್ರಕ್ಕೆ ಆದ್ಯತೆ”
ರೂ.237 ಕೋಟಿ ಅಂದಾಜು ವೆಚ್ಚದಲ್ಲಿ ಹೆಬ್ಬಾಳ – ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿ ಕೆರೆಯಿಂದ ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಅನುಷ್ಠಾನ
ರೂ.140 ಕೋಟಿ ಅಂದಾಜು ಮೊತ್ತದಲ್ಲಿ ಹೆಚ್.ಎನ್ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯ ಅನುಷ್ಠಾನ
ರೂ.650 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್ಡಿ ನೀರನ್ನು ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 41 ಕೆರೆಗಳನ್ನು ತುಂಬಿಸುವ ಯೋಜನೆಯ ಅನುಷ್ಠಾನ
ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಆಧುನೀಕರಣ, ಅಣೆಕಟ್ಟು, ಪಿಕ್-ಅಪ್ & ಚೆಕ್ ಡ್ಯಾಂ ನಿರ್ಮಾಣ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ನೀರಾವರಿ ವಲಯದ ಅಭಿವೃದ್ಧಿ”
ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ. ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು.
ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನ.
ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ – ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ
ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ ರೂ. 8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾನ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಶಿಕ್ಷಣ ಕ್ಷೇತ್ರಕ್ಕೆ ಪ್ರಾತಿನಿಧ್ಯ”
ಮುಂದಿನ 3 ವರ್ಷಗಳಲ್ಲಿ ರೂ.3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು
ಸರ್ಕಾರಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ ರೂ.565 ಕೋಟಿ, ಶೌಚಾಲಯ ನಿರ್ಮಾಣಕ್ಕಾಗಿ ರೂ.75 ಕೋಟಿ ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು ರೂ.25 ಕೋಟಿ ಅನುದಾನ ಹಂಚಿಕೆ
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಶಿಕ್ಷಣ ಕ್ಷೇತ್ರಕ್ಕೆ ಪ್ರಾತಿನಿಧ್ಯ”
2026-27 ಸಾಲಿನಲ್ಲಿ ಶಾಲಾ – ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿಗೆ ಕ್ರಮ
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ
ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಗೆ ನಿಷೇಧ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಒತ್ತು”
ರೂ.2,500 ಕೋಟಿ ವೆಚ್ಚದಲ್ಲಿ ‘ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ’ ಅನುಷ್ಠಾನ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯ ಪ್ರೋತ್ಸಾಹಕ್ಕಾಗಿ 9 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ
ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ.
ರಾಜ್ಯದ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ರೂ.31 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ ವ್ಯವಸ್ಥೆ ನಿರ್ಮಾಣ.
ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ಆರೋಗ್ಯ ಕ್ಷೇತ್ರಕ್ಕೆ ಪ್ರಾಶಸ್ತ್ಯ”
* ರೂ.900 ಕೋಟಿ ಅನುದಾನದಡಿ ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿ
ರೂ. 45 ಕೋಟಿ ಅನುದಾನದಡಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೆ
•ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್ಗಳನ್ನು ನೀಡಲಾಗುವುದು.
•ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ.
ಕರ್ನಾಟಕ ಬಜೆಟ್ 2026-27
“ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ”
“ವೈದ್ಯಕೀಯ ಶಿಕ್ಷಣಕ್ಕೆ ಮಹತ್ವ”
* ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನ ಮೀಸಲು
* ರೂ.180 ಕೋಟಿ ವೆಚ್ಚದಲ್ಲಿ ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೆ
* ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ
*ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ‘ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ.